bengaluru
ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾ*ವು
Published
10 hours agoon
ಮಂಗಳೂರು/ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾ*ವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಆರೋಪ ಕೇಳಿಬಂದಿದೆ.
ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾ ಮೃ*ತ ಬಾಣಂತಿ ಎಂದು ಗುರುತಿಸಲಾಗಿದೆ.
ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅ*ನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದ ವೇಳೆ ಚಿಕಿತ್ಸೆ ಫಲಿಸದೇ ಮೃ*ತಪಟ್ಟಿದ್ದಾರೆ. ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ನಂತರ, ಸ್ಕ್ಯಾನಿಂಗ್ ಮಾಡಿ ಹೊಟ್ಟೆಯಲ್ಲಿ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವೈದ್ಯರು ಎ*ಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ.
ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು. ಹೀಗಾಗಿ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಕಾ*ಮಾಲೆ ಇದೆ ಎಂದಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫ*ಲಿಸದೆ ಮೃ*ತಪಟ್ಟಿದ್ದಾರೆ. ಸ್ಥಳೀಯ ಪೊಳೀಸ್ ಠಾಣೆಯಲ್ಲಿ ಕುಟುಂಬದವರು ನೀಡಿದ ದೂ*ರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bangalore
ವಿರಾಟ್ ಕೊಹ್ಲಿಗೆ ಶಾಕ್ ಕೊಟ್ಟ ಬಿಬಿಎಂಪಿ; ನೋಟಿಸ್ ನೀಡಿದ ಅಧಿಕಾರಿಗಳು !
Published
3 days agoon
21/12/2024By
NEWS DESK3ಮಂಗಳೂರು/ಬೆಂಗಳೂರು: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್, ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ (One8 Commune) & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.
ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಇದನ್ನೂ ಓದಿ: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !
ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ರೂಪದ ವಿವರಣೆ ಕೇಳಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.
bengaluru
ನಟ ದರ್ಶನ್ ಗೆ ಜಾಮೀನು ಸಿಕ್ಕಿದ್ದು ಇದೇ ಕಾರಣಕ್ಕೆ ?
Published
1 week agoon
14/12/2024By
NEWS DESK3ಮಂಗಳೂರು/ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 7 ತಿಂಗಳ ಬಳಿಕ ನಟ ದರ್ಶನ್ ಮತ್ತು ಗ್ಯಾಂಗ್ ಗೆ ಜಾಮೀನು ಸಿಕ್ಕಿದೆ.
ಕಳೆದ ಆರು ವಾರಗಳಿಂದ ನಟ ದರ್ಶನ್ ಮೆಡಿಕಲ್ ಬೇಲ್ ಮೇಲೆ ಹೊರಗಿದ್ದಾರೆ. ಹೀಗಾಗಿ ನಟಿ ಪವಿತ್ರಗೌಡ ಸೇರಿ ಉಳಿದ ಆರು ಮಂದಿ ಬಿಡುಗಡಗೆ ಪ್ರಕ್ರಿಯೆಗಳು ಶುರುವಾಗಿದೆ. ಸೋಮವಾರ ಬಿಡುಗಡೆಯಾಗುವ ಸಂಭವ ಇದೆ.
ಅಂದ ಹಾಗೇ, ಈ ಪ್ರಕರಣದ ಒಟ್ಟು 17 ಆರೋಪಿಗಳ ಪೈಕಿ ಈ ಮೊದಲೇ ಐವರಿಗೆ ಜಾಮೀನು ಸಿಕ್ಕಿತ್ತು. ಈಗ ಏಳು ಮಂದಿಗೆ ಬೇಲ್ ಸಿಕ್ಕಿದೆ. ಉಳಿದ ಐವರು ಆರೋಪಿಗಳಿಗೆ ಮಾತ್ರ ಜಾಮೀನು ಸಿಕ್ಕಿಲ್ಲ. ಈ ಮಧ್ಯೆ ದರ್ಶನ್ ಸೇರಿ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಚಿಂತನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್ !
ನಟ ದರ್ಶನ್ ಗೆ ಜಾಮೀನು ಸಿಗಲು ಕಾರಣ
ಜಾಮೀನು ಮೊದಲ ನಿಯಮ. ಆರೋಪಿಗಳಿಗೆ ಯಾವುದೇ ಅಪರಾಧಿಕ ಹಿನ್ನೆಲೆ ಇಲ್ಲ. ಆರೋಪಿಗಳು 6 ತಿಂಗಳಿನಿಂದ ಜೈಲಿನಲ್ಲಿ ಇದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಬಂಧನ ಮಾಡುವಾಗ ನಿಯಮಗಳ ಪಾಲನೆ ಆಗಿಲ್ಲ. ಬಂಧನ ವೇಳೆ ಆರೋಪಿಗೆ ಬಂಧನದ ಕಾರಣ ನೀಡಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ಆದೇಶವಿದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಗ್ರೌಂಡ್ಸ್ ಆಫ್ ಅರೆಸ್ಟ್ ಪಾಲಿಸಿಲ್ಲ. ಆರೋಪಿಗಳ ನಿರ್ದಿಷ್ಟ ಪಾತ್ರದ ಬಗ್ಗೆ ಸ್ಪಷ್ಟ ಉಲ್ಲೇಖವಿಲ್ಲ. ಪ್ರತ್ಯಕ್ಷದರ್ಶಿಗಳ ಹೇಳಿಕೆಯಲ್ಲೂ ವ್ಯತ್ಯಾಸ ಕಂಡು ಬಂದಿದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್ ಜಾಮೀನು ಮಂಜೂರು ಮಾಡಿತು.
ಹೀಗಾಗಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಒಟ್ಟು ಏಳು ಆರೋಪಿಗಳಿಗೆ ಜಾಮೀನು ನೀಡಿ, ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಶುಕ್ರವಾರ ಈ ಆದೇಶ ಹೊರಡಿಸಿದೆ.
bengaluru
ಡೆ*ತ್*ನೋಟ್‌ನಲ್ಲಿ ಜಡ್ಜ್ ಹೆಸರು; ವಿಚ್ಛೇದನ ಪರಿಹಾರಕ್ಕೆ ಸುಪ್ರೀಂನಿಂದ ಹೊಸ ಸೂತ್ರ..!
Published
2 weeks agoon
12/12/2024ಮಂಗಳೂರು/ಬೆಂಗಳೂರು: ಬೆಂಗಳೂರು ಮೂಲದ ಟೆಕ್ಕಿ ಅತುಲ್ ಸುಭಾಷ್ (34) ಆ*ತ್ಮಹತ್ಯೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಯ ನಡುವೆ, ಜೀವನಾಂಶದ ಮೊತ್ತವನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಎಂಟು ಅಂಶಗಳ ಸೂತ್ರವನ್ನು ಹಾಕಿದೆ. ಹಣಕ್ಕಾಗಿ ಪತ್ನಿ ಹಾಗೂ ಅತ್ತೆಯಂದಿರ ಕಿ*ರುಕುಳ ನೀಡಿದ್ದು, ಸುಭಾಷ್ ಆ*ತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಅದಲ್ಲದೇ, ಬೇರೆ ಕಾರಣಗಳೂ ಡೆ*ತ್‌ನೋಟ್‌ನಲ್ಲಿ ಪತ್ತೆಯಾಗಿದೆ.
ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ, ಅತುಲ್ ತನ್ನ ವಿಚ್ಛೇದಿತ ಪತ್ನಿ ನಿಕಿತಾ ಸಿಂಘಾನಿಯಾ ಮತ್ತು ಆಕೆಯ ಕುಟುಂಬವನ್ನು ಸು*ಲಿಗೆ ಮತ್ತು ಕಿ*ರುಕುಳವನ್ನು ಆರೋಪಿಸಿ 80 ನಿಮಿಷಗಳ ವೀಡಿಯೊವನ್ನು ರೆಕಾರ್ಡ್ ಮಾಡಿದ್ದು ವ್ಯರ್ಥವಾಗಿತ್ತು. ಹಾಗಾಗಿ ನ್ಯಾಯ ವ್ಯವಸ್ಥೆಯನ್ನು ಟೀಕಿಸಿ 24 ಪುಟಗಳ ಡೆ*ತ್‌ನೋಟ್ ಬರೆದಿದ್ದಾನೆ. ಮೇಲ್ಮನವಿ (ಪತಿ) ಮತ್ತು ಪ್ರತಿವಾದಿ (ಪತ್ನಿ) ಆರು ವರ್ಷಗಳ ಕಾಲ ಸಂಸಾರ ನಡೆಸಿ, ಸುಮಾರು 20 ವರ್ಷ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ವಿಚ್ಛೇದನ ಪಡೆಯುವ ಸಮಯ ನ್ಯಾಯಾಲಯದ ನ್ಯಾಯಮೂರ್ತಿಗಳು “ನನ್ನ ಮಾತನ್ನು ಕೇಳಿ ನಗೆ ಬೀರಿದ್ದಾರೆ” ಎಂಬ ಅಂಶವನ್ನು ಸುಭಾಷ್ ಡೆತ್‌ನೋಟ್‌ನಲ್ಲಿ ಬರೆದಿದ್ದು, ಅವನ ಆತ್ಮಹತ್ಯೆಗೆ ಇದೂ ಕೂಡ ಕಾರಣವಾಗಿರುವಂತೆ ಕಾಣುತ್ತಿದೆ. ಹಾಗಾಗಿ ಟೆಕ್ಕಿ ಸಾವಿನ ಬಳಿಕ ನ್ಯಾಯಲಯವು, ಜೀವನಾಂಶವನ್ನು ನಿರ್ಧರಿಸುವಾಗ ಪರಿಗಣಿಸಬೇಕಾದ ಎಂಟು ಅಂಶಗಳ ಬಗೆಗೆ ತಿಳಿಸಿದೆ. ಅವುಗಳು ಯಾವುದು ಎಂಬ ಮಾಹಿತಿ ಇಲ್ಲಿದೆ.
•ಪಕ್ಷಗಳ ಸ್ಥಿತಿ, ಸಾಮಾಜಿಕ ಮತ್ತು ಹಣಕಾಸು
• ಪತ್ನಿ ಮತ್ತು ಅವಲಂಬಿತ ಮಕ್ಕಳ ಸಮಂಜಸವಾದ ಅಗತ್ಯತೆಗಳು
•ಪಕ್ಷಗಳ ವೈಯಕ್ತಿಕ ಅರ್ಹತೆಗಳು ಮತ್ತು ಉದ್ಯೋಗ ಸ್ಥಿತಿಗಳು
•ಸ್ವತಂತ್ರ ಆದಾಯ ಅಥವಾ ಅರ್ಜಿದಾರರ ಒಡೆತನದ ಸ್ವತ್ತುಗಳು
•ವೈವಾಹಿಕ ಮನೆಯಲ್ಲಿ ಹೆಂಡತಿ ಆನಂದಿಸುವ ಜೀವನದ ಗುಣಮಟ್ಟ
•ಕುಟುಂಬದ ಜವಾಬ್ದಾರಿಗಳಿಗಾಗಿ ಮಾಡಿದ ಯಾವುದೇ ಉದ್ಯೋಗ ತ್ಯಾಗ
•ಕೆಲಸ ಮಾಡದ ಹೆಂಡತಿಗೆ ಸಮಂಜಸವಾದ ದಾವೆ ವೆಚ್ಚಗಳು
•ಪತಿಯ ಆರ್ಥಿಕ ಸಾಮರ್ಥ್ಯ, ಅವರ ಆದಾಯ, ನಿರ್ವಹಣೆ ಹೊಣೆಗಾರಿಕೆಗಳು ಮತ್ತು ಹೊಣೆಗಾರಿಕೆಗಳು
“ಶಾಶ್ವತ ಜೀವನಾಂಶದ ಮೊತ್ತವನ್ನು ನಿರ್ಧರಿಸಲು ಮಾರ್ಗಸೂಚಿಗಳನ್ನು ಅನುಸರಿಸಲು ಇತರ ಎಲ್ಲಾ ನ್ಯಾಯಾಲಯಗಳಿಗೆ ಉನ್ನತ ನ್ಯಾಯಾಲಯವು ಸಲಹೆ ನೀಡಿದಾಗ, ಮೇಲೆ ತಿಳಿಸಲಾದ ಅಂಶಗಳು ‘ಸ್ಟ್ರೈಟ್ ಜಾಕೆಟ್’ ಸೂತ್ರವನ್ನು ಹಾಕದೆ ಶಾಶ್ವತ ಜೀವನಾಂಶವನ್ನು ನಿರ್ಧರಿಸುವಾಗ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಬೇಕು. ಪತಿಗೆ ದಂಡ ವಿಧಿಸದ ರೀತಿಯಲ್ಲಿ ನಿರ್ಧರಿಸಬೇಕು ಆದರೆ ಹೆಂಡತಿಗೆ ಯೋಗ್ಯವಾದ ಜೀವನ ಮಟ್ಟವನ್ನು ಖಾತ್ರಿಪಡಿಸಬೇಕು” ಎಂದು ನ್ಯಾಯಾಲಯವು ತಿಳಿಸಿದೆ.
