ವಿಜಯವಾಡ: ಮನೆಯಲ್ಲಿ ವರ್ಕ್ ಫ್ರಮ್ ಹೋಮ್ ನಿರ್ವಹಿಸುತ್ತಿದ್ದ ವೇಳೆ ಲ್ಯಾಪ್ಟಾಪ್ ಸ್ಫೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ ವೈಎಸ್ಆರ್ ಜಿಲ್ಲೆಯ ಬಿ. ಕೋಡೂರು ಮಂಡಲದ ಮೇಕವಾರಿಪಲ್ಲಿ ಗ್ರಾಮದಲ್ಲಿ ನಡೆದಿದೆ.
ಸಮತಿ ಗಂಭೀರವಾಗಿ ಗಾಯಗೊಂಡ ಯುವತಿಯಾಗಿದ್ದಾರೆ.
ಕೋವಿಡ್ನಿಂದಾಗಿ ಬಹುತೇಕ ಕಂಪನಿಗಳು ವರ್ಕ್ ಫ್ರಮ್ ಹೋಮ್ ಅವಕಾಶ ನೀಡಿವೆ. ಹೀಗಾಗಿ ಮನೆಯಲ್ಲೇ ಲ್ಯಾಪ್ಟಾಪ್ ಮೂಲಕ ಕೆಲಸ ಮಾಡುತ್ತಿದ್ದ ಯುವತಿ ಅದು ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದಲ್ಲಿರುವ ಸಾಫ್ಟ್ವೇರ್ ಕಂಪನಿವೊಂದರಲ್ಲಿ ಉದ್ಯೋಗದಲ್ಲಿದ್ದ ಸುಮತಿ ಇಂದು ಬೆಳಗ್ಗೆ ಲ್ಯಾಪ್ಟಾಪ್ ಚಾರ್ಜ್ ಮಾಡಲು ಇಟ್ಟು ಅದರಲ್ಲಿ ಕೆಲಸ ಮಾಡುತ್ತಿದ್ದರು.
ತಾನು ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಬ್ಯಾಟರಿ ಸ್ಫೋಟಗೊಂಡಿದೆ. ಯುವತಿ ಬೀಗ ಹಾಕಿಕೊಂಡಿದ್ದ ಕಾರಣ, ಆಕೆಯ ರಕ್ಷಣೆ ಮಾಡುವಲ್ಲಿ ಸ್ವಲ್ಪ ತಡವಾಗಿದೆ.
ರೂಂನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಸುಮತಿ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.