Sunday, June 4, 2023

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.

ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು ದೇವಿಯಾಗಿ ಬಣ್ಣ ಹಚ್ಚಿದ್ದು ಇವರೇ.

38 ವರ್ಷಗಳ ಕಾಲ ಸ್ತ್ರೀ ವೇಷಧಾರಿಯಾಗಿ ಅಭಿನಯಿಸಿದ ಇವರು ಮಂದಾರ್ತಿ, ಮಾರಣಕಟ್ಟೆ, ಸೌಕೂರು, ಇಡಗುಂಜಿ ಮೇಳಗಳಲ್ಲಿ 5 ದಶಕಗಳ ಕಾಲ ಬಣ್ಣದ ಸೇವೆ ಮಾಡುತ್ತಾ ಯಕ್ಷಾಭಿಮಾನಿಗಳ ಮನಸ್ಸನ್ನು ಗೆದ್ದಿದ್ದಾರೆ.

ಅಷ್ಟೇ ಅಲ್ಲದೆ ಬಡಗುತಿಟ್ಟು ಸ್ತ್ರೀ ವೇಷಧಾರಿ ಎಂದೇ ಪ್ರಖ್ಯಾತರಾಗಿದ್ದಾರೆ.

13ನೆ ವಯಸ್ಸಿನಲ್ಲಿಯೇ ಬಡಗುತಿಟ್ಟು ಹೆಸರಾಂತ ಮೇಳಗಳಲ್ಲಿ ಒಂದಾದ ಮಂದಾರ್ತಿ ಮೇಳಕ್ಕೆ ಸೇರಿದ್ದ ಗೋವಿಂದ ಶೇರಿಗಾರ್ ವೀರಭದ್ರ ನಾಯಕ್, ಕೊಕ್ಕರ್ಣೆ ಗುಂಡುನಾಯಕ್, ನರಸಿಂಹ ಕಮ್ತಿ ಮುಂತಾದ ಅಪರಿಮಿತ ಹಿರಿಯ ಕಲಾವಿದರ ಗರಡಿಯಲ್ಲಿ ಪರಿಣತಿಯನ್ನು ಹೊಂದಿದದವರಾಗಿದ್ದಾರೆ.

ಇದೀಗ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗ ಗಾಢವಾದ ಸಂತಾಪ ವ್ಯಕ್ತಪಡಿಸಿದೆ.

LEAVE A REPLY

Please enter your comment!
Please enter your name here

Hot Topics