ಅತುಲ್ ಅವರ ಸಹೋದರ ಬಿಕಾಸ್ ಕುಮಾರ್ ಅವರು ನೀಡಿದ ದೂರಿನ ಆಧಾರದ ಮೇಲೆ ಅತುಲ್ ಅವರ ಪತ್ನಿ ನಿಕಿತಾ ಸಿಂಘಾನಿಯಾ ಸೇರಿದಂತೆ ನಾಲ್ವರ ವಿರುದ್ಧ ಕಲಂ 108 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು 3 (5) (ಅಪರಾಧ ಕೃತ್ಯವಾದಾಗ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ (BNS) ಒಂದು ಸಾಮಾನ್ಯ ಉದ್ದೇಶದ ಮುಂದುವರಿಕೆಯಲ್ಲಿ ಬಹು ವ್ಯಕ್ತಿಗಳಿಂದ ನಡೆಸಲ್ಪಡುತ್ತದೆ.
ಉತ್ತರ ಪ್ರದೇಶದಲ್ಲಿ ಅತುಲ್ ವಿರುದ್ಧ ಪತ್ನಿ ಹಲವಾರು ಪ್ರಕರಣಗಳನ್ನು ದಾಖಲಿಸಿದ್ದರಿಂದ ವೈವಾಹಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆ*ತ್ಮಹತ್ಯೆಯಿಂದ ಸಾಯುವ ಮೊದಲು, ಅವರು ತಮ್ಮ ಭಾಗವಾಗಿದ್ದ NGO ದ ವಾಟ್ಸಾಪ್ ಗುಂಪಿನಲ್ಲಿ ಟಿಪ್ಪಣಿಯನ್ನು ಹಂಚಿಕೊಂಡಿದ್ದಾರೆ. ಅವರು ಅದನ್ನು ಇಮೇಲ್ ಮೂಲಕ ಇತರ ಹಲವರಿಗೆ ಕಳುಹಿಸಿದ್ದಾರೆ. ಈ ಪ್ರಕರಣದ ಕುರಿತು ಇನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
LATEST NEWS
ಹೊಸ ವರ್ಷಾಚರಣೆಗೆ ತಡರಾತ್ರಿವರೆಗೆ ಪಬ್, ಬಾರ್, ಹೊಟೇಲ್ ತೆರೆಯಲು ಅವಕಾಶ ನೀಡುವಂತೆ ಮನವಿ
ಸಂಭಾವನೆಯಲ್ಲಿ ದಾಖಲೆ ಬರೆದ ಯಶ್ !
ಕರ್ನಾಟಕದಲ್ಲೇ ಮೊದಲ ಬಾರಿಗೆ ಮೂಳೆ ದಾನ ಮಾಡಿದ ಯುವಕ
ಕರಾವಳಿ ಉತ್ಸವ : ತುಳು ಸಂಸ್ಕೃತಿ ಅನಾವರಣದ ಮೂಲಕ ಪ್ರೇಕ್ಷಕರಿಗೆ ರಸದೌತಣ
ಆ ಒಂದು ದೃಶ್ಯದಿಂದ ಪುಷ್ಪ 2 ಚಿತ್ರಕ್ಕೆ ಮತ್ತೆ ಸಂಕಷ್ಟ!
ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಚಿನ್ನ ಖರೀದಿಸಿ ವಂಚನೆ; ನಟ ಧಮೇಂದ್ರ ವಿರುದ್ದ ಎಫ್ ಐ ಆರ್ ದಾಖಲು !
Trending
- LATEST NEWS6 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್
- BIG BOSS4 days ago
ಚೈತ್ರಾ ಕುಂದಾಪುರಗೆ ಮತ್ತೆ ಜೈಲು.. ಮುಂದಿನ ವಾರಕ್ಕೆ ಕ್ಯಾಪ್ಟನ್ ಯಾರೆಂದು ರಿವೀಲ್..!
- BIG BOSS4 days ago
ಬಿಗ್ಬಾಸ್ನಲ್ಲಿ ಶಾಕಿಂಗ್ ಟ್ವಿಸ್ಟ್; ಮನೆಯಿಂದ ಆಚೆ ಹೋಗಲು ಸ್ಟ್ರಾಂಗ್ ಸ್ಪರ್ಧಿಗಳು ನಾಮಿನೇಟ್
- LATEST NEWS3 days ago
ಕಾನ್ ಸ್ಟೆಬಲ್ ಮನೆಯಲ್ಲಿ ಭರ್ಜರಿ ಬೇಟೆಯಾಡಿದ ಲೋಕಾಯುಕ್ತ ಪೊಲೀಸರು !