Connect with us

MANGALORE

ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ

Published

on

ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (ಎಂಆರ್‌ಪಿಎಲ್‌) ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.


ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕರ್ನಾಟಕ ಅರಣ್ಯ ಇಲಾಖೆಯ ಮಂಗಳೂರು ವಿಭಾಗದ ಡಿಸಿಎಫ್‌ ಡಾ.ವೈ. ದಿನೇಶ್‌ ಕುಮಾರ್‌ ಅವರು ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದರು.

ಇದೇ ವೇಳೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪದ್ಮಶ್ರೀ ತುಳಸಿ ಗೌಡ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಎಂಆರ್‌ಪಿಎಲ್‌ನ ಮ್ಯಾನೇಜಿಂಗ್‌ ಡೈರೆಕ್ಟರ್‌ ಎಂ.ವೆಂಕಟೇಶ್‌ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಎಸ್‌ಪಿಸಿಬಿ ಮಂಗಳೂರು ಇದರ ಇಓ ಕೀರ್ತಿ ಕುಮಾರ್‌, ಎಂ.ದಿನೇಶ್‌ ನಾಯಕ್‌, ಎಂ.ಆರ್‌.ಪಿಎಲ್‌ ರಿಫೈನರಿ ವಿಭಾಗದ ಸಂಜಯ್‌ ವರ್ಮಾ, ಸುದರ್ಶನ್‌ ಎಂ.ಎಸ್‌ ಇದ್ದರು.

DAKSHINA KANNADA

ಮೂಲ್ಕಿ: ವಿವಿಧ ರಂಗಗಳ ಸಾಧಕರಿಗೆ ‘ಅರಸು ಕಂಬಳ’ ಪ್ರಶಸ್ತಿ ಪ್ರದಾನ

Published

on

ಮೂಲ್ಕಿ: ಮೂಲ್ಕಿ ಅರಸು ಕಂಬಳ ಸಂದರ್ಭ ಮೂಲ್ಕಿ ಸೀಮೆ ವ್ಯಾಪ್ತಿಯ ವಿವಿಧ ರಂಗಗಳ 14 ಮಂದಿ ಸಾಧಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಅರಮನೆಯ ಧರ್ಮ ಚಾವಡಿಯಲ್ಲಿ ಅರಸು ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ರಮ ಡಿ. 22ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಅರಸರಾದ ದುಗ್ಗಣ್ಣ ಸಾವಂತರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮೂಲ್ಕಿ ಅರಮನೆ ಟ್ರಸ್ಟ್ ಮತ್ತು ಹಳೆಯಂಗಡಿಯ ಪ್ರಿಯ ದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಸಹಭಾಗಿತ್ವದಲ್ಲಿ ಕಾಠ್ಯಕ್ರಮ ನಡೆ. ಯಲಿದೆ. ಶ್ರೀ ಅರುಣಾನಂದ ತೀರ್ಥ ಸ್ವಾಮೀ ಜಿ (ಸಾಧನಾ ಪ್ರಶಸ್ತಿ) ದಿ। ಎಚ್. ನಾರಾಯಣ ಸನಿಲ್ (ಮರಣೋತ್ತರ-ಸಮಾಜ ಸೇವೆ ಮತ್ತು ಶಿಕ್ಷಣ, ಸಹಕಾರಿ) ದಿ। ಎನ್. ಬಾಬು ಶೆಟ್ಟಿ (ಮರಣೋತ್ತರ-ಸಮಾಜ ಸೇವೆ), ಮೀರಾ ಬಾಯಿ ಕೆ. (ಶಿಕ್ಷಣ), ಎಚ್. ಶಕುಂತಳಾ ಭಟ್ (ಸಾಹಿತ್ಯ) ವಾಲ್ಟರ್ ಡಿ’ಸೋಜಾ (ಕೃಷಿ ಮತ್ತು ಪರಿಸರ), ಡಾ। ಹಸನ್ ಮುಬಾರಕ್ (ವೈದ್ಯಕೀಯ), ಸೀತಾರಾಮ್ ಕುಮಾರ್ ಕಟೀಲು (ಯಕ್ಷಗಾನ), ಪರಮಾನಂದ ಸಾಲ್ಯಾನ್ (ಸಾಹಿತ್ಯ), ಶಿವ ಸಂಜೀವಿನಿ ಸುರಗಿರಿ (ಸಂಘ ಸಂಸ್ಥೆ), ಮಾಧವ ಶೆಟ್ಟಿಗಾರ್ ಮತ್ತು ಚಂದ್ರಕುಮಾರ್ (ಸಾಮಾಜಿಕ ಕ್ಷೇತ್ರ) ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು (ಸಂಘಸಂಸ್ಥೆ) ವಿನಾಯಕಯಕ್ಷಗಾನ ಫೌಂಡೇಶನ್ ಕೆರೆಕಾಡು (ಯಕ್ಷಗಾನ ತಂಡ) ಇವರಿಗೆ ಪ್ರಶಸ್ತಿ ನೀಡಲಾಗುವುದು.

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಆಳದಂಗಡಿ ಅರಮನೆಯ ತಿಮ್ಮಣ್ಣ ಅರಸರಾದ ಡಾ। ಪದ್ಮಪ್ರಸಾದ್ ಅಜಿಲರು, ದ.ಕ. ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿವೃತ್ತ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ಪಿ. ಮುಂತಾದವರು ಉಪಸ್ಥಿತರಿರುವರು ಎಂದರು. ಅರಮನೆಟ್ರಸ್ಟ್‌ನ ಗೌತಮ್ ಜೈನ್, ಪ್ರಿಯದರ್ಶಿನಿ ಸೊಸೈಟಿಯ ಅಧ್ಯಕ್ಷ ವಸಂತ್ ಬೆರ್ನಾಡ್ ಹಾಗೂ ಸಿಇಒ ಸುದರ್ಶನ್ ಉಪಸ್ಥಿತರಿದ್ದರು.

Continue Reading

LATEST NEWS

ಪಾಣೆಮಂಗಳೂರು: ಹಳೆಸೇತುವೆಯ ಕಬ್ಬಿಣದ ತಡೆಬೇಲಿಯಲ್ಲಿ ಸಿಲುಕಿದ ಗೂಡ್ಸ್ ವಾಹನ!

Published

on

ಬಿ.ಸಿ.ರೋಡ್: ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ತಡೆಗೆ ಹಾಕಿದ್ದ ತಡೆಬೇಲಿಯಲ್ಲಿ ಗೂಡ್ಸ್ ವಾಹನವೊಂದು ಸಿಲುಕಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಸುರಕ್ಷತೆಯ ದೃಷ್ಟಿಯಿಂದ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಈ ಹಿನ್ನೆಲೆಯಲ್ಲಿ ಸೇತುವೆಯ ಮೇಲೆ ಘನ ವಾಹನ ಸಂಚಾರ ಮಾಡದಂತೆ ತಡೆಬೇಲಿ ಅಳವಡಿಸಲಾಗಿದೆ. ಇಂದು ಬೆಳಗ್ಗೆ ಶಂಭೂರು ಕಡೆಯಿಂದ ಬಂದ ಮಸಾಲೆ ಪೌಡರ್ ಸಾಗಾಟದ ಗೂಡ್ಸ್ ವಾಹನವನ್ನು ಚಾಲಕ ಬಲಾತ್ಕಾರವಾಗಿ ತಡೆಬೇಲಿ ಮೂಲಕ ನುಗ್ಗಿಸಿದ್ದಾನೆ. ಈ ವೇಳೆ ವಾಹನವು ಕಬ್ಬಿಣದ ತಡೆಬೇಲಿಯಲ್ಲಿ ಸಿಲುಕಿಕೊಂಡಿದೆ.

ಘಟನೆಯಿಂದ ಚಾಲಕ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಸೇತುವೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಸಿಲುಕಿಕೊಂಡಿದ್ದ ವಾಹನವನ್ನು ಹರಸಾಹಸ ತೆರವುಗೊಳಿಸಲಾಯಿತು.

Continue Reading

LATEST NEWS

ಮಂಗಳೂರು: ಬಂಧನಕ್ಕೊಳಗಾದ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಆಸ್ಪತ್ರೆಗೆ ದಾಖಲು

Published

on

ಮಂಗಳೂರು: ಎಂಸಿಸಿ ಬ್ಯಾಂಕ್‌ನಿಂದ ಸಾಲ ಪಡೆದ ಮನೋಹರ ಪಿರೇರಾ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ ಬ್ಯಾಂಕ್‌ನ ಅಧ್ಯಕ್ಷ ಅನಿಲ್ ಲೋಬೊರ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲು ನ್ಯಾಯಾಲಯ ಶಿಫಾರಸು ಮಾಡಿದೆ.

ಮನೋಹರ ಪಿರೇರಾ 10 ವರ್ಷದ ಹಿಂದೆ ಎಂಸಿಸಿ ಬ್ಯಾಂಕ್‌ನಿಂದ ಸಾಲ ಪಡೆದು ಮನೆ ಖರೀದಿಸಿ ವಾಸಿಸುತ್ತಿದ್ದರು. ಸಾಲ ಮರು ಪಾವತಿಸದ ಕಾರಣ ಎರಡು ವರ್ಷಗಳ ಹಿಂದೆ ಈ ಮನೆಯನ್ನು ಬ್ಯಾಂಕ್ ಜಪ್ತಿ ಮಾಡಿತ್ತು. ಇದರಿಂದ ಮನೋಹರ ಪಿರೇರಾ ತೀವ್ರ ಮಾನಸಿಕ ಸಮಸ್ಯೆ ಅನುಭವಿಸಿದ್ದರು. ಅಲ್ಲದೆ ಇದರಿಂದ ಮನನೊಂದು ಮನೋಹರ ಪಿರೇರ ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಮೇಲೆ ಆರೋಪ ಹೊರಿಸಿ ಆಡಿಯೋವೊಂದನ್ನು ಹರಿಯಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬುಧವಾರ ಅನಿಲ್ ಲೋಬೊರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆದರೆ ಅನಿಲ್ ಲೋಬೊರ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲು ನ್ಯಾಯಾಲಯ ನಿರ್ದೇಶನ ನೀಡಿದೆ.

Continue Reading

LATEST NEWS

Trending

Exit mobile version