ಜಗತ್ತನ್ನೇ ಕಾಡಲಿರುವ ಕೊರೊನಾ ರೂಪಾಂತರ ಸಾರ್ಸ್;ರಾಜ್ಯದೆಲ್ಲೆಡೆ ನೈಟ್ ಕರ್ಫ್ಯೂ ಜಾರಿ ಸಿಎಂ ಬಿಎಸ್ ವೈ ..!
ಬೆಂಗಳೂರು: ಕೊರೊನಾ ವೈರಸ್ ಹೊಸ ರೂಪದಲ್ಲಿ ಗೋಚರಿಸಿರುವ ಹಿನ್ನೆಲೆಯಲ್ಲಿ ಇದೀಗ ಕನಾ್ಟಕವೂ ಆತಂಕದಲ್ಲಿದೆ.

ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆ ಗರಿಷ್ಠ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಇಂದಿನಿಂದಲೇ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಆದೇಶ ಹೊರಡಿಸಿದ್ದು, ಕರ್ಫ್ಯೂ ರಾತ್ರಿ 10ರಿಂದ ಬೆಳಿಗ್ಗೆ 6 ರವರೆಗೆ ಇದ್ದು, ಜನವರಿ 2 ರವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಹೊಸ ವರ್ಷಾಚರಣೆಗೆ ಜನರು ಅಧಿಕ ಸಂಖ್ಯೆಯಲ್ಲಿ ಒಂದೆಡೆ ಪಾರ್ಟಿಗೆ ಸೇರುವುದು ಸಾಮಾನ್ಯವಾಗಿದ್ದು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹೆಚ್ಚು ಜನರು ರಾತ್ರಿ ಹೊತ್ತು ಒಂದೆಡೆ ಸೇರುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ನಿರ್ಧಾರ ಕೈಗೊಂಡಿದೆ.
ಬ್ರಿಟನ್ ದೇಶದಲ್ಲಿ ಮತ್ತೆ ಕೊರೊನಾ ವೈರಸ್ ಅಲೆ ಇದ್ದು, ಅಲ್ಲಿಂದ ಭಾರತಕ್ಕೆ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಈಗಾಗಲೇ ಸುಮಾರು ಜನರು ಬಂದಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಕಾವೇರಿ ನಿವಾಸದಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಜೊತೆ ಮಾತುಕತೆ ನಡೆಸಿ ನಂತರ ಮಾಧ್ಯಮಗಳ ಎದುರು ನೈಟ್ ಕರ್ಫ್ಯೂ ಜಾರಿ ವಿಷಯ ತಿಳಿಸಿದ್ದಾರೆ.
ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಇರಲಿದ್ದು, ಉಳಿದ ಎಲ್ಲ ಸೇವೆಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.