Sports
ಟೀಮ್ ಇಂಡಿಯಾದಿಂದ ಬ್ಯಾನ್ ಆಗ್ತಾರಾ ಮೊಹಮ್ಮದ್ ಶಮಿ!?
Published
2 weeks agoon
By
NEWS DESK4ಮಂಗಳೂರು/ಮುಂಬೈ : ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಮೊಹಮ್ಮದ್ ಶಮಿ ಎಂದರೆ ಸಾಕು ಎದುರಾಳಿ ಬ್ಯಾಟ್ಸ್ ಮ್ಯಾನ್ ನಡುಗಿಬಿಡುತ್ತಾನೆ. ಅವರು ಬೌಲಿಂಗ್ ನಲ್ಲಿ ಮಾಡುವ ಮೋಡಿ ಎಲ್ಲರಿಗೂ ಚಿರಪರಿಚಿತ. ಆದರೆ 2023ರ ಏಕದಿನ ವಿಶ್ವಕಪ್ ಬಳಿಕ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಇತ್ತೀಚೆಗೆ ಗಾ*ಯದಿಂದ ಚೇತರಿಸಿಕೊಂಡು ರಣಜಿ ಟೂರ್ನಿಯ ಮೂಲಕ ಭರ್ಜರಿ ಕಂಬ್ಯಾಕ್ ಮಾಡಿ, ಮೊದಲ ಪಂದ್ಯದಲ್ಲೇ 7 ವಿಕೆಟ್ ಪಡೆದುಬಂಗಾಳ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಈಗ ಶಮಿ ವಿರುದ್ದ ಗಂಭೀ*ರ ಆರೋಪ ಕೇಳಿಬಂದಿದೆ. ಅದುವೇ ವಯಸ್ಸು ಮರೆಮಾಚಿದ ಆರೋಪ.
ಹೌದು, ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೃಷ್ಣ ಮೋಹನ್ ಎಂಬವರು, ಮೊಹಮ್ಮದ್ ಶಮಿ ತಮ್ಮ ವಯಸ್ಸು ಮರೆಮಾಚಿದ್ದಾರೆ ಎಂದು ಗಂಭೀ*ರ ಆರೋಪ ಮಾಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಮೊಹಮ್ಮದ್ ಶಮಿ ಅವರ ಡ್ರೈವಿಂಗ್ ಲೈಸನ್ಸ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಈ ಮನವಿಯನ್ನು ಬಿಸಿಸಿಐ ಪುರಸ್ಕರಿಸಿದರೆ, ಶಮಿ ತನಿಖೆಗೆ ಒಳಪಡಲಿದ್ದಾರೆ. ಒಂದು ವೇಳೆ ಈ ಆರೋಪ ನಿಜವಾದರೆ ಟೀಮ್ ಇಂಡಿಯಾದಿಂದ ಬ್ಯಾನ್ ಆಗುವ ಸಾಧ್ಯತೆ ಕೂಡ ಇದೆ.
ಬಿಸಿಸಿಐ ನಿಯಮ ಏನು ?
ಬಿಸಿಸಿಐ ನಿಯಮದ ಪ್ರಕಾರ, ವಯಸ್ಸನ್ನು ಮರೆಮಾಚುವುದು ಗಂಭೀರ ಅಪರಾಧ. ಈ ಹಿಂದೆಯೂ ಕೂಡ ಸಾಮಾನ್ಯವಾಗಿ ಅಂಡರ್-19 ತಂಡದಲ್ಲಿ ಸ್ಥಾನ ಪಡೆಯಲು ಆಟಗಾರರು ತಮ್ಮ ವಯಸ್ಸನ್ನು ಒಂದು ಅಥವಾ ಎರಡು ವರ್ಷ ಕಡಿಮೆ ಎಂದು ಘೋಷಿಸುತ್ತಾರೆ. ವಯಸ್ಸು ಬದಲಿಸಿ ಈ ಹಿಂದೆಯೂ ಕೂಡ ಹಲವಾರು ಆಟಗಾರರು ಸಿಕ್ಕಿಬಿದ್ದಿದ್ದರು. ಅಂತಹ ಆಟಗಾರರನ್ನು ಬಿಸಿಸಿಐ ಅಮಾನತುಗೊಳಿಸಿತ್ತು.
LATEST NEWS
ಪುತ್ರಿ ಸಾರಾಗೆ ಹೊಸ ಜವಾಬ್ದಾರಿ ವಹಿಸಿದ ಸಚಿನ್ ತೆಂಡೂಲ್ಕರ್
Published
1 day agoon
04/12/2024By
NEWS DESK4ಮಂಗಳೂರು/ ಮುಂಬೈ : ಸಚಿನ್ ತೆಂಡೂಲ್ಕರ್ ತಮ್ಮ ಪುತ್ರಿ ಸಾರಾ ತೆಂಡೂಲ್ಕರ್ ಹೆಗಲಿಗೆ ಹೊಸ ಜವಾಬ್ದಾರಿ ಹೊರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಫೌಂಡೇಷನ್(ಎಸ್‌ಟಿಎಫ್) ನಿರ್ದೇಶಕಿಯಾಗಿ ಸಾರಾ ತೆಂಡೂಲ್ಕರನ್ನು ನೇಮಕ ಮಾಡಿದ್ದಾರೆ.
ಈ ಕುರಿತು ಸಚಿನ್ ತೆಂಡೂಲ್ಕರ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಾರಾ ಯೂನಿವರ್ಸಿಟಿ ಕಾಲೇಜು ಲಂಡನ್‌ನಲ್ಲಿ ಕ್ಲಿನಿಕಲ್ ಮತ್ತು ಪಬ್ಲಿಕ್ ಹೆಲ್ತ್ ನ್ಯೂಟ್ರಿಷನ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕ್ರೀಡೆ, ಆರೋಗ್ಯ ಮತ್ತ ಶಿಕ್ಷಣ ಕ್ಷೇತ್ರದ ಮೂಲಕ ಭಾರತವನ್ನು ಸಶಕ್ತಗೊಳಿಸಲು ಆಕೆ ಪ್ರಯಾಣವನ್ನು ಪ್ರಾರಂಭಿಸಿದಾಗ ಜಾಗತಿಕ ಕಲಿಕೆಯು ಹೇಗೆ ಪರಿಪೂರ್ಣತೆಗೆ ತಲುಪಿದೆ ಎಂಬುದನ್ನು ನೆನಪಿಸುತ್ತದೆ ಎಂದು ಬರೆದಿದ್ದಾರೆ.
ಇದನ್ನೂ ಓದಿ : WATCH VIDEO : ಬೆಂಕಿ ಉಂಡೆಯಾಗಿ ಭೂಮಿಗೆ ಅಪ್ಪಳಿಸಿದ ಕ್ಷುದ್ರಗ್ರಹ
2019ರಲ್ಲಿ ಸಚಿನ್ ತೆಂಡೂಲ್ಕರ್ ಫೌಂಡೇಷನ್ ಅನ್ನು ಸ್ಥಾಪಿಸಲಾಗಿತ್ತು.
International news
ಹತ್ತು ನಿಮಿಷದಲ್ಲಿ 2.63 ಕೋಟಿಗೆ ಬ್ರಾಡ್ಮನ್ ಕ್ಯಾಪ್ ಹರಾಜು !
Published
1 day agoon
04/12/2024By
NEWS DESK3ಮಂಗಳೂರು/ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ದಂತಕಥೆ ಸರ್ ಡಾನ್ ಬ್ರಾಡ್ಮನ್ ಅವರ ಬ್ಯಾಗಿ ಗ್ರೀನ್ ಕ್ಯಾಪ್ ಹರಾಜಿನಲ್ಲಿ 2. 63 ಕೋಟಿ ರೂಪಾಯಿಗೆ ಮಾರಾಟವಾಗಿ ಅಚ್ಚರಿ ಮೂಡಿಸಿದೆ.
ಕ್ರಿಕೆಟ್ ಇತಿಹಾಸದ ಅಪರೂಪದ ವಸ್ತುವೊಂದನ್ನು ಮಂಗಳವಾರ ಹರಾಜಿಗಿಟ್ಟ ನಂತರ ಬ್ರಾಡ್ಮನ್ ಅವರ ಕ್ಯಾಪ್ ಗೆ ಇಷ್ಟೊಂದು ದೊಡ್ಡ ಮೊತ್ತ ಲಭಿಸಿದೆ. 1947-48ರಲ್ಲಿ ಭಾರತ ತಂಡದ ಆಸ್ಟ್ರೇಲಿಯಾ ಪ್ರವಾಸದ ವೇಳೆ ಬ್ರಾಡ್ಮನ್ ಈ ಕ್ಯಾಪ್ ಧರಿಸಿದ್ದರು ಎಂದು ಹೇಳಲಾಗಿದೆ. ಈ ಕ್ಯಾಪ್ ಗೆ ಈಗ 80 ವರ್ಷ ವಯಸ್ಸಾಗಿದೆ ಎಂದು ಹರಾಜು ಸಂಸ್ಥೆ ಬೊನ್ಸಾಮ್ ಹೇಳಿದೆ.
ಇದನ್ನೂ ಓದಿ: 16 ವರ್ಷದ ಬಾಲಕನನ್ನು ಮದುವೆಯಾದ ಶಿಕ್ಷಕಿ !
ಕ್ರಿಕೆಟ್ ಅಂಗಳದಲ್ಲಿ ”ದಿ ಡಾನ್” ಎಂದು ಕರೆಸಿಕೊಂಡಿದ್ದ ಬ್ರಾಡ್ಮನ್ 2001ರಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಆದರೆ 20 ವರ್ಷಗಳ ತಮ್ಮ ಟೆಸ್ಟ್ ಕೆರಿಯರ್ ನಲ್ಲಿ ನಿರ್ಮಿಸಿದ ದಾಖಲೆಗಳು ಇನ್ನೂ ಸಹ ಅವರನ್ನು ಅಜರಾಮರರನ್ನಾಗಿರಿಸಿದೆ.
ಆಸ್ಟ್ರೇಲಿಯಾ ಪರ 52 ಟೆಸ್ಟ್ ಗಳನ್ನಾಡಿದ್ದ ಬ್ರಾಡ್ಮನ್, 2 ತ್ರಿಶತಕ, 12 ದ್ವಿಶತಕ, 29 ಶತಕಗಳು ಮತ್ತು 13 ಅರ್ಧ ಶತಕಗಳೊಂದಿಗೆ 6996 ರನ್ ಗಳನ್ನು ಗಳಿಸಿದ್ದಾರೆ. ಅಂದರೆ ಅವರ ಬ್ಯಾಟಿಂಗ್ ಸರಾಸರಿ 99.94 ಇತ್ತು. ಇದು ಕ್ರಿಕೆಟ್ ಇತಿಹಾಸದಲ್ಲೇ ಬ್ಯಾಟರ್ ರೊಬ್ಬರ ಗರಿಷ್ಠ ರನ್ ಸರಾಸರಿ ಎಂಬುದು ವಿಶೇಷ.
International news
ರೋಹಿತ್ ಬಿಟ್ಟು, ಕೊಹ್ಲಿ ಆಟೋಗ್ರಾಫ್ ಪಡೆದಿದ್ದೇಕೆ ಆಸ್ಟ್ರೇಲಿಯಾ ಪ್ರಧಾನಿ ?
Published
2 days agoon
03/12/2024By
NEWS DESK3ಮಂಗಳೂರು/ಕ್ಯಾನ್ ಬೆರಾ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಪ್ರಧಾನಿ ಆಂಥೊನಿ ಆಲ್ಬನೀಸ್ ಅವರನ್ನು ಭೇಟಿ ಮಾಡಿತು. ಈ ವೇಳೆ ಆಸೀಸ್ ಪ್ರಧಾನಿ, ಕೊಹ್ಲಿ ಅವರ ಆಟೋಗ್ರಾಫ್ ಪಡೆದುಕೊಂಡಿದ್ದು ತುಂಬಾ ಸದ್ದು ಮಾಡಿತ್ತು.
ಅಷ್ಟಕ್ಕೂ, ಆಂಥೋನಿ ಆಲ್ಬನೀಸ್ ಅವರು ಟೀಂ ಇಂಡಿಯಾ ನಾಯಕ ರೋಹಿತ್ ಅವರನ್ನು ಬಿಟ್ಟು ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆದಿದ್ದೇಕೆ ಎಂಬುದನ್ನು ಸ್ವತಃ ಅವರೇ ರಿವಿಲ್ ಮಾಡಿದ್ದಾರೆ.
ಇದನ್ನೂ ಓದಿ: ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ರಹಸ್ಯ ಬಯಲು !
ಈ ಬಗ್ಗೆ ಮಾತನಾಡಿರುವ ಆಲ್ಬನೀಸ್,’ನನ್ನ ಖಾಸಗಿ ವೈದ್ಯರು ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ. ಅವರು ಕೊಹ್ಲಿಯ ಬಗ್ಗೆ ಎಷ್ಟು ಭಾವೋದ್ರಿಕೃತರಾಗಿದ್ದಾರೆ ಎಂಬುದನ್ನು ವಿವರಿಸಲು ಸಾಧ್ಯವಿಲ್ಲ. ನಾನು ಕೊಹ್ಲಿಯನ್ನು ಭೇಟಿಯಾಗುತ್ತೇನೆ ಎಂದು ಹೇಳಿದಾಗ ಅವರಿಗೆ ನಂಬಲು ಸಾಧ್ಯವಾಗಲಿಲ್ಲ. ಈಗಾಗೀ ಕೊಹ್ಲಿಯ ಆಟೋಗ್ರಾಫ್ ಕೊಡಿಸಲು ಅವರು ನನ್ನಲ್ಲಿ ಹೇಳಿದ್ದಾರೆ. ಎಂದು ತಿಳಿಸಿದರು.
ಇನ್ನೂ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಎರಡನೇ ಪಿಂಕ್ ಬಾಲ್ ಟೆಸ್ಟ್ ಪಂದ್ಯಾವು ಶುಕ್ರವಾರದಿಂದ ಶುರುವಾಗಲಿದೆ.