Connect with us

    LATEST NEWS

    ಗೃಹಲಕ್ಷ್ಮಿ ಹಣದಿಂದ ಖಾರ ಪುಡಿ ಮಾಡೋ ಯಂತ್ರ ಖರೀದಿಸಿದ ಮಹಿಳೆ!

    Published

    on

    ಬೆಳಗಾವಿ: ಸಿಎಂ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯಿಂದ ಹೆಣ್ಣು ಮಕ್ಕಳಿಗಂತೂ ಇದರಿಂದ ತುಂಬಾ ಪ್ರಯೋಜನ ಸಿಕ್ಕಿದೆ. ಈಗಾಗಲೇ ಗೃಹಲಕ್ಷ್ಮಿ ಹಣದಿಂದ ಸೊಸೆಗೆ ಬಳೆ ಮಳಿಗೆ, ಮಗನಿಗೆ ಬೈಕ್, ಊರಿಗೊಂದು ಲೈಬರಿ, ಮನೆಗೊಂದು ಎತ್ತು, ಹೋಳಿಗೆ ಊಟ, ಟಿವಿ ಹೀಗೆ ಅನೇಕ ವಸ್ತುಗಳನ್ನು ಖರೀದಿಸಿ ತಮಗಾದ ಅನುಕೂಲತೆ ಬಗ್ಗೆ ಹೇಳಿದ್ದಾರೆ. ಅದರಂತೆಯೇ ಇದೀಗ ಗೃಹಲಕ್ಷ್ಮಿ ಹಣದಿಂದ ಮಹಿಳೆಯೊಬ್ಬರು ಖಾರ ಪುಡಿ ಮಾಡೋ ಯಂತ್ರ ಖರೀದಿಸಿರುವ ಸಂಗತಿ ಬೆಳಕಿಗೆ ಬಂದಿದೆ.

    ಹೌದು. ಗೃಹಲಕ್ಷ್ಮಿ ಹಣ ಜೋಡಿಸಿ ಅದರಿಂದ ಖಾರ ಪುಡಿ ಮಾಡೋ ಯಂತ್ರವನ್ನು ಮಹಿಳೆಯೊಬ್ಬರು ಖರಿದೀಸಿದ್ದಾರೆ. ಯಂತ್ರವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟನೆ ಮಾಡಿದ್ದಾರೆ.

    ಬೆಳಗಾವಿ ತಾಲೂಕಿನ ಕುಕಡೊಳ್ಳಿ ಗ್ರಾಮದ ತಾಯವ್ವ ಲಕಮೋಜಿ ಖಾರ ಪುಡಿ ಮಾಡೋ ಯಂತ್ರವನ್ನು ಖರೀದಿಸಿ ಗೃಹಲಕ್ಷ್ಮಿ ಪ್ರಯೋಜನ ಪಡೆದಿದ್ದಾರೆ. ಈ ಯಂತ್ರವನ್ನು ಉದ್ಘಾಟಿಸಲೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಆಹ್ವಾನಿಸಿದ್ದಾರೆ. ಅವರ ಕೈಯಾರೆ ಉದ್ಘಾಟನೆ ಮಾಡಿದ್ದಾರೆ.

    ಗೃಹಲಕ್ಷ್ಮಿ ಹಣದಲ್ಲಿ ಅನೇಕ ಮಹಿಳೆಯರಿಗೆ ಉಪಯೋಗವಾಗಿದೆ. ಇದರಿಂದಾಗಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಸಚಿವೆ ಸಂತಸ ವ್ಯಕ್ತಪಡಿಸಿದ್ದಾರೆ.

    LATEST NEWS

    ಉಡುಪಿ : ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ವಂಚನೆ; 2.80 ಲಕ್ಷ ಕಳೆದುಕೊಂಡ ಯುವತಿ !

    Published

    on

    ಉಡುಪಿ : ಮೊಬೈಲ್‌ನಲ್ಲಿ ಕ್ರಿಪ್ಟೋ ಕರೆನ್ಸಿ ಬಗ್ಗೆ ಸಂದೇಶ ಪಡೆದ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಚೈತ್ರಾ (26) , ಸೈಬರ್ ವಂಚಕರ ಮೋಸಕ್ಕೆ ಬಲಿಯಾಗಿ 2.80 ಲಕ್ಷ ರೂ. ಕಳೆದುಕೊಂಡಿದ್ದಾರೆ.

    ಸುಮಾರು ಏಳು ತಿಂಗಳ ಹಿಂದೆ ತನ್ನ ಮೊಬೈಲ್‌ನಲ್ಲಿ ಮಾಡಿದ ಮೆಸೇಜ್‌ಗೆ ವಿಡಿಯೋ ಒಂದನ್ನು ಡೌನ್‌ಲೋಡ್ ಮಾಡುವಂತೆ ತಿಳಿಸಿದ್ದು, ಅದರಿಂದ ಗೇಮ್ ಡೌನ್‌ಲೋಡ್ ಮಾಡಿದ್ದರು. ಅದಕ್ಕೆ 20,000ರೂ. ಹಾಕುವಂತೆ ಬಂದ ಸೂಚನೆಯಂದೆ ಗೂಗಲ್‌ಪೇ ಮೂಲಕ ಹಣ ಹಾಕಿದ್ದರು.

