Thursday, March 23, 2023

ಚೆನೈ: ರಸ್ತೆ ಬದಿ ಹಳೆ ಕಟ್ಟಡ ನೆಲಸಮದ ವೇಳೆ ಗೋಡೆ ಕುಸಿತ- ಮಹಿಳಾ ಟೆಕ್ಕಿ ದುರ್ಮರಣ..!

ಚೆನ್ನೈ : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಟ್ಟಡವೊಂದು ಕುಸಿದು ಬಿದ್ದು ಮಹಿಳಾ ಟೆಕ್ಕಿ ಮೃತಪಟ್ಟಿರುವ ದಾರುಣ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ಇಂದು ಬೆಳಗ್ಗೆ ನಡೆದಿದೆ.

25 ವರ್ಷದ ಪ್ರಿಯಾ ಎಂಬುವವರೇ ಮೃತ ದುರ್ದೈವಿ ಮಹಿಳೆಯಾಗಿದ್ದಾರೆ. ಖಾಸಗಿ ಐಟಿ ಕಂಪನಿಯ ಉದ್ಯೋಗಿಯಾದ ಮಧುರೈ ಮೂಲದ ಪ್ರಿಯಾ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಕೆಲಸಕ್ಕಾಗಿ ಚೆನ್ನೈಗೆ ಬಂದು ನೆಲೆಸಿದ್ದರು ಎಂದು ತಿಳಿದು ಬಂದಿದೆ.

ಚೆನ್ನೈನ ಮೌಂಟ್​ ರಸ್ತೆಯಲ್ಲಿರುವ ಥೌಸಂಡ್ ಲೈಟ್ ಸುರಂಗದ ಸಮೀಪ ಹಳೆಯ ಕಟ್ಟಡಗಳ ನೆಲಸಮ ಕಾರ್ಯ ಪ್ರಗತಿಯಲ್ಲಿದೆ. ಇಂದು ಬೆಳಗ್ಗೆ ಜೆಸಿಬಿ ಯಂತ್ರದ ಮೂಲಕ ಕಟ್ಟಡಗಳನ್ನು ಕೆಡವುವ ಕಾರ್ಯ ನಡೆಯುತ್ತಿತ್ತು.

ಆಗ ಏಕಾಏಕಿ ಕಟ್ಟಡದ ಒಂದು ಭಾಗ ಕುಸಿದು ಹೊರಗೆ ಬಿದ್ದಿದೆ. ಆ ವೇಳೆ, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರಿಯಾ ಅವಶೇಷಗಳಡಿ ಸಿಲುಕಿದ್ದಾರೆ.

ಇದನ್ನು ಕಂಡ ಸಾರ್ವಜನಿಕರು ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು 20 ನಿಮಿಷಗಳ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಪ್ರಿಯಾ ರಕ್ಷಿಸಿ, ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಆದರೆ, ಅಷ್ಟರಲ್ಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪ್ರಿಯಾ ಕಚೇರಿಗೆ ಹೋಗಲಿ ಎಂದು ಬಸ್ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

ಇದೇ ವೇಳೆ ಮತ್ತೊಬ್ಬ ಪಾದಚಾರಿ ಸಹ ಗಾಯಗೊಂಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...