Wednesday, June 16, 2021

ಹೂವಿನಹಡಗಲಿ ಡಿಪೋದಲ್ಲಿ ಕೆಎಸ್ ಆರ್ ಟಿಸಿ ಬಸ್ಸಿನ ಮಹಿಳಾ ಕಂಡಕ್ಟರ್ ಅನುಮಾನಾಸ್ಪದ ಸಾವು..!

ಚಿಕ್ಕಮಗಳೂರು:ಹೂವಿನಹಡಗಲಿ ಡಿಪೋದಲ್ಲಿ ಕೆಎಸ್‍ಆರ್ ಟಿಸಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ತರೀಕೆರೆ ತಾಲೂಕಿನ ಚೀರನಹಳ್ಳಿ ಮೂಲದ ಮಂಜುಳ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ.ಈಕೆಯ ಪೋಷಕರು ಕೊಲೆಯಾಗಿರುವುದಾಗಿ  ಆರೋಪಿಸಿದ್ದಾರೆ.ಮೃತ ಮಂಜುಳ ಮೂಲತಃ ದಾವಣಗೆರೆ ಜಿಲ್ಲೆ ಮಾಯಕೊಂಡ ನಿವಾಸಿ. ಎಂಟು ವರ್ಷಗಳ ಹಿಂದೆ ತರೀಕೆರೆ ತಾಲೂಕಿನ ಚೀರನಹಳ್ಳಿ ಪ್ರದೀಪ್ ಜೊತೆ ವಿವಾಹವಾಗಿತ್ತು.

ಪ್ರದೀಪ್ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು,  ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ.

ದಂಪತಿಗೆ ಐದು ವರ್ಷದ ಹೆಣ್ಣು ಮಗು ಹಾಗೂ 3 ವರ್ಷದ ಗಂಡು ಮಕ್ಕಳಿದ್ದಾರೆ. ಮೈಕ್ರೋ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರದೀಪ್, ಎರಡು ವರ್ಷಗಳಿಂದ ಮನೆಯಲ್ಲಿ  ಮಕ್ಕಳನ್ನ ನೋಡಿಕೊಂಡು ಇದ್ದರು.

ಮಂಜುಳ ಪತಿ  ಹೂವಿನಹಡಗಲಿ ಡಿಪೋದಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಮಂಜುಳ ಇದ್ದಲ್ಲಿಗೆ ಬಂದಿದ್ದರು. ಈ ಸಂದರ್ಭ ಪ್ರದೀಪ್ ಹಾಗೂ ಮಂಜುಳ ನಡುವೆ  ಜಗಳವಾಗಿ ಮನಸ್ತಾಪವಾಗಿತ್ತು.

ಮಂಜುಳಾ ಬಳಿ ಪತಿ ಪ್ರದೀಪ್ ಬಾಕಿ ಇದ್ದ ವರದಕ್ಷಿಣೆ ಹಣ ತರುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಮಂಜುಳ, ಕಳೆದ ರಾತ್ರಿ ವಿಷ ಕುಡಿದಿದ್ದಾಳೆ. ಬಳಿಕ ಪತಿ ಹಾಗೂ ಕುಟುಂಬಸ್ಥರು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.

ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಿಕರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...