Connect with us

    BELTHANGADY

    ವಾರದ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ..!

    Published

    on

    ವಾರದ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ..!

    ಬೆಳ್ತಂಗಡಿ: ಒಂದು ವಾರದಿಂದ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕೋಲೋಡಿ ನಿವಾಸಿ 23 ವರ್ಷದ ತೇಜಸ್ವಿನಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ತೇಜಸ್ವಿನಿ ಅವರ ಮೃತದೇಹ  ಮನೆ ಸಮೀಪದ ಅರಣ್ಯದಲ್ಲಿ ಬುಧವಾರ ಪತ್ತೆಯಾಗಿದೆ. ಫೆ.22ರಂದು ತೇಜಸ್ವಿನಿ ಉಜಿರೆಯಿಂದ ಮನೆಗೆ ಹೋಗುವ ಸಂದರ್ಭ ಕಾಣೆಯಾಗಿದ್ದರು.

    ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ದಂಪತಿಯ ಪುತ್ರಿ ತೇಜಸ್ವಿನಿ ಕಳೆದ ನಾಲ್ಕು ವರ್ಷಗಳಿಂದ ಉಜಿರೆ ಪರಿಸರ ನಿವಾಸಿಯೊಬ್ಬರ ಮನೆಯಲ್ಲಿ ಮನೆಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಪಡೆಯುತ್ತಿದ್ದು, ಅವರ ಮನೆಯಲ್ಲಿಯೇ ವಾಸ್ತವ್ಯವಿದ್ದರು.

    ಫೆ.22ರಂದು ಸಂಜೆ ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮರಳಿ ಬಾರದೆ, ನಾಪತ್ತೆಯಾಗಿದ್ದರು.

    ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.ಬುಧವಾರ ಸ್ಥಳೀಯರು ಬಿದಿರು ಕಡಿಯುವ ಉದ್ದೇಶದಿಂದ ಕೋಲೋಡಿ ಕಾಡಿಗೆ ಹೋಗಿದ್ದು, ಈ ವೇಳೆ ಆಕೆಯ ಮೃತದೇಹ ಪತ್ತೆಯಾಗಿದೆ.

    ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಧರ್ಮಸ್ಥಳ  ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BELTHANGADY

    ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ

    Published

    on

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 12ನೇ ವರ್ಷದ ಪಾದಯಾತ್ರೆ ನ.26ರಂದು ಜರುಗಿತು. ತಾಲೂಕಿನ 81 ಗ್ರಾಮಗಳಿಂದ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದರು.

    ಉಜಿರೆ ದೇವಸ್ಥಾನದ ವಠಾರದಲ್ಲಿ ಮಧ್ಯಾಹ್ನ ಶ್ರೀ ಭಗವಾನ್ ಶಿರಡಿಸಾಯಿ ಸತ್ಯಸಾಯಿ ಸೇವಾ ಕ್ಷೇತ್ರ ಹಳಕೋಟೆ ಬೆಳ್ತಂಗಡಿ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಬಳಿಕ ಉಜಿರೆ ದೇವಸ್ಥಾನದ ಧ್ವಜಸ್ತಂಭದ ಬಳಿ ಶ್ರೀ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಅವರು ದೀಪ ಪುಜ್ವಲಿಸಿ ಪಾದಯಾತ್ರೆಗೆ ಚಾಲನೆ ನೀಡಿದರು.

