Wednesday, October 5, 2022

ವಿವಸ್ತ್ರಗೊಳಿಸಿ, ಅತ್ಯಾಚಾರಗೈದು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳು ವಶಕ್ಕೆ

ಯಾದಗಿರಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಹೊಸ ತಿರುವು ಸಿಕ್ಕಿದ್ದು, ಆರೋಪಿಗಳು ಮಹಿಳೆಯನ್ನು ಕಾರ್​​ನಲ್ಲಿ ಅಪಹರಿಸಿ, ಗ್ಯಾಂಗ್ ರೇಪ್ ಮಾಡಿದ್ದಾರೆಂಬ ವಿಷಯ ತನಿಖೆ ವೇಳೆ ಹೊರಬಿದ್ದಿದೆ.

ಶಹಾಪುರ ತಾಲೂಕಿನ ನಿವಾಸಿಗಳಾದ ನಿಂಗರಾಜ, ಅಯ್ಯಪ್ಪ , ಭೀಮಾಶಂಕರ ಹಾಗೂ ಶರಣು ಎಂಬ ನಾಲ್ಕು ಜನ ಕಾಮುಕರನ್ನು ಬಂಧಿಸಿದ್ದಾರೆ.

ಶಹಾಪುರದಲ್ಲಿ ಬಸ್​ ನಿಲ್ದಾಣವೊಂದರಲ್ಲಿ ಯುವತಿ ಬಸ್​​​ಗಾಗಿ ಕಾಯುತ್ತಾ ಕುಳಿತಿದ್ದಳು.

ಈ ವೇಳೆ, ಕಾರ್​​ನಲ್ಲಿ ಆಗಮಿಸಿದ ಕಾಮುಕರು, ಬಲವಂತವಾಗಿ ಮಹಿಳೆಯನ್ನು ಕಾರ್​​ನಲ್ಲಿ ಅಪಹರಿಸಿ ಶಹಾಪುರ ಹೊರಭಾಗದ ರಸ್ತಾಪುರ ಕ್ರಾಸ್ ಸಮೀಪದ ನಿರ್ಜನ ಪ್ರದೇಶದಲ್ಲಿ ತಡರಾತ್ರಿ ಗ್ಯಾಂಗ್ ರೇಪ್ ಮಾಡಿ ನಂತರ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ನಡೆಸಿದ್ದಲ್ಲದೆ, ಸಿಗರೇಟ್​​​ನಿಂದ ಸುಟ್ಟು ಗಾಯಗೊಳಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾಳೆ.
ಮಹಿಳೆ ದೂರಿನ ಅನ್ವಯ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಯೋರ್ವ ಪಿಎಸ್ಐ ಕಾರ್ ಚಾಲಕನಾಗಿದ್ದ, ಮೊದಲು ಈತನನ್ನು ಬಂಧಿಸಿ ಈತನ ಮುಖಾಂತರ ಉಳಿದ ಆರೋಪಿಗಳನ್ನು ಬಂಧಿಸಲಾಗಿದೆ. ಮಹಿಳೆಯಿಂದ ಕಿತ್ತುಕೊಂಡಿದ್ದ ಮೊಬೈಲ್, ಕೃತ್ಯಕ್ಕೆ ಬಳಸಿದ ಕಾರು ಪೊಲೀಸರು ಜಪ್ತಿ ಪಡಿಸಿಕೊಂಡಿದ್ದಾರೆ.

ಆರೋಪಿಗಳು ತಮ್ಮ ತಪ್ಪೊಪ್ಪಿಕೊಂಡಿದ್ದು, ಸ್ಥಳ ಮಹಜರು ಕೂಡ ಮಾಡಲಾಗಿದೆ.

ಸಾಮೂಹಿಕ ಅತ್ಯಾಚಾರದ ಬಳಿಕ ಆಕೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿ ಐದು ಸಾವಿರ ರೂಪಾಯಿ ಹಾಗೂ ಮೊಬೈಲ್ ಕಸಿದುಕೊಂಡು ಪೊಲೀಸರಿಗೆ ಮಾಹಿತಿ ನೀಡದಂತೆ ಬೆದರಿಕೆ ಹಾಕಿದ್ದರಂತೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್​​ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ಖುದ್ದು ತೆರಳಿ ಸ್ಥಳ ಪರಿಶೀಲನೆ ಮಾಡಿದ್ದಾರೆ

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...