    ಅದೇ ರೀತಿ ಸೈಬರ್ ವಂಚಕರ ವಿವಿಧ ಖಾತೆಗಳಿಗೆ ಒಟ್ಟು 2,80,000ರೂ. ಗಳನ್ನು ಗೂಗಲ್‌ಪೇ ಮೂಲಕ ಹಾಕಿದ್ದು, ಕೊನೆಗೂ ಆನ್‌ಲೈನ್ ವಂಚಕರಿಂದ ಮೋಸ ಹೋಗಿರುವುದು ತಿಳಿದಿದೆ.

    ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    BIG BOSS

    BBK11: ಬಿಗ್​ಬಾಸ್​ ಮನೆಯಿಂದ ಆಚೆ ಬರುತ್ತಿದ್ದಂತೆ ಮದ್ವೆ ಆಗ್ತಾರಂತೆ ಈ ಸ್ಪರ್ಧಿ; ಯಾರವರು?

    Published

    on

    ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11 ಐದನೇ ವಾರಕ್ಕೆ ಕಾಲಿಟ್ಟಿದೆ. ಇದೇ ಸಂದರ್ಭದಲ್ಲಿ ಬಿಗ್​ಬಾಸ್​ಗೆ ಮೂರನೇ ವಾರಕ್ಕೆ ವೈಲ್ಡ್ ಕಾರ್ಡ್ ಆಗಿ ಎಂಟ್ರಿ ಕೊಟ್ಟಿದ್ದ ಗಾಯಕ ಹನುಮಂತ ಮದುವೆ ಆಗ್ತಾರಂತೆ. ಹೌದು, ಬಿಗ್​ಬಾಸ್​ ಮನೆಯಿಂದ ಆಚೆ ಬಂದ ಬೆನ್ನಲ್ಲೇ ಮದುವೆ ಆಗ್ತಾ ಇರೋದೆ ಅಂತ ಹೇಳಿದ್ದಾರೆ.

    ಗೌತಮಿ ಜಾಧವ್​ ಯಾವಾಗ ಮದುವೆ ಆಗ್ತೀರಾ ಅಂತ ಹೇಳುತ್ತಾರೆ. ಆಗ ಅದಕ್ಕೆ ಹನುಮಂತ ಇಲ್ಲಿಂದ ಹೋಗಿದ ಕೂಡಲೇ ಮದ್ವೆ ಆಗ್ತೀನಿ. ಹುಡುಗಿ ಇದ್ದಾಳೆ ಅಂತ ಹೇಳಿದ್ದಾರೆ. ಅದಕ್ಕೆ ಗೌತಮಿ ಆ ಹುಡುಗಿ ಹೆಸರೇನು? ಅವರ ಬಗ್ಗೆ ಒಂದು ಹಾಡು ಹಾಡಿ ಅಂತ ಪಿಡಿಸಿದ್ದಾರೆ. ಇದಾದ ಬಳಿಕ ಗೌತಮಿ ಅವರ ಮುಂದೆ ಎರಡು ಹಾಡು ಹಾಡಿದ್ದಾರೆ.

    ಸದ್ಯ ಬಿಗ್​ಬಾಸ್​ ಮನೆಗೆ ಬಂದ ಹನುಮಂತ ಅವರು ಎರಡು ಬಾರಿ ಕ್ಯಾಪ್ಟನ್​ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಇದೇ ಮೊದಲ ಬಾರಿಗೆ ಕಿಚ್ಚ ಸುದೀಪ್​ ಅವರಿಂದ ಚಪ್ಪಾಳೆ ಹೊಡೆಸಿಕೊಂಡು ಸಹ ಸ್ಪರ್ಧಿಗಳಿಗೆ ಶಾಕ್​ ನೀಡಿದ್ದರು. ಸದ್ಯ ಬಿಗ್​ಬಾಸ್​ ಮನೆಯಲ್ಲಿ ಹನುಮಂತ ಅವರು ಎಲ್ಲರ ಜೊತೆಗೆ ಒಳ್ಳೆಯ ಬಾಂಧವ್ಯವನ್ನು ಇಟ್ಟುಕೊಂಡಿದ್ದಾರೆ.

