MANGALORE
ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ
ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕರ್ನಾಟಕ ಅರಣ್ಯ ಇಲಾಖೆಯ ಮಂಗಳೂರು ವಿಭಾಗದ ಡಿಸಿಎಫ್ ಡಾ.ವೈ. ದಿನೇಶ್ ಕುಮಾರ್ ಅವರು ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದರು.
ಇದೇ ವೇಳೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪದ್ಮಶ್ರೀ ತುಳಸಿ ಗೌಡ ಅವರನ್ನು ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಎಂಆರ್‌ಪಿಎಲ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಎಂ.ವೆಂಕಟೇಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಎಸ್‌ಪಿಸಿಬಿ ಮಂಗಳೂರು ಇದರ ಇಓ ಕೀರ್ತಿ ಕುಮಾರ್, ಎಂ.ದಿನೇಶ್ ನಾಯಕ್, ಎಂ.ಆರ್.ಪಿಎಲ್ ರಿಫೈನರಿ ವಿಭಾಗದ ಸಂಜಯ್ ವರ್ಮಾ, ಸುದರ್ಶನ್ ಎಂ.ಎಸ್ ಇದ್ದರು.
LATEST NEWS
ಸುರತ್ಕಲ್: ರಸ್ತೆ ಕಾಮಗಾರಿಗೆ ಅಗೆದಿದ್ದ ಹೊಂಡಕ್ಕೆ ಬಿದ್ದ ಸವಾರ !!!
ಸುರತ್ಕಲ್: ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ (ಅ.9) ರಾತ್ರಿ ನಡೆದಿದೆ.
ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್ ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಸಹೋದರಿಗೆ ಮನೆಯಿಂದ ಊಟ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಗಾಯಾಳು ಯುವಕ ಸುರತ್ಕಲ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ ಎಂದು ತಿಳಿದು ಬಂದಿದೆ.
ರಸ್ತೆಯಲ್ಲಿ ಇರುವ ಗುಂಡಿಯ ಬಳಿ ಬ್ಯಾರಿಕೆಟ್ ಇಡಲಾಗಿತ್ತಾದರೂ ಅದಕ್ಕೆ ಯಾವುದೇ ರಿಫ್ಲೆಕ್ಟರ್ ಸ್ಟಿಕ್ಕರ್ ಅಳವಡಿಸಲಾಗಿರಲಿಲ್ಲ. ಹೀಗಾಗಿ ಯುವಕನಿಗೆ ಬ್ಯಾರಿಕೇಟ್ ಮತ್ತು ಗುಂಡಿ ಗಮನಕ್ಕೆ ಬಂದಿರಲಿಲ್ಲ ಎನ್ನಲಾಗಿದೆ. ಸುಗ್ಗಿ ಬಾರ್ & ರೆಸ್ಟೋರೆಂಟ್ ಬಳಿ ಹೈಮಾಸ್ಟ್ ದೀಪ ಇತ್ತು. ಈಗ ಅದನ್ನು ತೆರವುಗೊಳಿಸಿ ಗ್ಯಾಸ್ ಸಾಗಾಟದ ಬುಲೆಟ್ ಟ್ಯಾಂಕರ್ ಗಳು ಪಾರ್ಕಿಂಗ್‌ಗೆ ಹೋಗಲು ರಸ್ತೆ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೊತೆಗೆ ಈ ರಸ್ತೆಯಲ್ಲಿ ಗ್ಯಾಸ್ ಸಾಗಾಟದ ಬುಲೆಟ್ ಟ್ಯಾಂಕರ್ ಚಾಲಕರು ರಸ್ತೆ ಸಂಚಾರದ ನಿಯಮಗಳನ್ನು ಗಾಳಿಗೆ ತೂರಿ ಸಂಚಾರ ಮಾಡುತ್ತಿರುತ್ತಾರೆ. ಈ ಬಗ್ಗೆ ಸ್ಥಳಿಯರು ದೂರು ನೀಡಿದರೂ ಪ್ರಯೋಜನ ವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಕಾಂಕ್ರಿಟ್ ರಸ್ತೆ ಕಾಮಗಾರಿ ಆರಂಭಗೊಂಡು ವರ್ಷ ಕಳೆದರೂ ಇನ್ನೂ ರಸ್ತೆಯನ್ನು ಪೂರ್ಣಗೊಳಿಸಿಲ್ಲ. ಈ ಹೊಂಡ ಸರಿ ಪಡಿಸಲು ಮತ್ತು ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ಜನರು ಅಪಘಾತಕ್ಕೀಡಾಗಬೇಕು, ಎಷ್ಟು ಜನರು ರಕ್ತಹರಿಸಬೇಕು. ಪ್ರಾಣ ಬಲಿಗಾಗಿ ಸುರತ್ಕಲ್ ಮಹಾನಗರ ಪಾಲಿಕೆ ಕಾಯುತ್ತಿದೆಯೇ.? ಎಂದು ಪ್ರಶ್ನಿಸಿದ್ದಾರೆ. ಮುಂದಿನ ದಿನಗಳಲ್ಲಿ ಸ್ಥಳೀಯ ನಾಗರಿಕರು ಸೇರಿ ಮಹಾ ನಗರ ಪಾಲಿಕೆಯ ಸುರತ್ಕಲ್ ವಲಯ ಕಚೇರಿಯ ಎದುರು ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
DAKSHINA KANNADA
ಮಂಗಳೂರು – ಕಟೀಲಮ್ಮನ ಮಡಿಲಲ್ಲಿ ಹಲವಾರು ಬಣ್ಣದ ವೇಷಗಳ ವೈಭವ
ಮಂಗಳೂರು: ನಂದಿನಿ ನದಿಯ ಮಧ್ಯದಲ್ಲಿ ರಾರಾಜಿಸುತ್ತಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಅದ್ದೂರಿಯಾಗಿ ನಡೆಯುವ ಶರನ್ನವರಾತ್ರಿ ಉತ್ಸವದ ವೈಭವ ಒಂದು ಕಡೆಯಾದರೆ ಹುಲಿ, ಸಿಂಹ ಸೇರಿದಂತೆ ಸಾವಿರಾರು ಬಣ್ಣದ ವೇಷಗಳು ಸೇವೆ ಸಲ್ಲಿಸುವ ಸೊಬಗು ಇನ್ನೊಂದು ಕಡೆ.
ಹಲವಾರು ತಂಡಗಳು ಹುಲಿ ವೇಷ ಹಾಕಿ ತಿರುಗಾಟ ನಡೆಸಿ ಅಂತಿಮವಾಗಿ ಕಟೀಲಿಗೆ ಬಂದು ದೇವಾಲಯದ ಆವರಣದಲ್ಲಿ ನರ್ತಿಸಿ ವೇಷ ಕಳಚಿ ನಂದಿನಿ ನೀರಿನಲ್ಲಿ ಮಿಂದು ಹೋಗುವುದು ರೂಢಿ. ವೇಷ ಹಾಕುವಾಗಲೇ ಕಟೀಲಿನಲ್ಲಿ ವೇಷ ಬಿಚ್ಚುತ್ತೇವೆ ಎಂದು ಹರಕೆ ಹೊತ್ತವರು ಒಂದೆಡೆಯಾದರೆ, ಕಟೀಲು ಕ್ಷೇತ್ರದಲ್ಲೇ ಸೇವೆ ಸಲ್ಲಿಸಿ ಮರಳಿ ಅಲ್ಲೇ ವೇಷ ಬಿಚ್ಚುತ್ತೇವೆ ಎನ್ನುವವರು ಇನ್ನೊಂದೆಡೆ ಇದ್ದಾರೆ. ಇದು ತಲತಲಾಂತರಗಳಿಂದ ಪಾಲಿಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.
ಶರನ್ನವರಾತ್ರಿ ಸಮಯದಲ್ಲಿ ಕಟೀಲು ದೇವಾಲಯದ ಆವರಣದಲ್ಲಿ ನಿತ್ಯವೂ ಹತ್ತಾರು ತಂಡಗಳ ಹುಲಿ ವೇಷ ನರ್ತನ ಇರುತ್ತದೆ. ಒಟ್ಟಾರೆಯಾಗಿ 2000 ಕ್ಕೂ ಅಧಿಕ ವೇಷಗಳು , 70 ರಿಂದ 80 ತಂಡಗಳು ಕಟೀಲು ಸನ್ನಿಧಿಗೆ ಬಂದು ಸೇವೆ ಸಲ್ಲಿಸುತ್ತವೆ ಎಂದು ಹೇಳಬಹುದು.
LATEST NEWS
ಮಂಗಳೂರು ದಸರಾದಲ್ಲಿ ಆಕರ್ಷಿಸಲ್ಪಡುವ ದೇವಿ ಮೂರ್ತಿಯ ತಯಾರಕರು ಇವರೇ ನೋಡಿ!
ಮಂಗಳೂರು: ಮಂಗಳೂರು ದಸರಾ ನಡೆಯುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜಿಸಲ್ಪಡುವ ಮೂರ್ತಿಗಳೇ ಎಲ್ಲರನ್ನು ಆಕರ್ಷಿಸುತ್ತವೆ. ಮುದ್ದು ಮುಖದ ಶಾರದಾ ಮಾತೆ ಸೇರಿ ಎಲ್ಲಾ ದೇವರ ಮಣ್ಣಿನ ಮೂರ್ತಿಗಳನ್ನು ನೋಡುವುದೇ ಕಣ್ಣಿಗೆ ಹಬ್ಬದ ವಾತಾವರಣದಂತಿರುತ್ತದೆ. ನವರಾತ್ರಿಯಲ್ಲಿ ಬರುವ ಎಲ್ಲ ಲಕ್ಷಾಂತರ ಜನರಿಗೆ ಅಲ್ಲಿನ ದೇವಿಯ ಮೂರ್ತಿಗಳೇ ಮುಖ್ಯವಾಗಿ ಸೆಳೆಯುತ್ತವೆ.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಸಂಭ್ರಮಕ್ಕೆ ಮೆರಗು ನೀಡುವುದೇ ಗಣಪತಿ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯ ಮಣ್ಣಿನ ಮೂರ್ತಿಗಳು. ಈ ಮೂರ್ತಿಗಳನ್ನ ನೋಡುವ ಸಲುವಾಗಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಬರುತ್ತಾರೆ. ಜೊತೆಗೆ ಒಂದೇ ಸೂರಿನಡಿ ನವದುರ್ಗೆಯರು, ಶಾರದಾ ಮಾತೆಯ ಪ್ರತಿಷ್ಟಾಪನೆ, ಆರಾಧನೆ ದೇಶದ ಬೇರೆಲ್ಲೂ ನಡೆಯುವುದಿಲ್ಲ. ಇಂತಹ ಅದ್ಬುತ ಮೂರ್ತಿಗಳಿಗೆ ಜೀವ ತುಂಬುವ ಕಲೆಗಾರರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿಗಳನ್ನು ನೋಡಿ ಕಲಾವಿದನ ಕೈಚಳಕಕ್ಕೆ ಎಲ್ಲರೂ ಸೈ ಎನ್ನುತ್ತಾರೆ. ಆ ಕಲಾವಿದರು ಕಲೆಯ ಹಿಂದೆ ಇರುತ್ತಾರೆಯೇ ಹೊರತು ಎಲ್ಲಿಯೂ ಕಾಣಿಸಿಕೊಳ್ಳೋದಿಲ್ಲ. ಮೂರ್ತಿಗಳನ್ನು ರಚಿಸಿ ಅದಕ್ಕೆ ಜೀವ ತುಂಬುವ ಆ ಕಲಾವಿದರ ಕೈಚಳಕವೇ ಅದ್ಭುತ.
