ಮಂಗಳೂರು: ನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಐದು ದಿನಗಳಲ್ಲಿ 1.04 ಕೋಟಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮೇ 14 ರಂದು ದುಬೈನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂಧಿಳಿದ ಕಾಸರಗೋಡಿನ ವ್ಯಕ್ತಿಯೊಬ್ಬನನ್ನು ತಪಾಸಣೆಗೆ ಒಳಪಡಿಸಿದಾಗ 24 ಕ್ಯಾರೆಟ್‌ನ 547 ಗ್ರಾಂ ಚಿನ್ನ ಪತ್ತೆಯಾಗಿದೆ.
ಆತನ ದೇಹದೊಳಗೆ ಅಂಡಾಕಾರದಲ್ಲಿ ಈ ಚಿನ್ನವನ್ನು ಅಡಗಿಸಿ ಇಟ್ಟಿದ್ದ. ಈ ಚಿನ್ನದ ಮೌಲ್ಯ 27ಲಕ್ಷದ 89 ಸಾವಿರ ಆಗಿತ್ತು.
ಮೇ 16 ರಂದು ಬಹರೇನ್‌ನಿಂದ ನಗರಕ್ಕೆ ಬಂದಿಳಿದ ಉಡುಪಿ ಜಿಲ್ಲೆಯ ಬೈಂದೂರಿನ ಪ್ರಯಾಣಿಕನಿಂದ 736 ಗ್ರಾಂ ಚಿನ್ನವನ್ನು ಗುದನಾಳದಲ್ಲಿಟ್ಟು ವಶಪಡಿಸಿಕೊಳ್ಳಲಾಗಿದೆ.
24 ಕ್ಯಾರೆಟ್‌ನ ಈ ಚಿನ್ನದ ಮೌಲ್ಯ 37 ಲಕ್ಷದ 17 ಸಾವಿರ ರೂಪಾಯಿ ಮೌಲ್ಯದ್ದಾಗಿದೆ.
ಮೇ.18 ರಂದು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ
ಇಲ್ಲಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕರೊಬ್ಬರನ್ನು ತಪಾಸಣೆಗೆ ಒಳಪಡಿಸಿದಾಗ ಅಂಡಾಕಾರದ ನಾಲ್ಕು ಪ್ಯಾಕೆಟ್‌ಗಳಲ್ಲಿ ಪೇಸ್ಟ್ ರೂಪದಲ್ಲಿ ಪ್ಯಾಕ್ ಮಾಡಿ, ಗುದನಾಳದಲ್ಲಿಟ್ಟು ಚಿನ್ನ ಸಾಗಿಸುತ್ತಿದ್ದ.
ಈ ಪ್ರಕರಣದಲ್ಲಿ 24 ಕ್ಯಾರೆಟ್‌ನ 756 ಗ್ರಾಂ ಚಿನ್ನ ವಶಕ್ಕೆಪಡೆದಿದ್ದು, ಇದರ ಮೌಲ್ಯ 39ಲಕ್ಷದ 35 ಸಾವಿರ ಆಗಿದೆ.
ಮೂರು ಪ್ರಕರಣಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.