    Continue Reading

    DAKSHINA KANNADA

    ಹಿಂದುಗಳ ಶ್ರದ್ಧಾಕೇಂದ್ರದ ಗುರುಗಳ ಮೇಲೆ ನಡೆದಿರುವ ದಾ*ಳಿ ಅತ್ಯಂತ ಗಂಭೀ*ರ ವಿಚಾರ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

    Published

    on

    ಮಂಗಳೂರು : ಕಾಸರಗೋಡಿನ ಎಡನೀರು ಮಠದ ಶ್ರೀಸಚ್ಚಿದಾನಂದ ಭಾರತೀ ತೀರ್ಥ ಶ್ರೀಗಳು ಸಂಚರಿಸುತ್ತಿದ್ದ ಕಾರನ್ನು ಸಮಾಜಘಾತುಕ ಶಕ್ತಿಗಳು ಅಡ್ಡಗಟ್ಟಿ ಹಾನಿಗೊಳಿಸಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ.

    ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಚೌಟ, 400 ವರ್ಷಗಳ ಪ್ರಾಚೀನ ಇತಿಹಾಸ ಹೊಂದಿರುವ ಎಡನೀರು ಸಂಸ್ಥಾನದ ಪೀಠಾಧಿಪತಿಯಾಗಿರುವ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲೆ ದಾ*ಳಿ ಮಾಡಿದ ದು*ಷ್ಕರ್ಮಿಗಳನ್ನು ಕೇರಳ ಸರ್ಕಾರವು ಕೂಡಲೇ ಬಂಧಿಸಿ ಇಂಥಹ ವಿಕೃತ ಮನಸ್ಥಿತಿಗಳನ್ನು ಮಟ್ಟ ಹಾಕುವ ಕೆಲಸವನ್ನು ಮಾಡಬೇಕು. ಶಾಂತಿ-ಸಾಮರಸ್ಯದ ಮೂಲಕ ಹಿಂದೂ ಸಮಾಜದ ಪರ ಕೆಲಸ ಮಾಡುತ್ತಿರುವ ಸ್ವಾಮೀಜಿ ಮೇಲೆಯೇ ಕಿಡಿಗೇಡಿಗಳು ನಡುರಸ್ತೆಯಲ್ಲೇ ಈ ರೀತಿ ಕಾನೂನು ಕೈಗೆತ್ತಿಕೊಂಡು ಹ*ಲ್ಲೆಗೆ ಮುಂದಾಗಿರುವುದು ಅತ್ಯಂತ ಗಂಭೀ*ರ ವಿಚಾರವಾಗಿದೆ ಎಂದು ಹೇಳಿದ್ದಾರೆ.

    ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಕಾಸರಗೋಡಿನ ಬೋವಿಕ್ಕಾನ–ಇರಿಯಣ್ಣಿ ಮಾರ್ಗ ಮಧ್ಯೆ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರನ್ನು ಫಾಲೋ ಮಾಡಿಕೊಂಡು ಬಂದು ದು*ಷ್ಕರ್ಮಿಗಳ ಗುಂಪು ದಾ*ಳಿ ನಡೆಸಿರುವುದು ಅಕ್ಷಮ್ಯ. ಲಕ್ಷಾಂತರ ಹಿಂದೂಗಳು ಭಕ್ತಿಯಿಂದ ಆರಾಧಿಸುವ ಹಾಗೂ ಹಿಂದೂ ಸಮಾಜದ ಆಧರಣೀಯರು, ಮಾರ್ಗದರ್ಶಕರಾಗಿರುವ, ಆಧ್ಯಾತ್ಮಿಕ ಗುರು ಎಡನೀರು ಸಂಸ್ಥಾನದ ಶ್ರೀಗಳ ಮೇಲೆ ನಡೆದಿರುವ ಈ ದಾಳಿಯು ಹಿಂದೂ ಸಮುದಾಯದವರ ಮೇಲೆ ನಡೆಸಿರುವ ದಾ*ಳಿಯಾಗಿದೆ. ಇಂತಹ ಜಿಹಾದಿ ಮನಸ್ಥಿತಿಯ ಘಟನೆಗಳನ್ನು ಇಡೀ ಹಿಂದೂ ಸಮಾಜವು ಒಟ್ಟಾಗಿ ಖಂಡಿಸಬೇಕು ಎಂದು ಕ್ಯಾ. ಚೌಟ ತಿಳಿಸಿದ್ದಾರೆ.

    ಇದನ್ನೂ ಓದಿ : ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

    ಹೀಗಿರುವಾಗ, ಕೇರಳ ಸರ್ಕಾರವು ಸ್ವಾಮೀಜಿ ಮೇಲಿನ ಹ*ಲ್ಲೆ ಯತ್ನ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ ಎಡನೀರು ಶ್ರೀಗಳಿಗೆ ಸೂಕ್ತ ಭದ್ರತೆಯನ್ನು ಸರ್ಕಾರದ ಕಡೆಯಿಂದ ಕಲ್ಪಿಸಬೇಕೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಚೌಟ ಒತ್ತಾಯಿಸಿದ್ದಾರೆ

    Continue Reading

    LATEST NEWS

    Trending