ವಿದೇಶದಿಂದ ಮಂಗಳೂರಿಗೆ ಆಗಮಿಸಿದ್ದ ಮಹಿಳೆ: ಉಳ್ಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ
ಮಂಗಳೂರು: ವಿದೇಶದಿಂದ ತಾಯ್ನಾಡಿಗೆ ಮರಳಿದ ಮಹಿಳೆಯೊಬ್ಬರಿಗೆ ಶೀತ ಜ್ವರ ಬಾಧಿಸಿತ್ತು.
ಕೊರೊನಾ ಬಾಧಿಸಿರಬಹುದು ಎಂದು ವೈರಲ್ ಆಗುತ್ತಿದ್ದಂತೆಯೇ ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮಿ ಗಟ್ಟಿ ಜಾಗೃತರಾದರು.
ಕೂಡಲೇ ಅವರು ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಉಳ್ಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಹಕಾರದಿಂದ ಮಹಿಳೆಯ ಮನೆ ಪತ್ತೆ ಹಚ್ಚಿದ್ದಾರೆ.
ಬಳಿಕ ಆಕೆಗೆ ಮನೆಯಲ್ಲಿಯೇ ಆರೋಗ್ಯ ಪರೀಕ್ಷೆ ನಡೆಸಿ ವಿಶೇಷ ನಿಗಾ ವಹಿಸುವಂತೆ ಏರ್ಪಾಡು ಮಾಡಿ ಸ್ಥಳೀಯರ ಆತಂಕ ದೂರ ಮಾಡುವ ಪ್ರಯತ್ನ ಮಾಡಿದ್ದಾರೆ.
ಜಿಲ್ಲೆಯಲ್ಲಿ ಶುಕ್ರವಾರ (ಮಾರ್ಚ್ 20)ರಾತ್ರಿ ತನಕ ಹತ್ತು ಮಂದಿಗೆ ಕೊರೊನಾ ಬಾಧಿಸಿರುವ ಶಂಕೆ ವ್ಯಕ್ತವಾಗಿತ್ತಾದರೂ, ಶನಿವಾರ (ಮಾರ್ಚ್ 21) ಬೆಳಗ್ಗಿನಿಂದ ರಾತ್ರಿ ತನಕ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಕೊರೊನಾ ಶಂಕಿತ ರೋಗಿಗಳ ಪತ್ತೆಯಾಗಿರಲಿಲ್ಲ.
ರಾತ್ರಿ ಎಂಟು ಗಂಟೆಯ ಹೊತ್ತಿಗೆ ತೊಕ್ಕೊಟ್ಟು ಪಂಡಿತ್ ಹೌಸ್ ನ ಅಂಗಡಿಯೊಂದಕ್ಕೆ ಸಾಮಾನು ಖರೀದಿಗೆಂದು ತೆರಳಿದ್ದ ವೃದ್ಧೆಯೊಬ್ಬರು
ಅಂಗಡಿ ಮಾಲೀಕರ ಜೊತೆಗೆ ಕುಶಲೋಪಚಾರ ಮಾಡುತ್ತಾ ನನ್ನ ಮಗಳು ವಿದೇಶದಿಂದ ಬಂದಿದ್ದು, ಸ್ವಲ್ಪ ಶೀತ ಜ್ವರ ಇದ್ದು ಏನಾಗಿದೆಯೋ ಗೊತ್ತಿಲ್ಲ ಎಂದು ಹೇಳಿದ್ದರು.
ಇದನ್ನು ಗಂಭಿರವಾಗಿ ತೆಗೆದುಕೊಂಡ ಅಂಗಡಿ ಮಾಲೀಕರು ತಕ್ಷಣ ಜಾಗೃತರಾಗಿ, ಸ್ಥಳೀಯರನ್ನು ಸೇರಿಸಿಕೊಂಡು ಜಿಲ್ಲಾ ಪಂಚಾಯಿತಿ ಶಿಕ್ಷಣ, ಆರೋಗ್ಯ ಹಾಗೂ ಸ್ಥಾಯಿ ಸಮಿತಿ ಪ್ರೆಸಿಡೆಂಟ್ ಧನಲಕ್ಷ್ಮಿ ಗಟ್ಟಿ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.
ಧನಲಕ್ಷ್ಮಿ ಅವರು ಶಂಕಿತರ ಮನೆ ಮಂದಿ, ಸಂಬಂಧಿಕರಿಗೆ ಕರೆ ಮಾಡಿದಾಗ ಕರೆ ಸ್ವೀಕರಿಸಲಿಲ್ಲ.
ಕಡೆಗೂ ಸಂಬಂಧಿಕರೊಬ್ಬರ ಮೂಲಕ ಕರೆ ಮಾಡಿ ವಿಚಾರಿಸಿದಾಗ ವಿಷಯ ಮರೆಮಾಚುವ ಪ್ರಯತ್ನ ನಡೆಸಿದಾಗ ಪ್ರಕರಣದ ಗಂಭೀರತೆ ಅರಿತು,
ರಾತ್ರೋರಾತ್ರಿ ಡಿಎಚ್ ಒ ಡಾ. ರಾಜೇಶ್, ಉಳ್ಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಪ್ರಶಾಂತ್ ಅವರಿಗೆ ಮಾಹಿತಿ ನೀಡಿ,
ಭಾನುವಾರ (ಮಾರ್ಚ್ 22) ಬೆಳಗ್ಗೆ ಆ ಮನೆಗೆ ತೆರಳಿ ಅವರಿಗೆ ಪ್ರಕರಣದ ಗಂಭೀರತೆಯ ಮನವರಿಕೆ ಮಾಡಿ ಆರೋಗ್ಯ ಪರೀಕ್ಷಿಸಲು ಸಹಕರಿಸುವಂತೆ ಮನವೊಲಿಸಿದ್ದಾರೆ.
ಕಡೆಗೂ ಒಪ್ಪಿದ ಮಹಿಳೆಯ ಆರೋಗ್ಯ ತಪಾಸಣೆ ನಡೆಸಿ ಆಕೆಗೆ ಕೊರೊನಾ ಬಾಧಿಸಿರುವ ಸ್ವಲ್ಪವೂ ಲಕ್ಷಣ ಕಂಡುಬರದಿರುವ ಹಿನ್ನೆಲೆಯಲ್ಲಿ
ವಿಶೇಷ ನಿಗಾ ವಹಿಸುವಂತೆಯೂ ವಿಮಾನ ನಿಲ್ದಾಣದಲ್ಲಿ ಸೂಚಿಸಿರುವಂತೆ ಪ್ರತಿ ಒಂದು ಗಂಟೆಗೊಮ್ಮೆ ಹೆಲ್ಪ್ ಲೈನ್ ಗೆ ಕರೆ ಮಾಡುವಂತೆ ವೈದ್ಯರು ಸೂಚಿಸಿದ್ದಾರೆ.
ಇನ್ನೊಂದೆಡೆ ರಾತ್ರಿ ವಿಷಯ ವೈರಲ್ ಆಗುತ್ತಿದ್ದಂತೆಯೇ ಕೆಲವು ಮನೆಮಂದಿ ಕಿಟಕಿ ಬಾಗಿಲು ಮುಚ್ಚಿ ವೈರಸ್ ಹರಡುವ ಭಯಕ್ಕೆ ಅಲರ್ಟ್ ಆಗಿದ್ದು, ಬೆಳಗ್ಗೆ ನಿರಾಳರಾದರು.
ಹಾಗೆಯೇ ಅಕ್ಕಪಕ್ಕದ ಐದು ಮನೆ ಮಂದಿ ಮನೆಗೆ ಬಾಗಿಲು ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದು ಕೊರೊನಾ ಹರಡುವ ಬಗ್ಗೆ ಇನ್ನೂ ಜಾಗೃತಿ ಮೂಡಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಂಡ ಧನಲಕ್ಷ್ಮಿ ಗಟ್ಟಿ ಅವರು,
ಕೊರೊನಾ ಭಯಬೇಡ, ಮುನ್ಬೆಚ್ಚರಿಕೆ ವಹಿಸಿ ಎಂಬ ಜಾಗೃತಿ ಮುನ್ನೆಚ್ಚರಿಕಾ ಕ್ರಮಗಳ ಮಾಹಿತಿಯುಳ್ಳ ಕರಪತ್ರವನ್ನು ಸ್ಥಳೀಯ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಜೊತೆಗೆ ಮನೆ ಮನೆಗೆ ತೆರಳಿ ಮನವರಿಕೆ ಮಾಡಿಸಿದ್ದಾರೆ.
ಆ ಮೂಲಕ ಜನತಾ ಕರ್ಫ್ಯೂಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದ ಧನಲಕ್ಷ್ಮಿ ಗಟ್ಟಿ ಅವರು ತೋರಿದ ಕಾಳಜಿಗೆ ಶ್ಲಾಘನೆ ವ್ಯಕ್ತವಾಗಿದೆ.
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.
