Tuesday, May 30, 2023

ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ- ಕೊಲೆ ಶಂಕೆ..!

ಬೆಂಗಳೂರಿನ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಬೆಂಗಳೂರು : ಬೆಂಗಳೂರಿನ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಪತಿಯೇ ಕೊಲೆಗಾರ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ರಶ್ಮಿ (32) ಮೃತ ಮಹಿಳೆಯಾಗಿದ್ದಾಳೆ. ಮಂಡ್ಯ ಮೂಲದ ರಶ್ಮಿ ಕಳೆದ 10 ವರ್ಷಗಳ ಹಿಂದೆ ಶ್ರೀರಂಗಪಟ್ಟಣ ಮೂಲದ ಅರವಿಂದ್ ಎಂಬಾತನೊಂದಿಗೆ ವಿವಾಹವಾಗಿದ್ದರು.

ದಂಪತಿಗೆ 5 ವರ್ಷದ ಗಂಡು ಮಗು ಇದೆ. ಅರವಿಂದ್ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ, ರಶ್ಮಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಪತಿಯ ಕುಟುಂಬಸ್ಥರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರೆ, ಪತ್ನಿಯ ಕುಟುಂಬಸ್ಥರು ಕೊಲೆ ಆರೋಪ ಹೊರಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿರುವ ಸುಬ್ರಮಣ್ಯಪುರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics