Connect with us

    LATEST NEWS

    WPL 2024; ಪ್ರಶಸ್ತಿ ಗೆದ್ದು ಬೀಗಿದ ಆರ್ ಸಿ ಬಿ ತಂಡ; ಪಡೆದ ಮೊತ್ತವೆಷ್ಟು ಗೊತ್ತಾ!?

    Published

    on

    ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ 2024ರ ಮಹಿಳಾ ಪ್ರೀಮಿಯರ್ ಲೀಗ್‌ನ (ಡಬ್ಲ್ಯುಪಿಎಲ್) 2ನೇ ಆವೃತ್ತಿಯ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು ಇತಿಹಾಸ ನಿರ್ಮಿಸಿತು.
    ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಉತ್ತಮ ಆರಂಭ ಮಾಡಿತಾದರೂ ಆರ್ ಸಿ ಬಿ ಮಾರಕ ದಾಳಿಗೆ 18.3 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು, ಕೇವಲ 113 ರನ್ ಗಳಿಸಲಷ್ಟೇ ಶಕ್ಯವಾಯಿತು.

    114 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡ 19.3 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 8 ವಿಕೆಟ್‌ಗಳ ಜಯ ಸಾಧಿಸಿತು.

    ಕೊಹ್ಲಿ ಸಂಭ್ರಮ :

    ಇದು ಕೇವಲ ಆರ್‌ಸಿಬಿ ಮಹಿಳಾ ತಂಡದ ಮೊದಲ ಪ್ರಶಸ್ತಿಯಲ್ಲ, ಆರ್‌ಸಿಬಿ ಫ್ರಾಂಚೈಸಿಗೆ ಇದು ಮೊದಲ ಟ್ರೋಫಿಯಾಗಿದೆ.
    ಆರ್‌ಸಿಬಿ ಮಹಿಳಾ ತಂಡ ಗೆಲ್ಲುತ್ತಿದ್ದಂತೆಯೇ ಆರ್‌ಸಿಬಿಯ ವಿರಾಟ್ ಕೊಹ್ಲಿ ಸಂಭ್ರಮಿಸಿದರು. ಈ ಸಂಭ್ರಮದ ಸಂದರ್ಭವನ್ನು ಆಚರಿಸಲು ಸ್ಮೃತಿ ಮಂಧಾನಗೆ ವಿಡಿಯೋ ಕಾಲ್ ಮಾಡಿ ಅಭಿನಂದನೆ ಸಲ್ಲಿಸಿದರು. ಆರ್‌ಸಿಬಿ ಮಹಿಳಾ ತಂಡದೊಂದಿಗೆ ವಿಡಿಯೋ ಕಾಲ್‌ನಲ್ಲೇ ಸಂಭ್ರಮಿಸಿದರು ಮತ್ತು ಆ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

    ಗಳಿಸಿದ ಮೊತ್ತವೆಷ್ಟು?

    ಆರ್‌ಸಿಬಿ ಮಹಿಳಾ ತಂಡ ಬಂಗಾರದ ಟ್ರೋಫಿ ಮತ್ತು ಜೊತೆಗೆ ಬೃಹತ್ ನಗದು ಬಹುಮಾನವನ್ನೂ ಪಡೆದರು. ಮಹಿಳಾ ಪ್ರೀಮಿಯರ್ ಲೀಗ್ ವಿಜೇತ ಆರ್‌ಸಿಬಿ ತಂಡ ಬರೋಬ್ಬರಿ 6 ಕೋಟಿ ರೂಪಾಯಿಗಳನ್ನು ಬಹುಮಾನವಾಗಿ ಪಡೆದುಕೊಂಡಿತು. ಇನ್ನು ಈ ಸಂದರ್ಭದಲ್ಲಿ ರನ್ನರ್-ಅಪ್ ತಂಡವಾದ ಮೆಗ್ ಲ್ಯಾನಿಂಗ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳೆಯರು 3 ಕೋಟಿ ರೂಪಾಯಿಗಳನ್ನು ಬಹುಮಾನವಾಗಿ ಪಡೆದುಕೊಂಡರು.

    ಫೈನಲ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಸೋಫಿ ಮೊಲಿನೆಕ್ಸ್ 4 ಓವರ್‌ಗಳಲ್ಲಿ 3 ವಿಕೆಟ್‌ಗೆ 20 ರನ್ ಗಳಿಸಿ ಪಂದ್ಯಶ್ರೇಷ್ಠ ಆಟಗಾರ್ತಿ ಪ್ರಶಸ್ತಿ ಪಡೆದರು. ಡೆಲ್ಲಿ ಕ್ಯಾಪಿಟಲ್ಸ್‌ನ ಶಫಾಲಿ ವರ್ಮಾ 3 ಸಿಕ್ಸರ್‌ಗಳೊಂದಿಗೆ ಗರಿಷ್ಠ ಸಿಕ್ಸರ್ ಪ್ರಶಸ್ತಿಯನ್ನು ಪಡೆದರು.

    ಶಫಾಲಿ ವರ್ಮಾ ಪಂದ್ಯಾವಳಿಯಲ್ಲಿ ಅತಿ ಹೆಚ್ಚು 20 ಸಿಕ್ಸರ್‌ಗಳನ್ನು ಹೊಡೆದರು ಮತ್ತು ಅದಕ್ಕಾಗಿ 5 ಲಕ್ಷ ರೂಪಾಯಿ ನಗದು ಬಹುಮಾನ ಪಡೆದರು. ಇನ್ನು ಆಡಿದ 9 ಇನ್ನಿಂಗ್ಸ್‌ನಲ್ಲಿ 347 ರನ್ ಸಿಡಿಸಿದ ಆರ್‌ಸಿಬಿಯ ಎಲ್ಲಿಸ್ ಪೆರ್ರಿ ಆರೆಂಜ್ ಕ್ಯಾಪ್ ಪಡೆದರು. 8 ಇನ್ನಿಂಗ್ಸ್‌ಗಳಲ್ಲಿ 13 ವಿಕೆಟ್ ಪಡೆದ ಆರ್‌ಸಿಬಿ ತಂಡದ ಶ್ರೇಯಾಂಕ ಪಾಟೀಲ್ ಪರ್ಪಲ್ ಕ್ಯಾಪ್ ಗೆದ್ದರು.

    ಎಲ್ಲಿಸ್ ಪೆರ್ರಿ ಮತ್ತು ಶ್ರೇಯಾಂಕ ಪಾಟೀಲ್ ಇಬ್ಬರೂ ತಮ್ಮ ಸಾಧನೆಗಳಿಗಾಗಿ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಪಡೆದರು. ಶ್ರೇಯಾಂಕ ಪಾಟೀಲ್ ಅವರು ಈ ಆವೃತ್ತಿಯ ಉದಯೋನ್ಮುಖ ಆಟಗಾರ್ತಿ ಎಂದು ಹೆಸರಿಸಲ್ಪಟ್ಟರು ಮತ್ತು ಅದಕ್ಕಾಗಿ ಹೆಚ್ಚುವರಿ 5 ಲಕ್ಷ ರೂಪಾಯಿ ಪಡೆದುಕೊಂಡಳು.
    ದೀಪ್ತಿ ಶರ್ಮಾ 295 ರನ್‌ಗಳು ಮತ್ತು 10 ವಿಕೆಟ್‌ಗಳೊಂದಿಗೆ ಋತುವಿನ ಅತ್ಯಮೂಲ್ಯ ಆಟಗಾರ್ತಿಯಾದರು ಮತ್ತು 5 ಲಕ್ಷ ರೂಪಾಯಿ ನಗದು ಬಹುಮಾನ ಪಡೆದರು. ಕ್ಯಾಚ್ ಆಫ್ ದಿ ಸೀಸನ್ ಪ್ರಶಸ್ತಿಯನ್ನು ಸಜೀವನ್ ಸಜನಾ ಪಡೆದರು ಮತ್ತು ಆರ್‌ಸಿಬಿ ತಂಡ ಫೇರ್‌ಪ್ಲೇ ಪ್ರಶಸ್ತಿಯನ್ನೂ ಗೆದ್ದುಕೊಂಡಿತು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending