ಲಂಡನ್: ಮಹಿಳೆಯೊಬ್ಬಳು ಪ್ಯಾರಸಿಟಮಾಲ್ ಮಾತ್ರೆಯ ಮಿತಿಮೀರಿದ ಸೇವನೆಯಿಂದ ಸಾವನ್ನಪ್ಪಿರುವ ಘಟನೆ ಬ್ರಿಟನ್ ನ ವಿಡ್ನೆಸ್ ಪಟ್ಟಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಲಾರಾ ಹಿಗ್ಗಿಸನ್ (30) ಎಂದು ಗುರುತಿಸಲಾಗಿದೆ. ನ್ಯುಮೋನಿಯಾದಿಂದ ಬಳಲುತ್ತಿದ್ದ ಮಹಿಳೆ ಹತ್ತಿರದ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ವೈದ್ಯರು ಇಂಟ್ರಾವೆನಸ್ ಟ್ಯೂಬ್ ಮೂಲಕ ಮೂರು ಬಾರಿ 1 ಗ್ರಾಂ ಪ್ರಮಾಣದಲ್ಲಿ ಪ್ಯಾರಾಸಿಟಿಮಲ್ ನೀಡಿದ್ದರು. ಕೇವಲ 40 ಕೆಜಿ ತೂಕವಿದ್ದ ಮಹಿಳೆಗೆ ಇಷ್ಟು ಪ್ರಮಾಣದಲ್ಲಿ ಪ್ಯಾರಾಸಿಟಿಮಲ್ ನೀಡಿರುವುದು ಆಕೆಯ ಸಾವಿಗೆ ಕಾರಣವಾಗಿದೆ.
ಲಾರಾ ಅವರ ಸಾವಿಗೆ ಕಾರಣವೆಂದರೆ ಸೆಪ್ಸಿಸ್, ಸಿರೋಸಿಸ್ ಮತ್ತು ಪ್ಯಾಂಕ್ರಿಯಾಟೈಟಿಸ್‌ನೊಂದಿಗೆ ಅಂಗಾಂಗ ವೈಫಲ್ಯ ಎಂದು ತಿಳಿದುಬಂದಿದೆ. ಚಿಕಿತ್ಸೆ ವೇಳೆ ಪ್ಯಾರಸಿಟಮಾಲ್ ಮಿತಿಮೀರಿದ ಸೇವನೆಯಿಂದಾಗಿ ಲಾರಾ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಆಡಳಿತವು ಕಂಡುಹಿಡಿದಿದೆ. 19 ಏಪ್ರಿಲ್ 2017 ರಂದು ನಡೆದ ಈ ಘಟನೆಯ ಇತ್ತೀಚೆಗೆ ಬೆಳಕಿಗೆ ಬಂದಿವೆ.
ಪ್ಯಾರಸಿಟಮಾಲ್ ಅಪಾಯಕಾರಿಯೇ?
ಸಾಮಾನ್ಯವಾಗಿ ತಲೆನೋವು ಮತ್ತು ಜ್ವರಕ್ಕೆ ವೈದ್ಯರು ಪ್ಯಾರೆಸಿಟಮಾಲ್ ಪೂರಕಗಳನ್ನು ಶಿಫಾರಸು ಮಾಡುತ್ತಾರೆ. ಮಿತ ಪ್ರಮಾಣದಲ್ಲಿ ತೆಗೆದುಕೊಂಡಾಗ ಇವುಗಳನ್ನು ಸುರಕ್ಷಿತವೆಂದು ಪರಿಗಣಿಸಲಾಗುತ್ತದೆ. ಇವುಗಳ ಅತಿಯಾದ ಅಥವಾ ದೀರ್ಘಾವಧಿಯ ಬಳಕೆಯು ಅನೇಕ ಅಡ್ಡ ಪರಿಣಾಮಗಳಿಗೆ ಕಾರಣವಾಗಬಹುದು. ವಾಕರಿಕೆ ಮತ್ತು ಕಿಬ್ಬೊಟ್ಟೆಯ ನೋವಿನಂತಹ ಅಡ್ಡಪರಿಣಾಮಗಳು ಸಂಭವಿಸಬಹುದು. ಕೆಲವು ಜನರು ತುರಿಕೆ, ಊತ, ಉಸಿರಾಟದ ತೊಂದರೆ ಮುಂತಾದ ಅಲರ್ಜಿಯ ಪ್ರತಿಕ್ರಿಯೆಗಳನ್ನು ಸಹ ಅನುಭವಿಸುತ್ತಾರೆ. ಪ್ಯಾರೆಸಿಟಮಾಲ್ ಮಿತಿಮೀರಿದ ಸೇವನೆಯು ಯಕೃತ್ತು ಮತ್ತು ಮೂತ್ರಪಿಂಡದ ವೈಫಲ್ಯಕ್ಕೆ ಕಾರಣವಾಗಬಹುದು. ಪ್ಯಾರೆಸಿಟಮಾಲ್ ಥ್ರಂಬೋಸೈಟೋಪೆನಿಯಾ, ಲ್ಯುಕೋಪೆನಿಯಾ ನಂತಹ ರಕ್ತದ ಅಸ್ವಸ್ಥತೆಗಳಿಗೆ ಕಾರಣವಾಗಬಹುದು.
ಕಿಚ್ಚ ಸುದೀಪ್ ಅವರು ನಡೆಸಿ ಕೊಡುವ ಕನ್ನಡದ ಬಿಗ್ ರಿಯಾಲಿಟಿ ಶೋ ಕನ್ನಡಿಗರ ಮನ ಗೆದ್ದಿದೆ. ವಾರದಿಂದ ವಾರಕ್ಕೆ ಹೆಚ್ಚು ಹೆಚ್ಚು ಜನರನ್ನು ಸೆಳೆಯುತ್ತ ಯಶಸ್ವಿಯಾಗಿ ಸಾಗುತ್ತಿದೆ. ನ್ಯೂ ಇಯರ್ ಹಿನ್ನೆಲೆಯಲ್ಲಿ ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳ ಕುಟುಂಬಸ್ಥರು ಬಂದು ನೋಡಿಕೊಂಡು ಹೋಗುತ್ತಿದ್ದಾರೆ. ಇದೇ ರೀತಿ ಮೋಕ್ಷಿತಾಗೆ ಬಿಗ್ಬಾಸ್ ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ. ಆದರೆ ತಮ್ಮನನ್ನು ನೋಡಿ ಅಕ್ಕ ಮೋಕ್ಷಿತಾ ಕಣ್ಣೀರು ಹಾಕಿರುವುದು ಎಲ್ಲರ ಕರುಳು ಚುರುಕ್ ಅನ್ನುತ್ತೆ.
ಹೊಸ ವರ್ಷ ಬಿಗ್ಬಾಸ್ ಮನೆಯಲ್ಲೂ ಅದ್ಧೂರಿಯಾಗಿ ಸೆಲೆಬ್ರೆಷನ್ ಮಾಡಲಾಗಿದೆ. ಎಲ್ಲ ಸ್ಪರ್ಧಿಗಳು ಸಖತ್ ಆಗಿಯೇ ಕುಣಿದು ಕುಪ್ಪಳಿಸುತ್ತಿದ್ದರು. ಮೋಕ್ಷಿತಾ ಕೂಡ ನಾನೇನು ಕಮ್ಮಿ ಇಲ್ಲ ಎನ್ನುವಂತೆ ಬಿಗ್ಬಾಸ್ಗೆ ಬಂದ ಮೇಲೆ ಪ್ರೀತಿಯ ಸಹೋದರನ್ನು ಮರೆತು ಡ್ಯಾನ್ಸ್ ಮಾಡುತ್ತಿದ್ದರು. ಆದರೆ ಈ ವೇಳೆ ನೋಡಿ ಫುಲ್ ಶಾಕ್ ಆಗಿರೋದು. ಬಿಗ್ಬಾಸ್ ಮನೆಗೆ ಕುಟುಂಬ ಬರುತ್ತಿದ್ದಂತೆ ತಮ್ಮನನ್ನು ನೋಡಿ ಮೋಕ್ಷಿತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಇಷ್ಟು ದಿನ ಬಿಟ್ಟು ಇದ್ದಿದ್ದೆ. ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಪುಟಾಣಿ ಎಂದು ಕರೆದರೂ ವೀಲ್ ಚೇರ್ ಮೇಲಿದ್ದ ಸಹೋದರ, ಮೋಕ್ಷಿತಾರನ್ನ ಯಾರೆಂದು ಗುರುತಿಸಲಿಲ್ಲ. ಅದಕ್ಕೆ ನನ್ನನ್ನು ಮರೆತು ಹೋಗಿದ್ದಾನೆ. ಇಷ್ಟು ದಿನ ಮನೆಯಲ್ಲಿ ಇರದಿದ್ದಕ್ಕೆ ನನ್ನನ್ನು ಮರೆತು ಹೋಗಿ ಬಿಟ್ಟಿದ್ದಾನೆ ಎಂದು ಮೋಕ್ಷಿತಾ, ತಮ್ಮನನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ಮೋಕ್ಷಿತಾ ತಂದೆ, ತಾಯಿ ಕೂಡ ಕಣ್ಣೀರು ಹಾಕಿರುವುದು ಎಲ್ಲರನ್ನೂ ಮೂಕವಿಸ್ಮಿತರಾಗಿ ಮಾಡುತ್ತದೆ.
