Connect with us

LATEST NEWS

ಮಹಿಳೆಯರ ಎನ್ ಡಿ ಎ ಪ್ರವೇಶಕ್ಕೆ ಒಪ್ಪಿಗೆ ನೀಡಿದ ಸೇನೆ : ಸುಪ್ರೀಂಗೆ ಕೇಂದ್ರ ಹೇಳಿಕೆ

Published

on

ನವದೆಹಲಿ: ಬಹಳ ಸಮಯದಿಂದ ಎನ್ ಡಿ ಎ ಯಲ್ಲಿ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ಸುಪ್ರೀಂ ಕೋರ್ಟ್ ಹೇಳುತ್ತಲೇ ಬಂದಿತ್ತು. ಭಾರತೀಯ ಸೇನೆಗೆ ಮಹಿಳೆಯರು ಎನ್ ಡಿ ಎ ಸೇರಲು ಒಪ್ಪಿಗೆ ಸೂಚಿಸಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಸೇನೆಯ ಅತ್ಯುನ್ನತ ವಲಯದಲ್ಲಿ ನಡೆದ ಮಾತುಕತೆಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ತಿಳಿಸಿದ್ದಾರೆ.

ಸ್ಟೀಸ್ ಎಂ.ಎಂ ಸುಂದ್ರೇಶ್ ಈ ವಿಚಾರದ ಕುರಿತು ನ್ಯಾಯಾಲಯವನ್ನು ಪ್ರವೇಶಿಸಲು ಇಷ್ಟವಿರಲಿಲ್ಲ ಎಂದು ತಿಳಿಸಿದ್ದಾರೆ.

ಸೇನೆಯ ನಿರ್ಧಾರಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತೀಯ ಸೇನೆ ಜಗತ್ತಿನಲ್ಲೇ ಗೌರವಯುತವಾದಂತಹ ಸೇನೆ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಅದಕ್ಕಿದೆ.

ಆದರೆ ಲಿಂಗ ಸರಿಸಮಾನತೆ ವಿಚಾರದಲ್ಲಿ ಅದಿನ್ನೂ ಹಲವು ಸುಧಾರಣೆಗಳನ್ನು ತರಬೇಕಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

DAKSHINA KANNADA

ಅನುಷ್ಕಾ ಶೆಟ್ಟಿ ರಾಜಕೀಯ ಎಂಟ್ರಿ…! ಆಂಧ್ರದಲ್ಲಿ ಚುನಾವಣಾ ಕಣಕ್ಕೆ..!

Published

on

ಕ್ಷಿಣ ಕನ್ನಡ ಜಿಲ್ಲೆಯ ಚೆಲುವೆ.. ಟಾಲಿವುಡ್‌ನಲ್ಲಿ ಟಾಪ್‌ ನಟಿಯಾಗಿ ಮೆರೆದ ಅನುಷ್ಕಾ ಶೆಟ್ಟಿ ಸದ್ಯ ರಾಜಕೀಯ ವಲಯದಲ್ಲಿ ಸುದ್ದಿಯಾಗಿದ್ದಾರೆ. ಟಾಲಿವುಡ್‌ನ ಬ್ಯೂಟಿ ಕ್ವೀನ್‌ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ ಕೂಡಾ ಇಂತಹ ಒಂದು ಚರ್ಚೆ ನಡೆಸ್ತಾ ಇದೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ಅನುಷ್ಕಾ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಈ ಬಾರಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಅನ್ನೋ ದೊಡ್ಡ ಚರ್ಚೆ ಆರಂಭವಾಗಿದೆ.

 

ಲೋಕಸಭೆ ಚುನಾವಣೆಯ ಜೊತೆಯಲ್ಲೇ ಆಂಧ್ರ ವಿಧಾನಸಭೆಗೂ ಚುನಾವಣೆ ನಡೆಯುತ್ತಿರುವುದೇ ಈ ಚರ್ಚೆಗೆ ಕಾರಣವಾಗಿದೆ. ಅನುಷ್ಕಾ ಶೆಟ್ಟಿ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಭಿಮಾನಿಗಳು ಮಾತ್ರವಲ್ಲದೆ ರಾಜಕೀಯ ವಲಯದಲ್ಲೂ ಚರ್ಚೆ ನಡೆದಿದೆ. ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದಿಂದ ಅನುಷ್ಕಾ ಶೆಟ್ಟಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಅನ್ನೋ ಸುದ್ದಿ ಹರಡಿದೆ. ಬಿಜೆಪಿ ಹಾಗೂ ಟಿಡಿಪಿ ಪಕ್ಷದ ಬೆಂಬಲ ಹೊಂದಿರುವ ಜನಸೇನಾ ಪಕ್ಷದ ಪ್ರಮುಖ ನಾಯಕರ ಜೊತೆ ಅನುಷ್ಕಾ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ ಅನುಷ್ಕಾ ಜನಸೇನಾ ಪಕ್ಷಕ್ಕೆ ಸ್ಟಾರ್ ಪ್ರಚಾರಕಿಯಾಗಿ ಹೋಗಲಿದ್ದಾರೆ ಚುನಾವಣೆಗೆ ನಿಲ್ಲೋದು ಸುಳ್ಳು ಸುದ್ದಿ ಎಂದು ಕೆಲ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡ್ತಾರೆ ಅನ್ನೋದೊಂದು ನಕಲಿ ಸುದ್ದಿ ಎಂದು ಕೆಲ ಸುದ್ದಿ ವಾಹಿನಿಗಳು ಕೂಡಾ ವರದಿ ಮಾಡಿದೆ. ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದು, ರಾಜಕೀಯದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

‘ಬಾಹುಬಲಿ’ ಸಿನಿಮಾದ ಬಳಿಕ ಅನುಷ್ಕಾ ಶೆಟ್ಟಿ ಭಾರಿ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ‘ಬಾಹುಬಲಿ 2’ ಸಿನಿಮಾದ ಬಳಿಕ ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರವೇ ಅನುಷ್ಕಾ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಕಾಮಿಡಿ ಹಾಗೂ ಡ್ರಾಮಾ ಕಥೆಯಾಗಿದ್ದ ಇದು ಪ್ರೇಕ್ಷಕರನ್ನು ರಂಜಿಸಿದೆ.ಇದೀಗ ಅನುಷ್ಕಾ ಶೆಟ್ಟಿ ಮಲಯಾಳಂ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ. ಮಲಯಾಳಂನಲ್ಲಿ RIAL 5- ಹಾರ‌ರ್ ಸಿನಿಮಾ ಒಂದರಲ್ಲಿ ಅನುಷ್ಕಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡುವ ಬದಲಿಗೆ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿರಲಿ ಎಂಬುದು ಅಭಿಮಾನಿಗಳ ಆಶಯ. ಆದ್ರೆ ಅನುಷ್ಕಾ ರಾಜಕೀಯ ಎಂಟ್ರಿಯನ್ನೂ ತಳ್ಳಿ ಹಾಕಲು ಸಾದ್ಯವಿಲ್ಲ ಅನ್ನೋದು ಸದ್ಯ ಚಾಲ್ತಿಯಲ್ಲಿರುವ ಚರ್ಚಾ ವಿಷಯ.

Continue Reading

LATEST NEWS

ಹಳೆಯಂಗಡಿ : ಯಕ್ಷ ಧ್ರುವ ಕೇಂದ್ರ ಮಹಿಳಾ ಘಟಕದ ವಾರ್ಷಿಕೋತ್ಸವ

Published

on

ಹಳೆಯಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು.

