Wednesday, October 5, 2022

ವೆನ್ಲಾಕ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಮಸ್ಯೆಯಿಂದ ಮಹಿಳೆ ಸಾವು; ವೈದ್ಯರ ನಿರ್ಲಕ್ಷ್ಯಕ್ಕೆ ಕುಟುಂಬಿಕರ ಆಕ್ರೋಶ..!

ಮಂಗಳೂರು:ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಕುಟುಂಬಸ್ಥರು ಅಲ್ಲಿನ ವೈದ್ಯರ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಟ್ಲ ಸಮೀಪದ ಸಾಲೆತ್ತೂರು ನಿವಾಸಿ ಭಾರತಿ ರೈ(52) ಮೃತ ಮಹಿಳೆ. ಮೇ 5ರಂದು ಅವರನ್ನು ಪುತ್ತೂರಿನಲ್ಲಿ ತಪಾಸಣೆಗೆ ಒಳಪಡಿಸಿದ್ದು, ಕೊರೊನಾ ಪಾಸಿಟಿವ್ ಎಂದು ತಿಳಿದು ಬಂದಿತ್ತು.ಪಲ್ಸ್ ರೇಟ್ ಕಡಿಮೆ ಇದ್ದುದರಿಂದ ಮಂಗಳೂರಿಗೆ ಕರೆತಂದು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಹಿಳೆಗೆ ಆಕ್ಸಿಜನ್ ಕೊಟ್ಟಿದ್ದರಿಂದ ಸ್ವಲ್ಪ ಗುಣಮುಖರಾಗಿದ್ದರು.

ಊಟ, ತಿಂಡಿಯನ್ನೂ ಮಾಡುತ್ತಿದ್ದರು. ವೆನ್ಲಾಕ್ ಆಸ್ಪತ್ರೆಗೆ ದಾಖಲಾದ ಬಳಿಕವೂ ಫೋನಿನಲ್ಲಿ ಮಾತನಾಡುತ್ತಿದ್ದರು.  ಮಧ್ಯಾಹ್ನವೂ ಫೋನಿನಲ್ಲಿ ಮಾತನಾಡಿದ್ದಾರೆ.ಮನೆಯವರಲ್ಲಿ ಅವರ ಸಹಿ ತೆಗೆದುಕೊಂಡು ವಾರ್ಡ್ ಗೆ ಶಿಫ್ಟ್ ಮಾಡುತ್ತೇವೆಂದು ಹೇಳಿದ್ದ ವೈದ್ಯರು ಮನೆಯವರ ಅನುಮತಿ ಇಲ್ಲದೆ  ವೆಂಟಿಲೇಟರ್ ಗೆ ಶಿಫ್ಟ್ ಮಾಡಿದ್ದಾರೆ. ಆ ಬಳಿಕ  ಸಂಜೆ ವೇಳೆಗೆ ಕುಟುಂಬಿಕರಲ್ಲಿ ರೋಗಿ  ಮೃತಪಟ್ಟಿರುವುದಾಗಿ ಹೇಳಿದ್ದಾರೆ.ಕಾರಣ ಕೇಳಿದರೆ  ವೆಂಟಿಲೇಟರ್ ಸರಿಯಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ.

ರೋಗಿ ಮನೆಯವರ ಎದುರು ತಿಳಿಯದೆ ನಾನು ಡ್ಯೂಟಿ ಡಾಕ್ಟರ್ ಇಬ್ಬರೇ ಇರುವುದು ಯಾವುದನ್ನೆಲ್ಲಾ ಸಂಭಾಳಿಸಬೇಕು ಎಂದು ಅಸಮಾಧಾನ ತೋಡಿಕೊಂಡಿದ್ದನ್ನೂ    ಕುಟುಂಬಿಕರು ಹೇಳಿದ್ದಾರೆ.

ಸಂಬಂಧಿಕರು ಅಲ್ಲಿನ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಅಲ್ಲದೆ, ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಕೂಡ ಆಸ್ಪತ್ರೆಗೆ ಬಂದಿದ್ದು, ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ.

ವೆಂಟಿಲೇಟರ್ ಸಮಸ್ಯೆಯಿಂದಾಗಿ ಮಹಿಳೆಯ ಸಾವು ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ಮತ್ತು ಜಿಲ್ಲಾಡಳಿತ ಸೂಕ್ತ ತನಿಖೆ ನಡೆಸಬೇಕಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...