ಮಂಗಳೂರು/ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಯ ಕಾರು ಚಾಲಕ ನೇ*ಣಿಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ(25) ಆತ್ಮಹ*ತ್ಯೆ ಮಾಡಿಕೊಂಡವರು. ಸುನಿಲ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಾಸಕ ಚಂದ್ರು ಲಮಾಣಿ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಸುನೀಲ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಆತ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ . ಮನೆ ಕಟ್ಟುವ ವಿಚಾರದಲ್ಲಿ ಸಹೋದರರ ನಡುವೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಸುನಿಲ್ ಆತ್ಮಹ*ತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ನೀವು ಚಿಕ್ಕವರಾಗಿರಲಿ ಅಥವಾ ವಯಸ್ಸಾದವರಾಗಿರಲಿ ಸಿಹಿತಿಂಡಿ ಸೇವಿಸಿದ ನಂತರ ಹಲ್ಲುಗಳನ್ನ ಸ್ವಚ್ಛಗೊಳಿಸುವಲ್ಲಿನ ಅಜಾಗರೂಕತೆಯು ಹಲ್ಲುಗಳಿಗೆ ಸೋಂಕು ತಗುಲಿಸಬಹುದು. ಇದು ಇಡೀ ಹಲ್ಲನ್ನು ಹಾನಿಗೊಳಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ದಂತವೈದ್ಯರ ಬಳಿಗೆ ಹೋಗುತ್ತಾರೆ ಮತ್ತು ಆಗಾಗ್ಗೆ ಹಲ್ಲುಗಳನ್ನ ಕೀಳಬೇಕಾಗುತ್ತದೆ. ಯಾಕಂದ್ರೆ, ಇದು ಇತರ ಹಲ್ಲುಗಳಿಗೆ ಹಾನಿ ಮಾಡುವ ಅಪಾಯವನ್ನ ಹೆಚ್ಚಿಸುತ್ತದೆ.
ಇಂದಿಗೂ ಸಹ ನಾವು ನಮ್ಮ ಹಿರಿಯರ ಹಳೆಯ ಪರಿಹಾರಗಳನ್ನ ಅನುಸರಿಸುವ ಮೂಲಕ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು. ಇಂದು ನಾನು ನಿಮಗೆ ಅಂತಹ ಮನೆಮದ್ದನ್ನ ಹೇಳಲಿದ್ದೇನೆ, ಅದನ್ನು ಬಳಸಿಕೊಂಡು ನೀವು ದಂತವೈದ್ಯರ ಬಳಿಗೆ ಹೋಗದೆ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು.
ಚಾಕೊಲೇಟ್ ತಿನ್ನುವುದರಿಂದ ಮಕ್ಕಳ ಹಲ್ಲುಗಳು ಹಾನಿಗೊಳಗಾಗುತ್ತವೆ. ಆಹಾರ ಅಥವಾ ಸಿಹಿತಿಂಡಿಗಳನ್ನು ಸೇವಿಸಿದ ನಂತರ ನಾವು ತೊಳೆಯುವುದಿಲ್ಲ. 10 ರಿಂದ 12 ವರ್ಷ ವಯಸ್ಸಿನಲ್ಲಿ, ಕುಳಿಗಳಿಂದಾಗಿ ಮಕ್ಕಳ ಹಲ್ಲುಗಳು ಕ್ಷೀಣಿಸಲು ಪ್ರಾರಂಭಿಸುತ್ತವೆ.
ಇದನ್ನು ತಡೆಗಟ್ಟಲು ಸುಲಭ ಮಾರ್ಗವಿದೆ. ಯಾರಿಗಾದರೂ ಹಲ್ಲಿನಲ್ಲಿ ಕುಳಿ ಇದ್ದರೆ, ನೀವು ಅದನ್ನು ಮನೆಯಲ್ಲಿಯೇ ತೆಗೆದುಹಾಕಬಹುದು. ಮೊದಲಿಗೆ, ಈರುಳ್ಳಿ ಬೀಜಗಳನ್ನ ಮಾರುಕಟ್ಟೆಯಿಂದ ತರಬೇಕು. ನಂತರ ಬೆಂಕಿಯನ್ನ ಹೊತ್ತಿಸಿ ಕೆಂಡದ ಮೇಲೆ ಈರುಳ್ಳಿ ಬೀಜಗಳನ್ನ ಹಾಕಿ ಬಂದ ಹೊಗೆಯನ್ನ ಬಾಯಿಯಲ್ಲಿ ಶೇಖರಿಸಿ ನಂತ್ರ ಮುಚ್ಚಿ. ಈ ಪ್ರಕ್ರಿಯೆಯನ್ನ ಎರಡರಿಂದ ಮೂರು ಬಾರಿ ಮಾಡಿ. ಈಗ ನಿಮ್ಮ ಬಾಯಿಯಲ್ಲಿ ನೀರು ಹಾಕಿಕೊಂಡು ಮುಕ್ಕಳಿಸಿ ಆ ಬಟ್ಟಲಿನಲ್ಲಿ ಉಗುಳಿ. ಈಗ ಆ ಬಟ್ಟಲಿನಲ್ಲಿರುವ ನೀರಿನಲ್ಲಿ ಎಲ್ಲಾ ಹುಳುಗಳು ಗೋಚರಿಸುತ್ತವೆ.