Tuesday, October 26, 2021

ಸಿಎಂ ಸ್ಥಾನಕ್ಕೆ ಯಡಿಯೂರಪ್ಪರ ರಾಜಿನಾಮೆ ಸನ್ನಿಹಿತ..! ಈ ಬಾರಿ ಆಗಸ್ಟ್ 15 ರ ದ್ವಜಾರೋಹಣಕ್ಕೆ ಹೊಸ ಸಿಎಂ..!

ಮಂಗಳೂರು: ರಾಜ್ಯ ಬಿಜೆಪಿಯಲ್ಲಿ ಹೊಸ ಶಕೆ ಆರಂಭದ ಸೂಚನೆಗಳು ಕಂಡು ಬರುತ್ತಿದ್ದು, ಸಿಎಂ ಕುರ್ಚಿಯಿಂದ ಬಿಎಸ್ ಯಡಿಯೂರಪ್ಪ ಕೆಳಗಿಳಿಯುವುದು ಬಹುತೇಕ ಖಚಿತವಾಗಿದೆ. ಜುಲೈ 26 ರ ಅಸುಪಾಸಿನಲ್ಲಿ ಮುಖ್ಯಮಂತ್ರಿಗಳು ದೆಹಲಿ ವರಿಷ್ಟರ ಸೂಚನೆಯಂತೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.


ಇನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದಂತ ಸ್ವಾಮೀಜಿಗಳು, ಮಠಾಧೀಶರ ದಂಡೇ ನೆರೆದಿತ್ತು. ಇಂತಹ ಮಠಾಧೀಶರು ಸಿಎಂ ಜೊತೆಗೆ ಚರ್ಚಿಸಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿ, ಪೂರ್ಣ ಪ್ರಮಾಣದ ಮುಖ್ಯಮಂತ್ರಿಯಾಗಿರಬೇಕು ಯಡಿಯೂರಪ್ಪ ಎಂಬುದು ನಮ್ಮ ಆಶಯವಾಗಿದೆ ಎಂಬುದಾಗಿ ಹೇಳಿದ್ದರು. ಇದೇ ಮಠಾಧೀಶರೊಂದಿಗೆ, ತಮ್ಮ ಕೈಯಲ್ಲಿ ಯಾವುದು ಇಲ್ಲ. ಬಿಜೆಪಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದೆ. ಅವರು ಹೈಕಮಾಂಡ್ ಯಾವ ಸೂಚನೆ ನೀಡುತ್ತಾರೋ ಅದರಂತೆ ತಾವು ನಡೆಯೋದಾಗಿ ಹೇಳಿದ್ದಾರೆ ಎಂದು ಮಠಾಧೀಶರೊಬ್ಬರು ಸುದ್ದಿಗಾರರಿಗೆ ಪ್ರತಿಕ್ರೀಯಿಸಿದ್ದರು.
ಆದರೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿಯಲ್ಲಿ 75 ವರ್ಷ ದಾಟಿದವರಿಗೆ ಅಧಿಕಾರ ಕೊಟ್ಟಿಲ್ಲ. ಆದ್ರೆ ನನ್ನ ಕೆಲಸವನ್ನು ಮೆಚ್ಚಿ ಅಧಿಕಾರ ಕೊಟ್ಟಿದ್ದಾರೆ. ರಾಷ್ಟ್ರೀಯ ನಾಯಕರು ಕೊಡುವ ಸೂಚನೆಯಂತೆ ನಾನು ಕೆಲಸಗಳನ್ನು ಮಾಡುತ್ತೇನೆ. ಜುಲೈ 25ರಂದು ವರಿಷ್ಠರು ಸ್ಪಷ್ಟ ಸಂದೇಶ ನೀಡುತ್ತಾರೆ. ಅವರು ನೀಡುವ ಸೂಚನೆಗೆ ನಾನು ಬದ್ಧ ಎಂದರು.
ಪಕ್ಷ ಸಂಘಟನೆ ಮಾಡಿ, ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದು ನನ್ನ ಸಂಕಲ್ಪ. ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿ ಕೆಲಸ ಮಾಡುತ್ತೇನೆ. ಮಠಾಧೀಶರು ನನಗೆ ನೀಡಿದ ಬೆಂಬಲ, ಆಶೀರ್ವಾದ ಇಡೀ ಜೀವನದಲ್ಲಿ ಯಾರಿಗೂ ಸಿಗದಷ್ಟು ಪ್ರೀತಿ, ವಿಶ್ವಾಸವಾಗಿದೆ. ಅಭಿಮಾನಿಗಳಾಗಲಿ, ಕಾರ್ಯಕರ್ತರಾಗಲಿ ಗೊಂದಲಕ್ಕೆ ಒಳಗಾಗಬಾರದು. ನನ್ನ ಪರ ಹೇಳಿಕೆಗಳನ್ನು ನೀಡುವುದು, ಪ್ರತಿಭಟನೆ ನಡೆಸುವುದು ಮಾಡಬಾರದು ಎಂದು ಹೇಳಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...