ಮೋಕ್ಷಿತಾ ತಮ್ಮನ ಪರಿಸ್ಥಿತಿಯನ್ನು ನೋಡಿ ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳು ಬೆರಗಾಗಿದ್ದರು. ಗೌತಮಿಯಂತೂ ದುಃಖಿಸಿರುವುದು ಎಲ್ಲರ ಮನ ಕದಡುವಂತೆ ಇತ್ತು. ಚೈತ್ರಾ, ಮಂಜು, ರಜತ್, ಹನುಮಂತು, ತ್ರಿವಿಕ್ರಮ್, ಧನರಾಜ್ ಎಲ್ಲರ ಮುಖದಲ್ಲಿನ ಭಾವ ಕೂಡ ಏನೋ ಹೇಳುವಂತೆ ಇತ್ತು.
ಉಳ್ಳಾಲ: ಲಾರಿಗೆ ದ್ವಿಚಕ್ರ ವಾಹನವೊಂದು ಡಿ*ಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃ*ತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ನಿನ್ನೆ (ಡಿ.31) ತಡರಾತ್ರಿ ಸಂಭವಿಸಿದೆ. ದೇರಳಕಟ್ಟೆ ಸಮೀಪದ ಪನೀರ್ ನಿವಾಸಿ ಅಝರ್ ಮೃ*ತ ವ್ಯಕ್ತಿ ಎಂದು ತಿಳಿದು ಬಂದಿದೆ.
ಮೃ*ತ ವ್ಯಕ್ತಿ ಸ್ಕೂಟರ್ ನಲ್ಲಿ ಬರುತ್ತಿದ್ದಾಗ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಈ ಸಂದರ್ಭ ರಸ್ತೆಗೆ ಎಸೆಯಲ್ಪಟ್ಟ ಸವಾರನ ಮೇಲೆ ಲಾರಿ ಚಲಿಸಿದ ಪರಿಣಾಮ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾನೆ. ಅಝರ್‌ನ ಮೃ*ತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು/ಚೆನ್ನೈ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಿರ್ಮಿಸಿರುವ ದೇಶದ ಮೊದಲ ಗಾಜಿನ ಸೇತುವೆ ಲೋಕಾರ್ಪಣೆಯಾಗಿದೆ.
ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವರ್ ಪ್ರತಿಮೆಯನ್ನು ಸಂಪರ್ಕಿಸುವ 77ಮೀ. ಉದ್ದದ ಸೇತುವೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಉದ್ಟಾಟಿಸಿದರು. ಸುಮಾರು 37 ಕೋಟಿ ರೂ. ವೆಚ್ಚದಲ್ಲಿ ಈ ಗಾಜಿನ ಸೇತುವೆ ನಿರ್ಮಾಣವಾಗಿದ್ದು, ಪಾರದರ್ಶಕ ಗಾಜಿನ ಮೇಲ್ಮೈ ಹೊಂದಿದೆ. ತಿರುವಳ್ಳುವರ್ ಪ್ರತಿಮೆ ಅನಾವರಣದ ಬೆಳ್ಳಿ ಮಹೋತ್ಸವದಂದು ಸೇತುವೆ ಉದ್ಘಾಟನೆಯಾಗಿದೆ.
ಈ ಸೇತುವೆ 77 ಮೀ (252 ಅಡಿ) ಉದ್ದ ಮತ್ತು 10 ಮೀಟರ್ ಅಗಲವನ್ನು ಹೊಂದಿದ್ದು, ಇಬ್ಬರು ಮಹಾನ್ ವ್ಯಕ್ತಿಗಳ ಸ್ಮಾರಕವಾದ ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವರ್ ಪ್ರತಿಮೆಗೆ ಸಂಪರ್ಕ ಸಾಧಿಸಲಿದ್ದು, ದೇಶದ ಮೊದಲ ಗಾಜಿನ ಸೇತುವೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇದುವರೆಗೆ ಈ ಎರಡು ಸ್ಮಾರಕಗಳಿಗೆ ಭೇಟಿ ನೀಡಲು ಸಮುದ್ರದ ಮೂಲಕವೇ ತೆರಳಬೇಕಿತ್ತು. ಆದರೆ ಗಾಜಿನ ಸೇತುವೆ ಪ್ರವಾಸಿಗರಿಗೆ ಎರಡೂ ಸ್ಮಾರಕ ತಲುಪಲು ಹೊಸ ಮಾರ್ಗ ಕಲ್ಪಿಸಿದೆ. ಜೊತೆಗೆ ಪ್ರವಾಸದ ಹೊಸ ಅನುಭೂತಿ ನೀಡಲಿದೆ.