Connect with us

DAKSHINA KANNADA

ಮಂಗಳೂರಿನಲ್ಲಿ 13ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ : ಪಾಲಿಕೆ ಮುಂದೆ ಕಸ ಇಟ್ಟು ಒಂಟಿ ಪ್ರತಿಭಟನೆ ಮಾಡಿದ ನಿವೃತ್ತ ಪತ್ರಕರ್ತ..!

Published

on

ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಎಲ್ಲೆಂದರಲ್ಲಿ ಕಸದ ರಾಶಿ ದುರ್ನಾತ ಬೀರತೊಡಗಿದೆ. ಪೌರ ಕಾರ್ಮಿಕರ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದೆ.

ಮಂಗಳೂರು : ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಎಲ್ಲೆಂದರಲ್ಲಿ ಕಸದ ರಾಶಿ ದುರ್ನಾತ ಬೀರತೊಡಗಿದೆ. ಪೌರ ಕಾರ್ಮಿಕರ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದೆ.

ನಗರದಲ್ಲಿ ಹೆಚ್ಚುತ್ತಿರುವ ಕಸದ ರಾಶಿಯನ್ನು ಕಂಡು ಆಕ್ರೋಶಗೊಂಡಿರುವ ನಿವೃತ್ತ ಪತ್ರಕರ್ತ ನಂದಗೋಪಾಲ್ ಎಂಬವರು ಒಂಟಿ ಪ್ರತಿಭಟನೆಯನ್ನು ಪಾಲಿಕೆ ಮುಂದೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದವರು ನೇರ ನೇಮಕಾತಿ/ ನೇರ ಪಾವತಿಗೆ ಆಗ್ರಹಿಸಿ ಕರೆ ಕೊಟ್ಟ ಮುಷ್ಕರ 13ನೇ ದಿನಕ್ಕೆ ಕಾಲಿಟ್ಟಿದೆ.

ಮುಷ್ಕರದ ತೀವ್ರತೆಯಿಂದ ತ್ಯಾಜ್ಯ ವಿಲೇವಾರಿ ಸಮಸ್ಯೆಗಿಂತ ಹೆಚ್ಚಾಗಿ ಒಳಚರಂಡಿ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳು ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಪರ್ಯಾಯ ದಾರಿ ಇಲ್ಲದೇ ಮಹಾ ನಗರ ಪಾಲಿಕೆ ಆಡಳಿತ ವರ್ಗ ಕಂಗಾಲಾಗಿ ಹೋಗಿದೆ.

ಏತನ್ಮಧ್ಯೆ ಮಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆ ಜತೆಗೆ ಒಳಚರಂಡಿ ವ್ಯವಸ್ಥೆ ಕುರಿತು ಸಾರ್ವಜನಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ, ಅಭಿಪ್ರಾಯ ವ್ಯಕ್ತವಾಗುತ್ತಿದೆ.

ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಬಿಟ್ಟು ಫುಡ್‌ಫೆಸ್ಟಿವಲ್‌ಆಯೋಜಿಸಿದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ನಂದಗೋಪಾಲ್ ಪಾಲಿಕೆ ಮುಂದೆ ತಮ್ಮ ಮನೆಯಿಂದ ತಂದಿದ್ದ ಒಣ ತ್ಯಾಜ್ಯ ಇಟ್ಟು ಪ್ರತಿಭಟನೆ ನಡೆಸಿದರು.

ಮಂಗಳೂರು ದಕ್ಷಿಣ ಕ್ಷೇತ್ರದ ಒಬ್ಬ ಪ್ರಜೆಯಾಗಿ ನಾನು ಈ ಪ್ರತಿಭಟನೆ ಮಾಡುತ್ತಿದ್ದೇನೆ. ಇದರಲ್ಲಿ ನನ್ನ ಯಾವುದೇ ಸ್ವಾರ್ಥ ಇಲ್ಲ. ಇನ್ನಾದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ ಎಂದು ನಂದಗೋಪಾಲ್‌ ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending