ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೋರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ.
ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೋರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ.
ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾರೆ.
ಇವರು ಇಂದು ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ.
ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು..
ದಂಪತಿ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.