    ಶ್ರೀ ಮಂಜುನಾಥ ಸ್ವಾಮಿಯ ಭಾವಚಿತ್ರವುಳ್ಳ ಟ್ಯಾಬ್, ವಿವಿಧ ಯಕ್ಷಗಾನ ವೇಷ ಭೂಷಣಗಳು, ಭಜನಾ ತಂಡಗಳು, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು, ವಿಪತ್ತು ನಿರ್ವಹಣಾ ತಂಡ, ವಿವಿಧ ಸಂಘ ಸಂಸ್ಥೆಯವರು ಪಾದಯಾತ್ರೆಯಲ್ಲಿ ಶಿಸ್ತಿನಿಂದ ಭಾಗವಹಿಸಿದರು. ಚೆಂಡೆ, ವಾದ್ಯ, ಸಮವಸ್ತ್ರಧಾರಿ ಭಕ್ತರು, ಯಕ್ಷಗಾನ ವೇಷಧಾರಿಗಳು, ಭಜನಾ ತಂಡಗಳ ಕುಣಿತ ಭಜನೆ ಪಾದಯಾತ್ರೆಯಲ್ಲಿ ವಿಶೇಷ ಆಕರ್ಷಣೆಯಾಗಿತ್ತು.

    ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್‌, ಜನಜಾಗೃತಿ ವೇದಿಕೆ ಸ್ಮಾಪಕಾಧ್ಯಕ್ಷ ವಸಂತ ಸಾಲ್ಯಾನ್, ಯು.ಸಿ ಪೌಲೋಸ್, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ನಿಕಟಪೂರ್ವ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್, ಉಜಿರ ಲಕ್ಷ್ಮೀ ಗ್ರೂಪ್ ಮಾಲಕ ಮೋಹನ್ ಕುಮಾರ್, ಲಯನ್ಸ್ ಕ್ಲಬ್ ಪೂರಣ್ ವರ್ಮ, ಮಾಜಿ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಸಿರಿಗ್ರಾಮೋದ್ಯೋಗ ಸಂಸ್ಥೆಯ ನಿರ್ದೇಶಕ ಕೆ.ಎನ್.ಜನಾರ್ದನ್, ನ್ಯಾಯವಾದಿ ಧನಂಜಯ್ ರಾವ್, ಅಖಿಲ ಕರ್ನಾಟಕ ಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನ, ಮಾಜಿ ಅಧ್ಯಕ್ಷ, ತಿಮ್ಮಪ್ಪ ಗೌಡ ಬೆಳಾಲು, ಡಿ.ಎ ರಹಿಮಾನ್, ಉದ್ಯಮಿ ಮೋಹನ ಶೆಟ್ಟಿಗಾರ್, ರಾಘವೇಂದ್ರ ನಾಯಕ್, ಕೊರಗಪ್ಪ ಗೌಡ ಚಾರ್ಮಾಡಿ, ಸೀತಾರಾಮ ಬೆಳಾಲ್, ರವೀಂದ್ರ ಶೆಟ್ಟಿ, ಬಳಂಜ, ಡಾ. ಶ್ರೀಧರ ಭಟ್, ರವಿ ಚಕ್ಕಿತ್ತಾಯ, ವಡಿವೇಲು ಗುರುವಾಯನಕೆರೆ, ಮಮತಾ ಶೆಟ್ಟಿ, ಅಡೂರು ವೆಂಕಟ್ರಾವ್, ಜಯಂತಿ ಪಾಲೇದು, ಗಣೇಶ್ ಗೌಡ,, ಪುಭಾಕರ ಪೂಸಂದೋಡಿ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಬೂದಪ್ಪ ಗೌಡ, . ಉದ್ಯಮಿ ರಾಘವೇಂದ್ರ ಬೈಪಾಡಿತ್ತಾಯ, ವಿವೇಕ್ ವಿನ್ಸೆಂಟ್ ಪಾಯಿಸ್, ಮಮತಾ ಎಂ. ಶೆಟ್ಟಿ,, ಶ್ಯಾಮ್ ಸುಂದರ್ ನಡ, ಶಶಿಧರ ಕಲ್ಮಂಜ, ಅರುಣ್ ಕುಮಾರ್, ಡಾ. ಬಿ.ಎ ಕುಮಾರ ಹಗ್ಗ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ| ಶ್ರೀನಾಥ್, ನ್ಯಾಯವಾದಿ ಧನಂಜಯ್‌ ರಾವ್, ಅಡೂರು ವೆಂಕಟ್ರಾವ್,, ತಿಮ್ಮಪ್ಪ ಗೌಡ ಬೆಳಾಲು, ಪುಷ್ಪರಾಜ ಹೆಗ್ಡೆ ಮಡಂತ್ಯಾರು, ಉಜಿರ ಗ್ರಾ.ಪಂ ಅಧ್ಯಕ್ಷ ಮಾಜಿ ಅಧ್ಯಕ್ಷ ಪುಷ್ಪಾವತಿ ಆರ್ ಶೆಟ್ಟಿ, ವಿಠಲ ಶೆಟ್ಟಿ, ಲಾಯಿಲ, ಶಂಕರ ಹೇಡ, ಯೋಗೀಶ್ ಕುಮಾರ್ ನಡಕ್ಕರ, ಗಿರೀಶ್ ವೇಣೂರು, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರುಗಳಾದ ಡಿ.ಎ ರಹಿಮಾನ್, ತಿಮ್ಮಪ್ಪ ಗೌಡ, ಕಿಶೋರ್ ಹಗ್ಡೆ, ಪುಷ್ಪರಾಜ ಹಗ್ಡೆ ಮಡಂತ್ಯಾರು, ರತ್ನವರ್ಮ ಬುಣು, ಪ್ರಶಾಂತ ಪಾರಂಕಿ, ದುಗೇಗೌಡ, ತಾಲೂಕು ಯೋಜನಾಧಿಕಾರಿಗಳು, ತಾಲೂಕಿನ ಗಣ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ೧೫ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ನಾಗರಿಕರು, ಹಗಡೆ ಅಭಿಮಾನಿಗಳು ಮರವಣಿಗೆಯ ಜೊತ ಸಾಗಿದರು.

    Continue Reading

    BELTHANGADY

    ಇಂದಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

    Published

    on

    ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ಇಂದಿನಿಂದ ಆರಂಭಗೊಳ್ಳಲಿದೆ. ಬೆಳಿಗ್ಗೆ 10.30 ಗಂಟೆಗೆ ಎಸ್ ಪಿ ಯತೀಶ್ ಎನ್. ಧರ್ಮಸ್ಥಳ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.

    ಧರ್ಮಸ್ಥಳದಲ್ಲಿ ನ. 26ರಂದು ಹೊಸ ಕಟ್ಟೆ ಉತ್ಸವ, 27ರಂದು ಕೆರೆಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿ ಮಾರುಕಟ್ಟೆ ಉತ್ಸವ, 30ರಂದು ಗೌರಿ ಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯಲಿದೆ.

    ಡಿ.1ರಂದು ಸಂಜೆ 6.30ಕ್ಕೆ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣಪೂಜೆ ನಡೆಯಲಿದೆ. ನ. 28 ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 5:30 ರಿಂದ ನಾಗಸ್ವರ ವಾದನ, 7 ಗಂಟೆಯಿಂದ ಸಾತ್ವಿಕ ಸಂಗೀತ, ನೃತ್ಯಾರ್ಚನೆ, ನೃತ್ಯ ರೂಪಕ ಇತ್ಯಾದಿ ಕಾರ್ಯಕ್ರಮಗಳು ಜರುಗಲಿವೆ.

    ಸರ್ವಧರ್ಮ ಸಮ್ಮೇಳನ

    ಅಮೃತವರ್ಷಿಣಿ ಸಭಾಭವನದಲ್ಲಿ ನ. 29ರಂದು ಸಂಜೆ 5ಗಂಟೆಯಿಂದ ಸರ್ವ ಧರ್ಮ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಉದ್ಘಾಟಿಸುವರು. ಬೆಂಗಳೂರು ರಾಜರಾಜೇಶ್ವರಿ ನಗರದ ಶ್ರೀ ಕೈಲಾಸ ಆಶ್ರಮ ಮಹಾ ಸಂಸ್ಥಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಸಂಶೋಧಕ ಡಾ. ಜಿ. ಬಿ. ಹರೀಶ, ಡಾಕ್ಟರ್ ಜೋಸೆಫ್ ಎನ್ ಎಂ, ಮೆಹತಾಬ ಇಬ್ರಾಹಿಂ ಸಾಬ ಕಾಗವಾಡ ಅವರಿಂದ ಉಪನ್ಯಾಸ ಬಳಿಕ ಭರತನಾಟ್ಯ ಕಾರ್ಯಕ್ರಮ ಇರಲಿದೆ.

    ಸಾಹಿತ್ಯ ಸಮ್ಮೇಳನ

    ನ. 30ರಂದು ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು, ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನಿ ಡಾ.ರಾ. ಗಣೇಶ ಉದ್ಘಾಟಿಸುವರು. ಲೇಖಕ ಸಂಶೋಧಕ ಡಾ. ಪಾದೆಕಲ್ಲು ವಿಷ್ಣುಭಟ್ಟ ಅಧ್ಯಕ್ಷತೆ ವಹಿಸುವರು. ಬಳಿಕ ಡಾ. ಪ್ರಮೀಳಾ ಮಾಧವ, ಡಾ.ಬಿ.ವಿ. ವಸಂತ ಕುಮಾರ್ ಪ್ರೊ. ಮೊರಬದ ಮಲ್ಲಿಕಾರ್ಜುನ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8.30 ರಿಂದ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮವಿದೆ. ಪ್ರತಿದಿನ ಸಂಜೆ 6:30 ರಿಂದ ರಾತ್ರಿ 11 ಗಂಟೆವರೆಗೆ ವಸ್ತು ಪ್ರದರ್ಶನ ಮಂಟಪ ಹಾಗೂ ಅಮೃತವರ್ಷಿಣಿ ವೇದಿಕೆಯಲ್ಲಿ ಸಾಂಸ್ಕೃತಿಕ, ಸಂಗೀತ ಹಬ್ಬ ನಡೆಯಲಿದೆ.

    Continue Reading

    Baindooru

    ಹೊಸ ಟ್ರೆಂಡ್‌ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

    Published

    on

    ಬೆಳ್ತಂಗಡಿ: ಯುವಕನೊಬ್ಬತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಸೇರಿ ಆತನನ್ನು ತಡೆದು ಎರಡು ಕೈಗಳನ್ನು ಲಾಕ್ ಮಾಡಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರಿಂದ ನೋಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.22ರ ಶುಕ್ರವಾರ ನಡೆದಿದೆ.

    ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್(21) ಆತ್ಮಹತ್ಯೆಗೆ ಯತ್ನಿಸಿದ ಯುವಕ.

    ಈತನ ವಿಡಿಯೋ ವೈರಲ್ ಆಗುತ್ತಲೇ, ತನ್ನ ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದ ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ ಎಂದು ತಿಳಿದು ಬಂದಿದೆ.

    ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಹರಿದ ರೀತಿಯಲ್ಲಿತ್ತು. ಅದನ್ನು ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಮಾರುಕಟ್ಟೆಯಲ್ಲಿದ್ದ ಪಡ್ಡೆ ಹುಡುಗರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್‌ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು.

    ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬಿರ್, ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರದ ನಿವಾಸಿ ಸಲೀಂ ಎಂಬವರು ಸೇರಿ ಈ ದುಷ್ಕ್ರತ್ಯ ನಡೆಸಿದ್ದಾರೆ ಎನ್ನಲಾಗಿದೆ.

    ವಿಡಿಯೋ ಮಾಡಿ ಟ್ರೋಲ್ ಮಾಡಿದರಿಂದ ಮಾನಸಿಕವಾಗಿ ನೊಂದ ಶಾಹಿಲ್ ನ.21 ರಂದು ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು, ತಕ್ಷಣ ಮನೆಯವರು ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಈ ಘಟಣೆ ಬಗ್ಗೆ ಸಾರ್ವಜನಿಕರು ಈ ಮೂವರನ್ನು ಪುಂಡರ ವಿರುದ್ಧ ಕಠಿನ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.

    Continue Reading

    LATEST NEWS

    Trending