ಮಂಗಳೂರು: ಮಂಗಳೂರು-ಚಿತ್ರದುರ್ಗ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಮಂಗಳೂರು ಬಿಕರ್ಣಕಟ್ಟೆಯಿಂದ- ಕಾರ್ಕಳ ಸವಣೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ನಗರದ ಕುಡುಪುವಿನಲ್ಲಿ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಟೆಂಡರ್ ಮುಗಿದು ‘ದಿಲೀಪ್ ಬಿಲ್ಡ್ ಕಾನ್’ ಸಂಸ್ಥೆಯು ಕಾಮಗಾರಿ ಕೈಗೊಂಡಿದ್ದು, ಕಾನೂನಾತ್ಮಕ ಹಾಗೂ ತಾಂತ್ರಿಕ ಕಾರಣದಿಂದ ಎರಡು ತಿಂಗಳು ತಡವಾಗಿ ಆರಂಭವಾಗಿದೆ.
ಮೊದಲಿಗೆ ರಸ್ತೆ ಅಗಲೀಕರಣಕ್ಕಾಗಿ ಮನೆ ಒಡೆಯುವ ಕಾರ್ಯ ಆರಂಭವಾಗಿದೆ. ಎರಡು ವರ್ಷದೊಳಗೆ ಕಾಮಗಾರಿ ಮುಗಿಸುವ ಯೋಜನೆ ಇದೆ. ಇದಕ್ಕೆ ಇಂದು ಚಾಲನೆ ನೀಡಲಾಗಿದೆ. ಸಾರ್ವಜನಿಕರು ಸಹಕಾರ ಕೊಡಬೇಕು ಎಂದು ಹೇಳಿದರು.