ಸಮಾರಂಭದಲ್ಲಿ ಶ್ರೀಕುಮಾರ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಹಳುವಳ್ಳಿ ಇದರ ನಿರ್ದೇಶಕಿ ಜ್ಯೋತಿ ಟಿ ಎನ್ ಕಳಸ, ಧೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇದರ ನಿರ್ದೇಶಕಿ ಪದ್ಮಾ ಕೆ ಆರ್ ಆಚಾರ್ಯ ಪುತ್ತೂರು, ಯಕ್ಷಗಾನ ತಾಳಮದ್ದಲೆ ಕಲಾವಿದೆ ರೇವತಿ ನವೀನ್ ಕುಳಾಯಿ ಇವರನ್ನು ಸನ್ಮಾನಿಸಲಾಯಿತು.

ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನ್ಯಾಯವಾದಿ ನಾರಾಯಣ ಪಾಟಾಳಿ, ಕಲಾ ಪೋಷಕರಾದ ಶಕುಂತಳಾ ರಮಾನಂದ ಭಟ್, ಸಂಧ್ಯಾ ಜಯದೇವ ಐತಾಳ್, ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಜೆಸಿಐ ಸುರತ್ಕಲ್ ಘಟಕದ ಅಧ್ಯೆಕ್ಷೆ ಜ್ಯೋತಿ ಪ್ರವೀಣ್ ಶೆಟ್ಟಿ,ಪಟ್ಲ ಪೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು.

ಮಹಿಳಾ ಕೇಂದ್ರೀಯ ಘಟಕದ ಅಧ್ಯೆಕ್ಷೆ ಪೂರ್ಣಿಮಾ ಶೆಟ್ಟಿ ಸ್ವಾಗತಿಸಿದರು. ಗೌರವಾಧ್ಯಕ್ಷೆ ಆರತಿ ಆಳ್ವ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ‌ ನಿರ್ವಹಿಸಿದರು. ಬಳಿಕ ಪಾವಂಜೆ ಮೇಳದಿಂದ ಧರ್ಮಸಿಂಹಾಸನ ಯಕ್ಷಗಾನ ಪ್ರದರ್ಶನಗೊಂಡಿತು.

 

Continue Reading

DAKSHINA KANNADA

ಟಿಕೆಟ್ ಕೈ ತಪ್ಪಿದ್ರೂ ಕೈ ಬಿಡದ ಹೈಕಮಾಂಡ್‌..! ಕೇರಳದ ಸಹ ಉಸ್ತುವಾರಿಯಾದ ನಳಿನ್ ಕುಮಾರ್ ಕಟೀಲ್‌

Published

on

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‌ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿ ವಹಿಸಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಚುನಾವಣಾ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆ ಆಗಿದ್ದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು ಬಾರಿ ನಿರಾಸೆ ತಂದಿತ್ತು. ಕ್ಯಾಪ್ಟನ್ ಬ್ರಿಜೇಶ್ ಚೌಟರ ಮೂಲಕ ಹೊಸ ಮುಖವನ್ನು ಪಕ್ಷ ಕಣಕ್ಕೆ ಇಳಿಸಿದೆ. ಇದು ನಳಿನ್ ಕುಮಾರ್ ಕಟೀಲ್‌ ಅವರಿಗೆ ಬೇಸರ ತಂದಿದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದರು. ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಬಹಳಷ್ಟು ಭಾವುಕರಾಗಿದ್ದ ನಳಿನ್ ಕುಮಾರ್ ಕಟೀಲ್ ಪಕ್ಷ ನಿಂತ ನೀರಾಗಬಾರದು, ಹೊಸ ಮುಖಗಳು ಬರುತ್ತಿರಬೇಕು, ನಾನು ಪಕ್ಷ ಗುಡಿಸಿ ಒರೆಸು ಅಂತ ಹೇಳಿದ್ರೂ ಮಾಡ್ತೇನೆ ಅಂತ ಹೇಳಿದ್ದರು. ಆದ್ರೆ ಇದೀಗ ಪಕ್ಷ ಅವರಿಗೆ ಕೇರಳದ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಪಕ್ಷದಲ್ಲಿ ದೊಡ್ಡ ಜವಾಬ್ದಾರಿಯನ್ನೇ ನೀಡಿದೆ.

Continue Reading

LATEST NEWS

Trending