Connect with us

LATEST NEWS

ಮರೆವಿನ ಕಾಯಿಲೆಗೆ ಕಾಳಜಿ ಅಗತ್ಯ: ಪ್ರೊ. ಸತೀಶ್ ಭಂಡಾರಿ ಅಭಿಪ್ರಾಯ

Published

on

ಮಂಗಳೂರು: ಅಲ್ಝಮೈರ್ಸ್ ಕಾಯಿಲೆಯಿಂದ ಸಂಪೂರ್ಣ ಮುಕ್ತರಾಗುವುದು ಕಷ್ಟ. ಆದರೆ ಅದನ್ನು ನಿರ್ವಹಿಸಬಹುದು. ಹೀಗಾಗಿ ಯಾರೂ ಭಯಪಡಬೇಕಾದ ಅಗತ್ಯವಿಲ್ಲ.

ಮರೆವಿನ ಖಾಯಿಲೆ ಬಗ್ಗೆ ಇಂದು ಸಮಾಜದಲ್ಲಿ ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ.

ಆದರೆ ಗ್ರಾಮೀಣ ಭಾಗಗಗಳಲ್ಲಿ ಇರುವ ಕೂಡು ಕುಟುಂಬಗಳಲ್ಲಿ ಇಂತಹ ಮೆರೆವಿನ ಖಾಯಿಲೆಯ ಮಂದಿ ಇದ್ದರೂ ಕೂಡಾ ಹೆಚ್ಚಿನ ಸಮಸ್ಯೆ ಆಗುವುದಿಲ್ಲ.

ಎಲ್ಲರನ್ನೂ ಅನ್ಯೋನ್ಯತೆಯಿಂದ ಕಾಣುತ್ತಾರೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಸತೀಶ್ ಭಂಡಾರಿ ಅಭಿಪ್ರಾಯಪಟ್ಟರು.

 

ಪೀಪಲ್ಸ್ ಅಸೋಸಿಯೇಶನ್ ಫಾರ್ ಜೆರಿ ಏಟ್ರಿಕ್ ಎಂಪವರ್ಮೆಂಟ್ ಪೇಜ್ ಇದರ ವತಿಯಿಂದ ಕದ್ರಿ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಅಲ್ಝಮೈರ್ಸ್ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಣ್ಣದ ಬಲೂನುಗಳನ್ನು ಹಾರಿ ಬಿಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಡಿ.ಸಿ.ಪಿ ಹರಿರಾಂ ಶಂಕರ್ ಮಾತನಾಡಿ, ನಮ್ಮ ಕುಟುಂಬದಲ್ಲೂ ಮರೆವಿನ ಖಾಯಿಲೆ ಇದ್ದವರು ಇದ್ದರು.

ಇದರಿಂದ ಕುಟುಂಬದ ಇತರ ಸದಸ್ಯರಿಗೆ ಮಾನಸಿಕ ನೋವುಗಳಾಗುವ ಸಂದರ್ಭವೇ ಹೆಚ್ಚಿದೆ.

ಹೀಗಾಗಿ ಅವರ ಆರೈಕೆ ಬಗ್ಗೆ ನಾವು ಕಾಳಜಿ, ಜಾಗೃತೆ ವಹಿಸಬೇಕಾಗಿದೆ ಎಂದರು. ಜೀವನದ ಕೊನೆಗಾಲದಲ್ಲಿ ಕಾಡುವ ದೀರ್ಘಕಾಲೀನ ಸಮಸ್ಯೆ ಇದು.

ಸ್ಮರಣಶಕ್ತಿ, ಬುದ್ಧಿಶಕ್ತಿ, ಕಲಿಕೆ, ಕ್ರಿಯಾಶೀಲತೆ, ಭಾಷಾ ಸಾಮರ್ಥ್ಯ, ಗ್ರಹಿಕೆ ಹಾಗೂ ಕ್ಷೀಣಿಸಿದ ನಿರ್ಧಾರ, ವಿವೇಚನ ಶಕ್ತಿ ಭಾವನೆ ಮತ್ತು ನಡವಳಿಕೆಯಲ್ಲಿ ಬದಲಾವಣೆ ಆಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ಜಿಲ್ಲಾ ಲೀಗಲ್ ಸರ್ವೀಸ್ ಅಥೋರಿಟಿ ಇದರ ಹಿರಿಯ ಸಿವಿಲ್ ಜಡ್ಜ್ ಹಾಗೂ ಮೆಂಬರ್ ಸೆಕ್ರಟರಿ ಪ್ರಥ್ವಿರಾಜ್ ಜಿ. ವರ್ನೆಕರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರವಿ ಶಂಕರ್ ಮಿಜಾರ್ ಮಾತನಾಡಿದರು.

ತುಳು, ರಂಗಭೂಮಿ ಹಾಗೂ ಚಲನ ಚಿತ್ರ ನಟ ನವೀನ್ ಡಿ. ಪಡೀಲ್, ಯೆನಪೋಯ ಕಾಲೇಜಿನ ಮಾಜಿ ಉಪ ಕುಲಪತಿ ಡಾ ಸಿ ವಿ ರಘುವೀರ್, ಪೇಜ್ ಸಂಸ್ಥೆಯ ಉಪಾಧ್ಯಕ್ಷೆ ಡಾ.ಪ್ರಭಾ ಅಧಿಕಾರಿ ಎಂ ಆರ್, ಕಾರ್ಯದರ್ಶಿ ಜೆರಾಡಿನ್ ಡಿ ಸೋಜಾ, ಜಂಟಿ ಕಾರ್ಯದರ್ಶಿ ಮೋಹನ್ ರಾಜ್ ಮೊದಲಾದವರಿದ್ದರು.

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending