Thursday, March 23, 2023

ರಂಗಸ್ಥಳದಲ್ಲೇ ಹೃದಯಘಾತವಾಗಿ ಯಕ್ಷಗಾನ ಕಲಾವಿದ ವಿಧಿವಶ : ಕಟೀಲಿನ 4ನೇ ಮೇಳದ 58 ವರ್ಷದ ಗುರುವಪ್ಪ ಬಾಯಾರು ಇನ್ನಿಲ್ಲ,!

ಯಕ್ಷಗಾನ ಕಲಾವಿದರೊಬ್ಬರು ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾದ ಘಟನೆ ಮಂಗಳೂರಿನ ಕಟೀಲಿನಲ್ಲಿ ನಡೆದಿದೆ.

ಮಂಗಳೂರು :  ಯಕ್ಷಗಾನ ಕಲಾವಿದರೊಬ್ಬರು ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾದ ಘಟನೆ ಮಂಗಳೂರಿನ ಕಟೀಲಿನಲ್ಲಿ ನಡೆದಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಮೇಳದ ಕಲಾವಿದ 58 ವರ್ಷದ ಗುರುವಪ್ಪ ಬಾಯಾರು ಅವರು ಬಾಯಾರು ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನರಾದ ಕಲಾವಿದರಾಗಿದ್ದಾರೆ.

ಗುರುವಾರ ರಾತ್ರಿ ಕಟೀಲಿನ ಸರಸ್ವತಿ ಸದನದಲ್ಲಿ ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸರಸ್ವತೀ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ತ್ರಿಜನ್ಮ ಮೋಕ್ಷ ಪ್ರಸಂಗ ನಡೆಯುತ್ತಿತ್ತು.

ಅದರಲ್ಲಿ ಬಾಯಾರು ಅವರು ಅದರಲ್ಲಿ ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು.

ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ರಂಗಸ್ಥಳದಿಂದ ಕೆಳಗಡೆ ಬಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ನಿಧನರಾಗಿದ್ದಾರೆ ಎಂದು ತಿಳಿಸಿದರು.

ನಾನಾ ಮೇಳಗಳಲ್ಲಿ ತಿರುಗಾಟ ನಡೆಸಿದ್ದ ಗುರುವಪ್ಪ ಬಾಯಾರು ಅವರು 2013ರಲ್ಲಿ ಕಟೀಲು ಮೇಳಕ್ಕೆ ಸೇರಿದ್ದರು.

ಮಧುಕೈಟಭ, ಮುಂತಾದ ಕಿರೀಟ ವೇಷಗಳನ್ನು ಮಾಡುತ್ತಿದ್ದ ಅವರಿಗೆ ಅನೇಕ ಕಡೆ ಸಂಮಾನಗಳು ಸಂದಿವೆ.

ಇದೀಗ ಹಿರಿಯ ಯಕ್ಞಗಾನ ಕಲಾವಿದನೊಬ್ಬನ ನಿಧನಕ್ಕೆ ಯಕ್ಷಗಾನ ರಂಗ ಹಾಗು ಯಕ್ಷಭಿಮಾನಿಗಳು ಕಂಬನಿ ಮಿಡಿದ್ದಾರೆ.ಕ್ಞ

LEAVE A REPLY

Please enter your comment!
Please enter your name here

Hot Topics

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದ ಕುಮಟಾದ ಯುವತಿ ಡಿಡೀರ್ ನಾಪತ್ತೆ..! 

ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು...

‘ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ’ ಎಂದಿದ್ದ ರಾಹುಲ್ ಗಾಂಧಿಗೆ 2 ವರ್ಷ ಜೈಲು

ನವದೆಹಲಿ: ಮೋದಿ ಪದನಾಮ ಪ್ರಕರಣ ಸಂಬಂಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಗುಜರಾತ್​ನ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.ಈ ಬಗ್ಗೆ ಅಂತಿಮ ವಿಚಾರಣೆ ನಡೆಸಿ...