Saturday, February 4, 2023

ವೇತನ ನೀಡದೆ ಸತಾಯಿಸಿದ ಕಂಪನಿ ವಿರುದ್ಧ ಸಿಡಿದೆದ್ದ ಕಾರ್ಮಿಕರು: ಬೆಂಕಿ ಹಚ್ಚಿ ಕಲ್ಲು ತೂರಾಟ ..!

ವೇತನ ನೀಡದೆ ಸತಾಯಿಸಿದ ಕಂಪನಿ ವಿರುದ್ಧ ಸಿಡಿದೆದ್ದ ಕಾರ್ಮಿಕರು: ಬೆಂಕಿ ಹಚ್ಚಿ ಕಲ್ಲು ತೂರಾಟ ..!

ಕೋಲಾರ: ಕಳೆದ ನಾಲ್ಕು ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ವೇತನ ನೀಡಿಲ್ಲ ಎಂದು ಆರೋಪಿಸಿ, ಕಾರ್ಮಿಕರು ಕಂಪೆನಿಗೆ ಕಲ್ಲು ತೂರಿ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿರುವ ಘಟನೆ ನಗರ whogೊರ ವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಜಿಲ್ಲೆಯ ಹೊರ ವಲಯದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪೆನಿಯ ನೌಕರರಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ನೀಡದೆ ಇಲ್ಲಸಲ್ಲದ ಸಬೂಬು ಹೇಳಿಕೊಂಡು ಬರುತ್ತಿತ್ತು.

ಇದರಿಂದ ರೊಚ್ಚಿಗೆದ್ದ ನೌಕರರು ಏಕಾಏಕಿ ಕಂಪೆನಿಗೆ ನುಗ್ಗಿ ಗಾಜುಗಳನ್ನು ಪುಡಿಪುಡಿ ಮಾಡಿ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ನಮಗೆ ನಾಲ್ಕು ತಿಂಗಳಿನಿಂದ ವೇತನ ನೀಡಿಲ್ಲ ಎಂದು ಆರೋಪಿಸಿರುವ ನೌಕರರು, ನಮ್ಮ ಜೀವನ ಹೇಗೆ ನಡೆಯಬೇಕು. ಈ ಕೆಲಸವನ್ನೇ ನಂಬಿಕೊಂಡಿದ್ದು, ನಮ್ಮ ಕುಟುಂಬದವರ ಗತಿ ಏನಾಗಬೇಕು?

ನಾವು ಇಂದು ಅಥವಾ ನಾಳೆ ಸಂಬಳ ಕೊಡಬಹುದೆಂದು ಸಂಯಮದಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಆದರೆ, ನಾಲ್ಕು ತಿಂಗಳಾರೂ ನಮಗೆ ಬರಬೇಕಾದ ವೇತನವನ್ನು ನೀಡಿಲ್ಲ. ಹಾಗಾಗಿ ಅಂತಿಮವಾಗಿ ನಾವು ಪ್ರತಿಭಟನೆಗೆ ಇಳಿಯಬೇಕಾಯಿತು ಎಂದು ನೌಕರರು ತಮ್ಮ ಅಳಲು ತೋಡಿಕೊಂಡಿದ್ದಾರೆ.ರಾತ್ರಿ ಪಾಳಿ ಕೆಲಸ ಮುಗಿಸಿದ ಹಾಗೂ ಬೆಳಗ್ಗೆ ಕೆಲಸಕ್ಕೆ ಹಾಜರಾಗುವ ನೌಕರರು ಜತೆಗೂಡಿ ಕಂಪೆನಿ ಮೇಲೆ ದಾಳಿಮಾಡಿದ್ದಾರೆ. ಗುತ್ತಿಗೆದಾರರು ವೇತನ ತಾರತಮ್ಯ ಮಾಡುತ್ತಿದ್ದು, ನಮಗೆ ಸಂಬಂಳ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.ಜಿಲ್ಲಾಧಿಕಾರಿ ಸತ್ಯವತಿ, ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ ಕಾರ್ತಿಕ್‍ರೆಡ್ಡಿ ಪ್ರತಿಭಟನಾಕಾರರ ಮನವೊಲಿಸಲು ಮುಂದಾದರು.    ಸುದ್ದಿ ತಿಳಿಯುತ್ತಿದ್ದಂತೆ ವೇಮಗಲ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.ಸ್ಥಳದಲ್ಲೇ ಪೊಲೀಸರು ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಆಟೋ- ಮಹಿಳೆ ಸಾವು..!

ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಮುಂಡಾಜೆ ಸಮೀಪ ನಡೆದಿದೆ.ಬೆಳ್ತಂಗಡಿ: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ...

ದಕ್ಷಿಣ ಅಮೇರಿಕದಲ್ಲಿ ಭಾರಿ ಬೆಂಕಿ ದುರಂತ : ಕಾಡ್ಗಿಚ್ಚಿಗೆ 13 ಬಲಿ – ಸಾವಿರಾರು ಎಕರೆ ಅರಣ್ಯ ಬೆಂಕಿಗೆ ಆಹುತಿ..!

ಚಿಲಿ : ದಕ್ಷಿಣ ಅಮೇರಿಕದ ಚಿಲಿ ರಾಜಧಾನಿಯ ಸ್ಯಾಂಟಿಯಾಗೋ ಸಮೀಪ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು, ಕಾಡ್ಗಿಚ್ಚಿನ ಕಾರಣದಿಂದ ಸಾವಿರಾರು ಎಕರೆ ಅರಣ್ಯ ಹೊತ್ತಿ ಉರಿದು, 13ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 35,000 ಎಕರೆ ಪ್ರದೇಶ...

ಸೌದಿ ಅರೇಬಿಯಾದಲ್ಲಿ ಭೀಕರ ವಾಹನ ಅಪಘಾತ : ಮಂಗಳೂರು ಮೂಲದ ಮೂವರ ದಾರುಣ ಅಂತ್ಯ..!

ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಅನಿವಾಸಿ ಉದ್ಯೋಗಿಗಳು ಮೃತಪಟ್ಟಿರುವ ದಾರುಣ ಘಟನೆ ಕಳೆದ ರಾತ್ರಿ ನಡೆದಿದೆ.ರಿಯಾದ್:...