Sunday, May 16, 2021

ರಾಜ್ಯದಾದ್ಯಂತ ಕೊರೊನಾ ಲಾಕ್ ಡೌನ್ : ದಂಡ ಕಟ್ಟಲು ಸೂಚಿಸಿದ ಟ್ರಾಫಿಕ್ ಎಸೈಗೇ ಆವಾಜ್ ಹಾಕಿದ ಮಹಿಳೆ.!

ಉಡುಪಿ: ರಾಜ್ಯದಲ್ಲಿ ಕೊರೊನಾ ಎಮರ್ಜೆನ್ಸಿ ಲಾಕ್ ಡೌನ್ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಸಂದರ್ಭ ಅನಗತ್ಯ ತಿರುಗಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇನ್ನು ಉಡುಪಿಯ ಕ್ಲಾಕ್ ಟವರ್ ಬಳಿ ಮೊಬೈಲ್ ನಲ್ಲಿ ಮಾತನಾಡ್ತಾ ಕಾರು ಚಲಾಯಿಸುತ್ತಿದ್ದ‌‌ ಮಹಿಳೆಗೆ  ಟ್ರಾಫಿಕ್ ಎಸೈ  ಅಬ್ದುಲ್ ಖಾದರ್ ಎಚ್ಚರಿಕೆ ನೀಡಿದ ಘಟನೆಯೂ ನಡೆದಿದೆ.ಈ ವೇಳೆ ಮಾಡಿದ ತಪ್ಪಿಗೆ ದಂಡ ಕಟ್ಟಲು ಸೂಚನೆ ನೀಡಿದಾಗ  ಟ್ರಾಫಿಕ್ ಎಸೈ ಗೆ ಮಹಿಳೆ ಆವಾಝ್ ಹಾಕಿದ್ದಾಳೆ. ಕೋವಿಡ್ ನಿಷೇಧಾಜ್ಞೆ ಜಾರಿಯಲ್ಲಿದ್ದರೂ  ಅನಗತ್ಯವಾಗಿ ತಿರುಗಾಡುತ್ತಾ, ರಸ್ತೆ ನಿಯಮ ಉಲ್ಲಂಫಿಸಿದರೆ ಸುಮ್ಮನಿರೋಲ್ಲ ಎಂದು ಫೈನ್ ಹಾಕಿ ಎಚ್ಚರಿಕೆ ನೀಡಿ  ಎಸ್.ಐ ಕಳಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...