LATEST NEWS
ರಾಜ್ಯಸಭೆಯಲ್ಲಿಯೂ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿಯೂ ನಿನ್ನೆ (ಗುರುವಾರ) ರಾತ್ರಿ ಅನುಮೋದನೆ ದೊರೆತಿದೆ.
ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕರಿಸಲಾಗಿತ್ತು. ‘ನಾರಿ ಶಕ್ತಿ ವಂದನಾ ಅಧಿನಿಯಮಕ್ಕೆ ರಾಜ್ಯಸಭೆಯು ಸರ್ವಾನುಮತದಿಂದ ಅನುಮೋದನೆ ನೀಡಿದೆ. ವಿಧೇಯಕದ ಪರ 215 ಸಂಸದರು ಮತ ಚಲಾಯಿಸಿದರೆ, ವಿರುದ್ಧ ಯಾವೊಬ್ಬ ಸಂಸದನೂ ಮತ ಚಲಾಯಿಸಿಲ್ಲ.
ಸದ್ಯ ಮಸೂದೆಗೆ ಉಭಯ ಸದನಗಳ ಅನುಮೋದನೆ ದೊರೆತಿದ್ದು, ಮುಂದಿನ ಹಂತದಲ್ಲಿ ಇದನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಿಕೊಡಲಾಗುತ್ತದೆ. ರಾಷ್ಟ್ರಪತಿಗಳ ಸಹಿ ದೊರೆತ ನಂತರ ‘ನಾರಿ ಶಕ್ತಿ ವಂದನ್ ಕಾಯ್ದೆ’ ಕಾನೂನಾಗಿ ಜಾರಿಗೆ ಬರಲಿದೆ.
LATEST NEWS
ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪ*ಲ್ಟಿ; ಓರ್ವ ಸಾ*ವು, ಹಲವರ ಸ್ಥಿತಿ ಗಂಭೀ*ರ
ಶಿವಮೊಗ್ಗ: ಶಿವಮೊಗ್ಗದ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಪ*ಲ್ಟಿಯಾಗಿರುವ ಘಟನೆ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ಯುವಕ ಮೃ*ತಪಟ್ಟಿದ್ದಾನೆ. ನೆಲಮಂಗಲದ ಚಂದನ್ (26) ಮೃ*ತ ಯುವಕ.
ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಭತ್ತದ ಗದ್ದೆಗೆ ಪ*ಲ್ಟಿಯಾಗಿದೆ. ಕೊಡುಗು ಮೂಲದ ನಂದನ್, ಕೋಲಾರದ ಕೋದಂಡ, ಹಾಸನದ ಭರತ್, ಮಂಡ್ಯ ಜಿಲ್ಲೆಯ ಯೋಗೇಶ್ ಎಂಬವರಿಗೆ ಗಂ*ಭೀರ ಗಾ*ಯವಾಗಿದೆ.
ಇದನ್ನೂ ಓದಿ : ನಟಿ ಓವಿಯಾ ಖಾಸಗಿ ವಿಡಿಯೋ ಲೀಕ್? ನಿಜಾನಾ ಎಂದು ಕೇಳಿದ್ದಕ್ಕೆ ಎಂಜಾಯ್ ಮಾಡಿ ಎಂದ ಕಿರಾತಕ ಬೆಡಗಿ
ಯುವಕರ ತಂಡ ಬೆಂಗಳೂರಿನಿಂದ ಸಿಗಂದೂರಿಗೆ ಪ್ರವಾಸಕ್ಕೆ ಬಂದಿತ್ತು. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃ*ತದೇಹವನ್ನು ಮ*ರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
LATEST NEWS
ಪೊಳಲಿ ಸೇತುವೆ ಬಂದ್: ಮಂಗಳವಾರ ಗ್ರಾಮಸ್ಥರಿಂದ ಪ್ರತಿಭಟನೆ
ಮಂಗಳೂರು: ಘನ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದ ಸೇತುವೆಯ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪೊಳಲಿ – ಅಡ್ಡೂರಿನ ಪಲ್ಗುಣಿ ನದಿಯ ಸೇತುವೆ ಬಿರುಕು ಬಿಟ್ಟ ಕಾರಣಕ್ಕೆ ಘನ ವಾಹನ ಸಂಚಾರ ಸ್ಥಗಿತ ಮಾಡಲಾಗಿತ್ತು. ಸಂಬಂಧಪಟ್ಟ ಇಲಾಖೆ ಸೇತುವೆಯ ಸಾಮರ್ಥ್ಯವನ್ನು ಯಂತ್ರದ ಮೂಲಕ ಪರಿಶೀಲನೆ ನಡೆಸಿ ಎರಡು ತಿಂಗಳಾದ್ರೂ ಏನಾಗಿದೆ ಎಂಬ ಬಗ್ಗೆ ಜನರಿಗೆ ಮಾಹಿತಿಯೇ ಇಲ್ಲ. ಇದರಿಂದ ತೊಂದರೆಗೆ ಒಳಗಾಗಿರುವ ಅಮ್ಮುಂಜೆ , ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು ಮತ್ತು ಸುತ್ತಮುತ್ತಲಿನ ಜನ ಸಭೆ ನಡೆಸಿದ್ದಾರೆ. ಜನರ ಸಮಸ್ಯೆಗೆ ಸ್ಪಂದನೆಯೇ ನೀಡದ ಜನಪ್ರತಿಧಿಗಳು, ಹಾಗೂ ಅಧಿಕಾರಿಗಳ ವಿರುದ್ಧ ಅಕ್ಟೋಬರ್ 15 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪೊಳಲಿಯ ರಾಮಕೃಷ್ಣ ತಪೋವನ ರಾಜರಾಜೇಶ್ವರಿ ಸಭಾಂಗಣದಲ್ಲಿ ಸಭೆ ನಡೆಸಲಾಗಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಾಚೈತನ್ಯನಂದ ಸ್ವಾಮೀಜಿ , ಪೊಳಲಿ ಅಡ್ಡೂರು ಫಲ್ಗುಣಿ ಹೋರಾಟ ಸಮಿತಿಯ ಅಧ್ಯಕ್ಷ ವೆಂಕಟೇಶ್ ನಾವುಡ, ಚಂದ್ರಹಾಸ್ ಪಲ್ಲಿಪಾಡಿ, ಜಯರಾಮಕೃಷ್ಣ ಪೊಳಲಿ, ನೂಯಿ ಬಾಲಕೃಷ್ಣ ರಾವ್, ಅಬೂಬಕ್ಕರ್ ಅಮ್ಮುಂಜೆ ಉಪಸ್ಥಿತರಿದ್ದು ಹೋರಾಟದ ಬಗ್ಗೆ ಜನಾಭಿಪ್ರಾಯ ಪಡೆದುಕೊಂಡಿದ್ದಾರೆ.
LATEST NEWS
ಮದರಸ ಹಾಸ್ಟೇಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ
ಬ್ರಹ್ಮಾವರ: ಹೇರಾಡಿ ಖಾಸಗಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಮದರಸ ಹಾಸ್ಟೇಲ್ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯು ಮೊಹಮ್ಮದ್ ಜಹೀದ (12) ಎಂದು ಗುರುತಿಸಲಾಗಿದೆ.
ಕಳೆದ 4 ತಿಂಗಳಿನಿಂದ ಬ್ರಹ್ಮಾವರ ತಾಲೂಕಿನ ರಂಗನಕೆರೆಯ ಮಾಲಿಕ್ ದಿನಾರ್ ಮದರಸ ಹಾಸ್ಟೇಲ್ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದು, ರಜೆಯನ್ನು ಮುಗಿಸಿ ಅ.11 ರಂದು ಹಾಸ್ಟೇಲ್ಗೆ ಮರಳಿದ್ದಾನೆ.
ರಾತ್ರಿ 9 ಗಂಟೆಗೆ ಊಟಕ್ಕೆ ಬಾರದಿದ್ದನ್ನು ಗಮನಿಸಿ ಹಾಡುಕಿದಾಗ ಹಾಸ್ಟೇಲ್ನ ಬಾತ್ರೂಮ್ನಲ್ಲಿ ಸರಳಿಗೆ ಬೈರಾಸ್ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.
ಕೂಡಲೇ ಆತನನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ವೈದ್ಯರು ರಾತ್ರಿ 10.40 ರ ಸುಮಾರಿಗೆ ಆತನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತನ ಮರಣದಲ್ಲಿ ಸಂಶಯವಿರುವುದಾಗಿ ಬಾಲಕನ ತಾಯಿ ರಿಹಾನ ಬೇಗಂ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕನಿಗೆ ಹಾಸ್ಟೇಲ್ಗೆ ಹೋಗಲು ಮನಸ್ಸಿಲ್ಲವೆಂದು, ಹಾಸ್ಟೇಲ್ನ ಇತರ ವಿದ್ಯಾರ್ಥಿಗಳೊಂದಿಗೆ ಸಣ್ನ ಮಟ್ಟಿನ ಜಗಳ ಆಗಿತ್ತು ಎಂದು ತಿಳಿದು ಬಂದಿದದೆ.
- FILM6 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್
- LATEST NEWS6 days ago
ನ.8 ಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ನಿವೃತ್ತಿ..! 15 ದಿನದಲ್ಲಿ 8 ಪ್ರಮುಖ ತೀರ್ಪು ಸಾಧ್ಯತೆ..!
- DAKSHINA KANNADA7 days ago
ಮಂಗಳೂರು : ರಾತ್ರಿ ಹೊತ್ತಲ್ಲಿ ಯುವಕನ ಬೆತ್ತಲೆ ಓಡಾಟ; ಭಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು
- BIG BOSS7 days ago
ಇದೇ ಕಾರಣಕ್ಕೆ ಮೊದಲ ವಾರವೇ ಯಮುನಾ ಶ್ರೀ ನಿಧಿ ಬಿಗ್ಬಾಸ್ ಮನೆಯಿಂದ ಔಟ್ ಆದದ್ದು..!