LATEST NEWS
ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು -ಆಸ್ಪತ್ರೆ ಎದುರು ಕುಟುಂಬಸ್ಥರು, ಸಂಘಸಂಸ್ಥೆಗಳಿಂದ ಪ್ರತಿಭಟನೆ..!
ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಹಾಗೂ ಆಸ್ಪತ್ರೆಯ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದ ಗರ್ಭಿಣಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮನೆ ಮಂದಿ, ಕುಟುಂಬಸ್ಥರು, ಸಮಾಜ ಬಾಂಧವರು ಹಾಗೂ ಸಾರ್ವಜನಿಕರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ.
ಮಂಗಳೂರು : ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಹಾಗೂ ಆಸ್ಪತ್ರೆಯ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದ ಗರ್ಭಿಣಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮನೆ ಮಂದಿ, ಕುಟುಂಬಸ್ಥರು, ಸಮಾಜ ಬಾಂಧವರು ಹಾಗೂ ಸಾರ್ವಜನಿಕರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ.
ಮಾತುಕತೆ ನಡೆಸಲೆಂದು ಬಂದ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು ಆಸ್ಪತ್ರೆಯ ಆಡಳಿತ ಮಂಡಳಿ, ಡೀನ್ ತಮ್ಮ ಬಳಿಗೆ ಬಂದು ಮಾತುಕತೆ ನಡೆಸಬೇಕೆಂದು ಪಟ್ಟುಹಿಡಿದರು. ಮೃತ ದೇಹವನ್ನು ಆಸ್ಪತ್ರೆಯಿಂದ ಸಾಗಿಸಲು ಬಿಡದೇ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಪ್ರತಿಭಟನೆ ನಡೆಸಿದರು.
ಈ ಸಂದರ್ಭದ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ನೂಕಾಟ ತಳ್ಳಾಟ ಕೂಡಾ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಪ್ರದೀಪ್ ಆಚಾರ್ಯ ಅವರ ಪತ್ನಿ ಶಿಲ್ಪಾ ಆಚಾರ್ಯ (36)ರನ್ನು ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಈಕೆಯ ಆರೋಗ್ಯವನ್ನು ನೋಡಿಕೊಂಡಿದ್ದ ವೈದ್ಯೆ ವೀಣಾ ಭಗವಾನ್ ಅವರು ಕೊನೆ ಕ್ಷಣದಲ್ಲಿ ಕೈಚೆಲ್ಲಿ ಆಸ್ಪತ್ರೆಗೆ ಬಾರದೇ ಡ್ಯೂಟಿ ಡಾಕ್ಟರ್ ಅವರಿಂದ ಸಿಜೇರಿಯನ್ ಮಾಡಿಸಿದ್ದಾರೆ.
ವೈದ್ಯೆಗೆ ವೀಣಾಗೆ ಕರೆ ಮಾಡಿದಾಗ ಭಾನುವಾರವಾದ ಕಾರಣ ನಾನು ಬರುವುದಿಲ್ಲ ಎಂದು ಉಡಾಫೆ ಮಾತನಾಡಿದ್ದಾರೆ.
ವೀಣಾ ಅನುಪಸ್ಥಿತಿಯಲ್ಲಿ ಶಿಲ್ಪಾಗೆ ಸಿಜೆರಿನ್ ಮಾಡಿಸಿದ್ದು, ಹೆಣ್ಣು ಮಗು ಜನನವಾಗಿದೆ.
ಬಳಿಕ ಗರ್ಭಕೋಶ ತೆಗೆಯಬೇಕೆಂದು ಹೇಳಿದ್ದಾರೆ. 5 ದಿನಗಳ ಬಳಿಕ ದಿನಗಳ ನಂತರ ಬ್ರೆನ್ ಮೇಜರ್ ಡ್ಯಾಮೇಜ್ ಆಗಿದೆ ಎಂದಿದ್ದಾರೆ.
ಜುಲೈ 25ರಂದು ಐಸಿಯುನಲ್ಲಿ ಶಿಲ್ಪಾ ಸಾವನ್ನಪ್ಪಿದ್ದಾಗಿ ಮನೆ ಮಂದಿಗೆ ಮಾಹಿತಿ ನೀಡಿದ್ದಾರೆ ಎಂದು ಮಹಿಳಾ ಹೋರಾಟಗಾರ್ತಿ ಪವಿತ್ರಾ ಆಕ್ರೋಶ ವ್ಯಕ್ತಪಡಿಸಿದರು.
ಇದು ಸಂಪೂರ್ಣ ವೈದ್ಯರ ಮತ್ತು ಆಸ್ಪತ್ರೆಯ ಬೇಜವಾಬ್ದಾರಿ ಮತ್ತು ಆಸ್ಪತ್ರೆಯ ನಿರ್ಲಕ್ಷ್ಯದಿಂದ ಆಗಿದೆ.
ನಾವು ಇಷ್ಟು ಪ್ರತಿಭಟನೆ ನಡೆಸುತ್ತಿದ್ದರೂ ಆಡಳಿತ ಮಂಡಳಿಯ ಯಾವೊಬ್ಬನೂ ಬಂದು ನಮ್ಮ ನೋವು ಕೇಳಿಲ್ಲ ಎಂದು ಶಿಲ್ಪಾ ಪತಿ ಪ್ರದೀಪ್ ಆಚಾರ್ಯ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇಂದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡುವ ವೇಳೇ ಆಸ್ಪತ್ರೆ ಬಳಿ ಮೃತದೇಹ ತಡೆದು ಸಂಬಂಧಿಕರು, ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಉಗ್ರ ಪ್ರತಿಭಟನೆ ನಡೆಸಿದ್ದಾರೆ. ಕೆಲವರು ಪೊಲೀಸರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶವನ್ನೂ ವ್ಯಕ್ತಪಡಿಸಿದರು.
ಕೊನೆಗೂ ಪೊಲೀಸ್ ಬಲ ಪ್ರಯೋಗಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಗಿದೆ. ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಿದ್ದರು.
ಇನ್ನು ಡಿವೈಎಫ್ಐ ಸಂಘಟನೆ ಸದಸ್ಯರು ಆಸ್ಪತ್ರೆಗೆ ಬಂದು ಮೃತ ಮಹಿಳೆಯ ಕುಟುಂಬಿಕರಿಗೆ ಸಾಂತ್ವನ ಹೇಳಿದ್ದಲ್ಲದೇ ಪರಿಹಾರ ತೆಗೆಸಿಕೊಡುವ ಭರವಸೆ ನೀಡಿದ್ದಾರೆ.
ಜಿಲ್ಲಾ ಆರೋಗ್ಯಾಧಿಕಾರಿ ಕಿಶೋರ್ ಕುಮಾರ್ ಅವರ ನೇತೃತ್ವದಲ್ಲಿ ಆಸ್ಪತ್ರೆಯ ಡೀನ್ ಡಿವೈಎಫ್ಐ ಮುಖಂಡರ ಜೊತೆ ಮಾತುಕತೆ ನಡೆಸಿದ್ದು, ಮೃತ ಮಹಿಳೆಗೆ ನ್ಯಾಯಕೊಡಿಸುವ ಭರವಸೆ ನೀಡಿದ್ದಾರೆ.
ಇನ್ನು ಡಿಎಚ್ಒ ನೇತೃತ್ವದಲ್ಲಿ ಐವರ ಪ್ರತ್ಯೇಕ ತನಿಖಾ ತಂಡ ರಚಿಸಿ ಕರ್ನಾಟಕ ಮೆಡಿಕಲ್ ಕೌನ್ಸಿಲ್ ನೀಡುವ ವರದಿಯನ್ನು ಡಿಎಚ್ಒ ಅವರು ಜಿಲ್ಲಾಧಿಕಾರಿಗಳಿಗೆ ಒಪ್ಪಿಸಿದ ಬಳಿಕ ಅವರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರತಿಭಟನರೆಯ ನೇತೃತ್ವ ವಹಿಸಿದ್ದ ಮುಖಂಡರು ತಿಳಿಸಿದ್ದಾರೆ.
LATEST NEWS
ಈಜಲು ಹೋದ ಅಣ್ಣ ನೀರು*ಪಾಲು.! ತಂಗಿಯ ವೀಡಿಯೋದಲ್ಲಿ ಸೆರೆಯಾಯ್ತು ಅಣ್ಣನ ಸಾ*ವಿನ ಕೊನೆ ಕ್ಷಣ..!
ಕೋಲಾರ: ಕೃಷಿ ಹೊಂಡದಲ್ಲಿ ಈಜುತ್ತಿರುವುದನ್ನು ತಂಗಿ ವೀಡಿಯೋ ಮಾಡುತ್ತಿದ್ದಾಗಲೇ ಸಹೋದರ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನಾಗವಾಳ ಗ್ರಾಮದಲ್ಲಿಈ ಘಟನೆ ನಡೆದಿದೆ.
ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?
ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್(26 ವ) ಮೃತ ದುರ್ದೈವಿ. ಗೌತಮ್ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗಾವಾಳಕ್ಕೆ ಬಂದಿದ್ದರು. ಈ ವೇಳೆ ಕುಟುಂಬ ಸದಸ್ಯರು ಹಾಗೂ ತಂಗಿಯ ಜೊತೆ ಕೃಷಿ ಹೊಂಡದ ಬಳಿ ಹೋಗಿದ್ದಾರೆ. ಅಲ್ಲಿ ತಂಗಿಯ ಬಳಿ ವೀಡಿಯೋ ಮಾಡಲು ಮೊಬೈಲ್ ಕೊಟ್ಟು ಹೊಂಡಕ್ಕೆ ಈಜಲು ಧುಮುಕಿದ್ದಾರೆ. ಸರಿಯಾಗಿ ಈಜಲು ಗೊತ್ತಿರದ ಗೌತಮ್ ನೀರಿಗೆ ಧುಮುಕಿದ್ದು, ಇತ್ತ ತಂಗಿ ಈಚೆ ಬಾ ಎಂದು ಕೂಗುವುದು ವೀಡಿಯೋದಲ್ಲಿ ರೆಕಾರ್ಡ್ ಆಗಿದೆ. ನೋಡು ನೋಡುತ್ತಿದ್ದಂತೆ ಗೌತಮ್ ನೀರಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾರೆ. ಇನ್ನು ಈ ವೀಡಿಯೋದಲ್ಲಿ ಗೌತಮ್ ನೀರಿನಲ್ಲಿ ಮುಳುಗುವ ದೃಶ್ಯ ಸೆರಯಾಗಿದೆ. ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ‘ಗಬ್ಬರ್ ಸಿಂಗ್’ ತುಳು ಚಲನಚಿತ್ರ ಬಿಡುಗಡೆ
ಉಡುಪಿ : ಬಹು ನಿರೀಕ್ಷಿತ ತುಳು ಚಿತ್ರ “ಗಬ್ಬರ್ ಸಿಂಗ್” ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ ಸಮಾರಂಭವೂ ನಡೆಯಿತು.
ತೊಟ್ಟಂ ಚರ್ಚ್ ನ ಧರ್ಮಗುರು ಫಾದರ್ ಡೆನಿಸ್ ಡೆಸಾ, ಶಂಕರಪುರದ ಸಾಯಿ ಈಶ್ವರ ಗುರೂಜಿ, ಮಿಯಾರ್ ಮಸೀದಿಯ ಮೌಲ್ವಿ ಅಬುಲ್ ಹಸನ್, ರಾಜಕೀಯ ಮುಖಂಡರಾದ ಗೀತಾಂಜಲಿ ಸುವರ್ಣ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಸರಳಾ ಕಾಂಚನ್, ಶಿಲ್ಪಾ ಭಟ್, ಉಡುಪಿ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷ್ಣಮೂರ್ತಿ ಆಚಾರ್ಯ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಚಿತ್ರದ ಕಲಾವಿದರಾದ ವೀಣಾ ಎಸ್ ಶೆಟ್ಟಿ, ಸಂದೀಪ್ ಭಕ್ತ, ಆದ್ಯ, ಚಂದ್ರಹಾಸ್ ಕಪ್ಪೆಟ್ಟು, ಕಿಶೂ ಎಂಟರ್ಪ್ರೈಸಸ್ ವ್ಯವಸ್ಥಾಪಕ ನಿರ್ದೇಶಕರಾದ ಕಿಶೋರ್ ಗೊನ್ಸಾಲ್ವಿಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.
ಇದನ್ನೂ ಓದಿ : ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು
‘ಗಬ್ಬರ್ ಸಿಂಗ್’ ಚಿತ್ರವು ಕೌಟುಂಬಿಕ ಅಂಶಗಳನ್ನು ಒಳಗೊಂಡಿರುವ ಆಕ್ಷನ್ ಥ್ರಿಲ್ಲರ್ ಆಗಿದೆ. ಕಥೆ ಮತ್ತು ಚಿತ್ರಕಥೆಯನ್ನು ಸತೀಶ್ ಪೂಜಾರಿ ಬಾರ್ಕೂರು ರಚಿಸಿದ್ದು, ಪ್ರದೀಪ್ ನಿರ್ದೇಶನವಿದೆ. ತುಳು ಚಿತ್ರರಂಗದ ಹೆಸರಾಂತ ನಟರುಗಳು ಈ ಚಿತ್ರದಲ್ಲಿ ಪಾತ್ರವಾಗಿದ್ದಾರೆ.
LATEST NEWS
ಆಭರಣ ಮಳಿಗೆಯಲ್ಲಿ ಎಸಿ ಸ್ಫೋಟ; ಮೂವರಿಗೆ ಗಂ*ಭೀರ ಗಾಯ
ಬಳ್ಳಾರಿ :ಎಸಿ ಸ್ಫೋ*ಟಗೊಂಡ ಪರಿಣಾಮ ಮೂವರು ಗಂ*ಭೀರವಾಗಿ ಗಾ*ಯಗೊಂಡಿರುವ ಘಟನೆ ಬಳ್ಳಾರಿಯ ಕಲ್ಯಾಣ್ ಜ್ಯುವೆಲರ್ಸ್ನಲ್ಲಿ ನಡೆದಿದೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘ*ಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾ*ಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.
ಇದನ್ನೂ ಓದಿ : ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ!
ಸ್ಫೋ*ಟದ ತೀವ್ರತೆಗೆ ಕಿಟಕಿ ಗಾಜುಗಳು ಒಡೆದು ಹೋಗಿವೆ. ಘಟನೆಯಿಂದಾಗಿ ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಶಾರ್ಟ್ ಸರ್ಕ್ಯೂಟ್ನಿಂದ ಸ್ಫೋ*ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.
- FILM6 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- LATEST NEWS7 days ago
ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!
- DAKSHINA KANNADA6 days ago
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
- BANTWAL7 days ago
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!