Home ಉಡುಪಿ ಕುಂದಾಪುರದಲ್ಲಿ ಕೊಳವೆಬಿದ್ದ ಯುವಕ : ಭರದಿಂದ ಸಾಗುತ್ತಿದೆ ರಕ್ಷಣಾ ಕಾರ್ಯ..!

ಕುಂದಾಪುರದಲ್ಲಿ ಕೊಳವೆಬಿದ್ದ ಯುವಕ : ಭರದಿಂದ ಸಾಗುತ್ತಿದೆ ರಕ್ಷಣಾ ಕಾರ್ಯ..!

ಕುಂದಾಪುರದಲ್ಲಿ ಕೊಳವೆಬಿದ್ದ ಕಾರ್ಮಿಕ : 6 ಗಂಟೆಗಳ  ಕಾರ್ಯದಿಂದ ರಕ್ಷಣೆ..!

ಉಡುಪಿ :ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆಯಲ್ಲಿ ಕೊಳೆವೆಬಾವಿ ಕೊರೆಯುತ್ತಿದ್ದ ವೇಳೆ ಉಂಟಾದ ಭೂಕುಸಿತದಲ್ಲಿ ವ್ಯಕ್ತಿಯೋರ್ವ ಸಿಲುಕಿರುವ ಘಟನೆ ಇಂದು ನಡೆದಿದೆ. ಸತತ 6 ಗಂಟೆಗಳ ಕಾರ್ಯಾಚರಣೆ ಬಳಿಕ ಕಾರ್ಮಿಕನನ್ನು ಸುರಕ್ಷಿತವಾಗಿ ಮೇಲೆತ್ತಲಾಗಿದೆ..

ಸಿಕ್ಕಿ ಹಾಕಿಕೊಂಡಿರುವ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ರೋಹಿತ್ ಖಾರ್ವಿಎಂದು ಗುರುತ್ತಿಸಲಾಗಿದೆ. ಕೊಳವೆಬಾವಿ ಕೊರೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಅದರ ಸುತ್ತ ಭಾರೀ ಆಳಕ್ಕೆ ಭೂಕುಸಿತ ಉಂಟಾಗಿದೆ.

ಈ ವೇಳೆ ಸುಮಾರು 15 ಅಡಿಯಷ್ಟು ಹೊಯಿಗೆ ಮಿಶ್ರಿತ ಮಣ್ಣು ಕುಸಿದಿದ್ದು, ಸ್ಥಳದಲ್ಲಿದ್ದ ರೋಹಿತ್ ಖಾರ್ವಿ ಆ ಮಣ್ಣಿನಲ್ಲಿ ಹೂತು ಹೋಗಿ ಸಿಲುಕಿಕೊಂಡಿದ್ದಾರೆ.

ಮರವಂತೆಯಲ್ಲಿ ಕೊಳೆವೆಬಾವಿ ಕೊರೆಯುತ್ತಿದ್ದ ವೇಳೆ ಉಂಟಾದ ಭೂಕುಸಿತದಲ್ಲಿ ಕಾರ್ಮಿಕ ರೋಹಿತ್‌ ಖಾರ್ವಿ ಸಿಲುಕಿದ್ದ . ಕೂಡಲೇ ಸ್ಥಳೀಯರು ಪೊಲೀಸ್ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ರಕ್ಷಣಾ ಕಾಯಾಚರಣೆ ಆರಂಭಿಸಿದ್ದಾರೆ. ಇನ್ನಷ್ಟು ಮಣ್ಣು ಕುಸಿಯದಂತೆ ಡ್ರಮ್‌ಗಳನ್ನು ಅಳವಡಿಸಲಾಗಿದೆ. ರಕ್ಷಣೆಗೆ ಜೇಸಿಬಿಯನ್ನು ಬಳಸಲಾಗಿತ್ತು..

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಅಧಿಕಾರಿಗಳು, ವೈದ್ಯರು, ಹಿರಿಯ ಪೊಲೀಸ್ ಅಧಿಕಾರಿಗಳು ಬೀಡು ಬಿಟ್ಟಿದ್ದರು.

ಸ್ಥಳೀಯರು ಕೂಡಾ ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸಿದ್ದರು. ಸತತ 6 ಗಂಟೆಗಳ ಕಾರ್ಯಾಚರಣೆ ಬಳಿಕ ರೋಹಿತ್‌ನನ್ನು ಸುರಕ್ಷಿತವಾಗಿ ಮೇಲೆತ್ತಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...