Connect with us

    bengaluru

    Bengaluru: ಆಭರಣ ಖರೀದಿಗೆ ಬಂದ ಯುವತಿ ನೆಕ್ಲೇಸ್ ಎಗರಿಸಿ ಪರಾರಿ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

    Published

    on

    ಮಹಿಳೆಯೊಬ್ಬರು ಆಭರಣ ಖರೀದಿಗೆ ಎಂದು ಜ್ಯುವೆಲರಿ ಶಾಪ್‌ ಗೆ ಬಂದು ನೆಕ್ಲೇಸ್ ಸರವನ್ನು ಎಗರಿಸಿದ ಘಟನೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ.

    ಬೆಂಗಳೂರು: ಮಹಿಳೆಯೊಬ್ಬರು ಆಭರಣ ಖರೀದಿಗೆ ಎಂದು ಜ್ಯುವೆಲರಿ ಶಾಪ್‌ ಗೆ ಬಂದು ನೆಕ್ಲೇಸ್ ಸರವನ್ನು ಎಗರಿಸಿದ ಘಟನೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ.

    ಮಹಿಳೆ ಜ್ಯುವೆಲರಿ ಶಾಪ್‌ನಲ್ಲಿ ಆಭರಣಗಳನ್ನ ನೋಡುತ್ತಿರುವಂತೆ ಈಕೆ ನಾಟಕವಾಡಿದ್ದಳು.

    ಬಳಿಕ ಸಿಬ್ಬಂದಿಯ ಕಣ್ತಪ್ಪಿಸಿ ನೆಕ್ಲೇಸನ್ನು ಬ್ಯಾಗ್‌ನಲ್ಲಿ ಹಾಕಿಕೊಂಡಿದ್ದಾಳೆ.

    ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಈ ಬಗ್ಗೆ ಜಯನಗರ ಪೊಲೀಸರಿಗೆ ಜ್ಯುವೆಲರಿ ಶಾಪ್ ಸಿಬ್ಬಂದಿ ದೂರು ನೀಡಿದ್ದಾರೆ.

    ಸಿಸಿಟಿವಿ ಪರಿಶೀಲನೆ ನಡೆಸಿ ಮಹಿಳೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    bengaluru

    ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾ*ವು

    Published

    on

    ಮಂಗಳೂರು/ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾ*ವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಆರೋಪ ಕೇಳಿಬಂದಿದೆ.

    ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾ ಮೃ*ತ ಬಾಣಂತಿ ಎಂದು ಗುರುತಿಸಲಾಗಿದೆ.

    ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅ*ನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದ ವೇಳೆ ಚಿಕಿತ್ಸೆ ಫಲಿಸದೇ ಮೃ*ತಪಟ್ಟಿದ್ದಾರೆ. ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್‌ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ನಂತರ, ಸ್ಕ್ಯಾನಿಂಗ್ ಮಾಡಿ ಹೊಟ್ಟೆಯಲ್ಲಿ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವೈದ್ಯರು ಎ*ಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ.

    ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು. ಹೀಗಾಗಿ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಕಾ*ಮಾಲೆ ಇದೆ ಎಂದಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫ*ಲಿಸದೆ ಮೃ*ತಪಟ್ಟಿದ್ದಾರೆ. ಸ್ಥಳೀಯ ಪೊಳೀಸ್ ಠಾಣೆಯಲ್ಲಿ ಕುಟುಂಬದವರು ನೀಡಿದ ದೂ*ರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    bangalore

    ವಿರಾಟ್ ಕೊಹ್ಲಿಗೆ ಶಾಕ್ ಕೊಟ್ಟ ಬಿಬಿಎಂಪಿ; ನೋಟಿಸ್ ನೀಡಿದ ಅಧಿಕಾರಿಗಳು !

    Published

    on

    ಮಂಗಳೂರು/ಬೆಂಗಳೂರು: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್, ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.

    ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್‌ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ (One8 Commune) & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.

    ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್‌.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

    ಇದನ್ನೂ ಓದಿ: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !

    ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ರೂಪದ ವಿವರಣೆ ಕೇಳಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

    Continue Reading

    bengaluru

    ನಟ ದರ್ಶನ್ ಗೆ ಜಾಮೀನು ಸಿಕ್ಕಿದ್ದು ಇದೇ ಕಾರಣಕ್ಕೆ ?

    Published

    on

    ಮಂಗಳೂರು/ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 7 ತಿಂಗಳ ಬಳಿಕ ನಟ ದರ್ಶನ್ ಮತ್ತು ಗ್ಯಾಂಗ್ ಗೆ ಜಾಮೀನು ಸಿಕ್ಕಿದೆ.

    ಕಳೆದ ಆರು ವಾರಗಳಿಂದ ನಟ ದರ್ಶನ್ ಮೆಡಿಕಲ್ ಬೇಲ್ ಮೇಲೆ ಹೊರಗಿದ್ದಾರೆ. ಹೀಗಾಗಿ ನಟಿ ಪವಿತ್ರಗೌಡ ಸೇರಿ ಉಳಿದ ಆರು ಮಂದಿ ಬಿಡುಗಡಗೆ ಪ್ರಕ್ರಿಯೆಗಳು ಶುರುವಾಗಿದೆ. ಸೋಮವಾರ ಬಿಡುಗಡೆಯಾಗುವ ಸಂಭವ ಇದೆ.

    ಅಂದ ಹಾಗೇ, ಈ ಪ್ರಕರಣದ ಒಟ್ಟು 17 ಆರೋಪಿಗಳ ಪೈಕಿ ಈ ಮೊದಲೇ ಐವರಿಗೆ ಜಾಮೀನು ಸಿಕ್ಕಿತ್ತು. ಈಗ ಏಳು ಮಂದಿಗೆ ಬೇಲ್ ಸಿಕ್ಕಿದೆ. ಉಳಿದ ಐವರು ಆರೋಪಿಗಳಿಗೆ ಮಾತ್ರ ಜಾಮೀನು ಸಿಕ್ಕಿಲ್ಲ. ಈ ಮಧ್ಯೆ ದರ್ಶನ್ ಸೇರಿ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಚಿಂತನೆ ನಡೆಸಿದ್ದಾರೆ.

    ಇದನ್ನೂ ಓದಿ: ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್ !

    ನಟ ದರ್ಶನ್ ಗೆ ಜಾಮೀನು ಸಿಗಲು ಕಾರಣ
    ಜಾಮೀನು ಮೊದಲ ನಿಯಮ. ಆರೋಪಿಗಳಿಗೆ ಯಾವುದೇ ಅಪರಾಧಿಕ ಹಿನ್ನೆಲೆ ಇಲ್ಲ. ಆರೋಪಿಗಳು 6 ತಿಂಗಳಿನಿಂದ ಜೈಲಿನಲ್ಲಿ ಇದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಬಂಧನ ಮಾಡುವಾಗ ನಿಯಮಗಳ ಪಾಲನೆ ಆಗಿಲ್ಲ. ಬಂಧನ ವೇಳೆ ಆರೋಪಿಗೆ ಬಂಧನದ ಕಾರಣ ನೀಡಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ಆದೇಶವಿದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಗ್ರೌಂಡ್ಸ್ ಆಫ್ ಅರೆಸ್ಟ್ ಪಾಲಿಸಿಲ್ಲ. ಆರೋಪಿಗಳ ನಿರ್ದಿಷ್ಟ ಪಾತ್ರದ ಬಗ್ಗೆ ಸ್ಪಷ್ಟ ಉಲ್ಲೇಖವಿಲ್ಲ. ಪ್ರತ್ಯಕ್ಷದರ್ಶಿಗಳ ಹೇಳಿಕೆಯಲ್ಲೂ ವ್ಯತ್ಯಾಸ ಕಂಡು ಬಂದಿದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತು.

    ಹೀಗಾಗಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಒಟ್ಟು ಏಳು ಆರೋಪಿಗಳಿಗೆ ಜಾಮೀನು ನೀಡಿ, ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ.

     

    Continue Reading

    LATEST NEWS

    Trending