ನವರಾತ್ರಿ ಉತ್ಸವ ಆರಂಭವಾದ ದಿನಗಳಲ್ಲಿ ಶಿವಮೊಗ್ಗದ ಬಿ.ಜೆ.ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು. ಇದೀಗ ಅದೇ ತಂಡದಲ್ಲಿ ಕಲಾವಿದನಾಗಿ ಶಿವಮೊಗ್ಗದ ಕುಬೇರ ತನ್ನ 18 ವರ್ಷದ ಪ್ರಾಯದಲ್ಲಿಯೇ ಕೆಲಸ ಆರಂಭಿಸಿದ್ದರು. ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ ಕಳೆದ ಏಳು ವರ್ಷದಿಂದ ನವರಾತ್ರಿಯ ಎಲ್ಲಾ 12 ಮೂರ್ತಿಗಳನ್ನು ರಚಿಸುತ್ತಾರೆ. ದೇವತೆಯ ಸ್ವರೂಪವಾದ ಮೂರ್ತಿಗಳನ್ನು ರಚಿಸುವಾಗ ಈ ಎಲ್ಲಾ ಕಲಾವಿದರು ಶ್ರದ್ದೆ, ನಿಷ್ಠೆ, ಭಕ್ತಿಯ ಜೊತೆ ವೃತಾಚರಣೆ, ಜಪವನ್ನು ಮಾಡಿ ಮೂರ್ತಿಗಳನ್ನು ರಚಿಸುತ್ತಾರೆ. ಆದೇ ಮಣ್ಣಿನಿಂದಲೇ ಪರಿಸರ ಪ್ರೇಮಿ ಬಣ್ಣಗಳನ್ನು ಬಳಸಿ ಮೂರ್ತಿಗಳ ರಚನೆ ಮಾಡುತ್ತಾರೆ. ದೇವಿಯೇ ನಮ್ಮ ಕೈಯಿಂದ ಈ ರೀತಿ ಸುಂದರವಾಗಿ ಮಾಡಿಸುತ್ತಾರೆ ಎನ್ನುವುದು ಕಲಾವಿದರ ಮಾತು.
ಸುಮಾರು 40 ದಿನಗಳ ಕಾಲ ರಾತ್ರಿ-ಹಗಲು ಈ 12 ಮೂರ್ತಿಗಳನ್ನು 15 ಮಂದಿ ಕಲಾವಿದರು ಸೇರಿ ರಚನೆ ಮಾಡಿದ್ದಾರೆ. ಪ್ರತೀ ವರ್ಷವೂ ವಿಸರ್ಜನೆಗೊಳ್ಳುವ ಈ ಮೂರ್ತಿಗಳು ಮತ್ತೆ ಮುಂದಿನ ವರ್ಷ ಪ್ರತ್ಯಕ್ಷವಾಗಿದೆಯೇ ಅನ್ನುವಷ್ಟರ ಮಟ್ಟಿಗೆ ಅಷ್ಟೇ ಸುಂದರವಾಗಿ ಈ ಕಲಾವಿದರ ತಂಡ ಪ್ರತಿ ವರ್ಷ ಮೂರ್ತಿಗಳನ್ನು ರಚಿಸುತ್ತಾರೆ.
- LATEST NEWS6 days ago
ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಹಂಚಿಕೆ; ನಾಲ್ವರು ವಿದ್ಯಾರ್ಥಿಗಳ ಬಂಧನ
- FILM3 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್
- BIG BOSS7 days ago
ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು.. ಏನಿದು ವಿವಾದ?
- DAKSHINA KANNADA5 days ago
ಮಂಗಳೂರು : ರಾತ್ರಿ ಹೊತ್ತಲ್ಲಿ ಯುವಕನ ಬೆತ್ತಲೆ ಓಡಾಟ; ಭಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು