Connect with us

    DAKSHINA KANNADA

    ಯಕ್ಷಗಾನ ಛಂದೋ ಬ್ರಹ್ಮ ಡಾ. ಶಿಮಂತೂರು ನಾರಾಯಣ ಶೆಟ್ಟಿ ಇನ್ನಿಲ್ಲ..

    Published

    on

    ಯಕ್ಷಗಾನ ಛಂದೋ ಬ್ರಹ್ಮ ಡಾ. ಶಿಮಂತೂರು ನಾರಾಯಣ ಶೆಟ್ಟಿ ಇನ್ನಿಲ್ಲ..

    ಮಂಗಳೂರು : ಯಕ್ಷಗಾನ ಛಂದೋ ಬ್ರಹ್ಮ ಡಾ. ಶಿಮಂತೂರು ನಾರಾಯಣ ಶೆಟ್ಟಿಯವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾದರು,

    ಕಳೆದ ಒಂದು ವಾರದಿಂದ ಮಂಗಳೂರು ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,

    ಯಕ್ಷಗಾನ ಸಾಹಿತ್ಯದಲ್ಲಿ ಛಂದಸ್ಸಿನ ಬಗೆಗೆ ಅಪಾರವಾದ ಅಧ್ಯಯನ ನಡೆಸಿದ ಇವರು ಹಂಪಿಯ ಕನ್ನಡ ವಿವಿಯಿಂದ ಡಿ. ಲಿಟ್‌. ಪದವಿ ಪಡೆದ ಡಾ| ಎನ್‌. ನಾರಾಯಣ ಶೆಟ್ಟಿ

    ಅವರು ಕಾರ್ಕಳ ತಾಲೂಕು ನಂದಿಕೂರಿನಲ್ಲಿ ಎಳತ್ತೂರು ಗುತ್ತು ದಿ| ಅಚ್ಚಣ್ಣ ಶೆಟ್ಟಿ ಮತ್ತು ನಂದಿಕೂರು ಚೀಂಕ್ರಿಗುತ್ತು ದಿ| ಕಮಲಾಕ್ಷಿ ಶೆಡ್ತಿ ದಂಪತಿಯ ಪುತ್ರನಾಗಿ 1934 ಫೆ. 1ರಂದು ಜನಿಸಿದ್ದು, ಐದನೇ ತರಗತಿ ಯಲ್ಲಿ ದ್ದಾಗಲೇ ಜೈಮಿನಿ ಭಾರತವನ್ನು ಕಂಠಪಾಠ ಮಾಡಿದ್ದರು.

    ಆರನೇ ತರಗತಿಯಿಂದ ನಾಗವರ್ಮನ ಛಂದೋಂಬುಧಿ, ಕೇಶಿರಾಜನ ಶಬ್ದಮಣಿ ದರ್ಪಣ, ಹೇಮಚಂದ್ರಮ ಛಂದೋ ನು ಶಾಸನಗಳನ್ನು ಅಧ್ಯಯನ ಮಾಡಿದರು.

    ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಇವರು ದೇರಾಜೆ ಸ್ಮತಿ ಗೌರವ, ಕುಕ್ಕಿಲ ಪ್ರಶಸ್ತಿ, ಸನಾತನ ಪ್ರಶಸ್ತಿ, ಆಳ್ವಾಸ್‌ ನುಡಿಸಿರಿ ಪ್ರಶಸ್ತಿ, , ಅಗರಿ ಪ್ರಶಸ್ತಿ, ಶ್ರೇಷ್ಠ ಯಕ್ಷಗಾನ ಸಾಹಿತ್ಯ ಸಾಧನಾ ಪ್ರಶಸ್ತಿ, ಯಕ್ಷ ಧ್ರುವ ಕೊಡ ಮಾಡುವ ಪಟ್ಲ ಪ್ರಶಸ್ತಿ 2018, ವಿಂಶತಿ ತಮ ವಿದ್ವತ್‌ ಪ್ರಶಸ್ತಿ, ಸ್ಕಂದ ಪುರಸ್ಕಾರ, ತಲ್ಲೂರು ಕನಕಾ-ಅಣ್ಣಯ್ಯ ಪ್ರಶಸ್ತಿ, ಮುದ್ದಣ ಪುರಸ್ಕಾರ, ಕಲ್ಕೂರ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ, ತುಳು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಅಭಿನವ ನಾಗವರ್ಮ, ಯಕ್ಷ ಪಾಣಿನಿ, ಛಂದೋಂಬುಧಿ ಚಾರು ಚಂದ್ರ, ಛನªಶ್ಚತುರಾನನ, ಯಕ್ಷ ಛಂಧೋ ಭಾರ್ಗವ, ಛಂದೋ ವಾರಿಧಿ ಚಂದ್ರ ಬಿರುದುಗಳನ್ನು ಪಡೆದಿದ್ದರು,

    ನೇರ ನಡೆ ನುಡಿಯ ನಿಷ್ಟುರವಾದಿ ನಾರಾಯಣ ಮಾಸ್ಟ್ರು:

    ನೇರಾ ನಡೆನುಡಿಯ ನಿಷ್ಟುರವಾದಿಯಾಗಿದ್ದು ನಾರಾಯಣ ಮಾಸ್ಟ್ರು ಎಂದೇ ಖ್ಯಾತ ರಾಗಿದ್ದರು ಡಾ. ಶಿಮಂತೂರು ನಾರಾಯಣ ಶೆಟ್ಟಿ. ಮಾಸ್ಟ್ರ ಛಂದಸ್ವತೀ ಪ್ರಸಂಗ ಸಂಪುಟದಲ್ಲಿ 5 ಪ್ರಸಂಗಗಳನ್ನಷ್ಟೇ ಸಂಪಾದಿಸಿ ಪ್ರಕಟಿಸಲಾಯಿತು ಎನ್ನುವುದು ಬೇಸರದ ಸಂಗತಿಯಾಗಿದೆ. .ಪಟ್ಲ ಪ್ರಕಾಶನ ಅವರ ಎಲ್ಲಾ ಪ್ರಸಂಗಳ ಪ್ರಕಟಣೆಗೆ ಸಿದ್ದವಾಗಿತ್ತು‌‌.

    ಆದರೇ ಅದಾಗಲೇ  ಅವರು ಇಹ ಲೋಕ ತ್ಯಜಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಅವರಿಗೆ ಎಂದೋ ಸಲ್ಲ ಬೇಕಿತ್ತು ಆದರೆ ಅದು ಸಿಕ್ಲಕಿಲ್ಲ ಎಂದು ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ.ಅವರ ಸಾಹಿತ್ಯ ಕಬ್ಬಿಣದ ಕಡಲೆಯಾಗಿತ್ತು. ವಿದ್ವಾಂಸರಿಗಿಂತಲೂ ಸಾಮಾನ್ಯರನ್ನು ಹಚ್ಚಿ ಮೆಚ್ಚಿ ಕೊಳ್ಳುತ್ತಿದ್ದವರು.ಗೋವಾ ದುರಂತ,ಕೃಷಿ ವಿಜಯ,ಪಂಜುರ್ಲಿ ಸಂಧಾನ,ಕಂಡದ ಪುಣಿತ ಕಾಳಗ…ಇವು ಶಿಮಂತೂರು ಬರೆದ ಪ್ರಸಂಗಗಳು ಆದರೆ ಬಹು ಜನರಿಗೆ ತಿಳಿದಿರಕ್ಕಿಲ್ಲ. ಕೊಲೆಕ್ಕಾಡಿ,ಪಟ್ಲ,ಪಚ್ಚನಾಡಿ ಹೀಗೆ ಹಲವು ಶಿಷ್ಯರಿಗೆ ಗುರುಗಲಾಗಿದ್ದರು ನಾರಾಯಣ ಮಾಸ್ಟ್ರು ..!

    ಕನ್ನಡದ ಅನಘ ಛಂದೋ ರತ್ನಗಳು, ಯಕ್ಷಗಾನ ಛಂದೋಂಬುಧಿ , ವಿಚಿತ್ರಾ ತ್ರಿಪದಿ, ಮುಂತಾದ ಅಮೂಲ್ಯ ಕೃತಿಗಳನ್ನೂ, ಕಟೀಲು ಕ್ಷೇತ್ರ ಮಹಾತ್ಮೆ, ದೀಕ್ಷಾ ಕಂಕಣ, ರಾಜಮುದ್ರಿಕಾ, ಸೊರ್ಕುದ ಸಿರಿಗಿಂಡಿ ಮುಂತಾದ ಯಕ್ಷಗಾನ ಪ್ರಸಂಗಗಳನ್ನೂ ರಚಿಸಿದ್ದಾರೆ.

    ಇವರ ಕೃತಿಗಳು ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ವಾರ್ಷಿಕೋತ್ಸವದಲ್ಲಿ ಕೃತಿ ರೂಪ ದಲ್ಲಿ ಹೊರ ಬರಲಿದೆ.

    ಸಂಸದ ನಳಿನ್ ಸಂತಾಪ:ಯಕ್ಷಗಾನ ಛಂದೋಬ್ರಹ್ಮ’, ‘ಅಭಿನವ ನಾಗವರ್ಮ’ ಬಿರುದಾಂಕಿತ ಹಿರಿಯ ವಿದ್ವಾಂಸ ಡಾ. ಎನ್. ನಾರಾಯಣ ಶೆಟ್ಟಿ ಶಿಮಂತೂರು ಅವರ ನಿಧನ ಯಕ್ಷಗಾನ ಛಂದಸ್ಸು ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಶಿಮಂತೂರು ನಾರಾಯಣ ಶೆಟ್ಟಿ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬಿಕರಿಗೆ, ಶಿಷ್ಯರಿಗೆ ಭಗವಂತ ಕರುಣಿಸಲಿ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸಂತಾಪ ವ್ಯಕ್ತಪಡಿಸಿದ್ದಾರೆ.
    ಶಿಕ್ಷಕರಾಗಿ, ಯಕ್ಷಗಾನ ಛಂದಸ್ಸು ಕ್ಷೇತ್ರದ ಸಾಧಕನಾಗಿ, ಕವಿ, ವಿಮರ್ಶಕ, ಪ್ರಸಂಗಕರ್ತರಾಗಿ ಸಾಹಿತ್ಯ, ಯಕ್ಷಗಾನ ಕ್ಷೇತ್ರಕ್ಕೆ ನಾರಾಯಣ ಶೆಟ್ಟಿ ಅವರು ಅಪಾರ ಕೊಡುಗೆ ನೀಡಿದ್ದಾರೆ. ಯಕ್ಷಗಾನ ಛಂದೋಂಬುಧಿ ಎನ್ನುವ ತನ್ನ ಗ್ರಂಥದ ಮೂಲಕ ಶಿಮಂತೂರು ಅವರು ಅಜರಾಮರರಾಗಲಿದ್ದಾರೆ. ‘ಕಟೀಲು ಕ್ಷೇತ್ರ ಮಹಾತ್ಮೆ’ ಯಕ್ಷಗಾನ ಪ್ರಸಂಗವನ್ನು ಎಳವೆಯಲ್ಲಿಯೇ ರಚಿಸುವ ಮೂಲಕ ಶಿಮಂತೂರು ಅವರು ಪ್ರಖ್ಯಾತಿ ಪಡೆದವರು. ಅವರ ಅಗಲಿಕೆ ದುಖಃ ಉಂಟು ಮಾಡಿದೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.

     

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಶ್ವೇತಾ ಜ್ಯುವೆಲರ್ಸ್‌ನ ಮಾಲಿಕ ಅಶೋಕ್ ಶೇಟ್‌ ನಿ*ಧನ

    Published

    on

    ಮಂಗಳೂರು : ಶ್ವೇತಾ ಜ್ಯುವೆಲರ್ಸ್‌ನ ಮಾಲಿಕರಾಗಿರುವ ಎಂ. ಅಶೋಕ್ ಶೇಟ್ ಇಂದು ಬೆಳಿಗ್ಗೆ (ಜ,22) ಸುಮಾರು 10 ಗಂಟೆಗೆ ಸ್ವ ಗೃಹದಲ್ಲಿ ನಿ*ಧನರಾಗಿದ್ದಾರೆ.

    ಪಡೀಲ್ ಕಂಕನಾಡಿ ಲಯನ್ಸ್ ಕ್ಲಬ್‌ನ ಕ್ರಿಯಾಶೀಲ ವ್ಯಕ್ತಿ, ಸದಾ ಮುಖದಲ್ಲಿ ಮುಗುಳ್ನಗು ಹೊಂದಿದ್ದ ಮಂಗಳೂರಿನ ವಿ.ಟಿ. ರೋಡ್ ನಿವಾಸಿ 64 ವರ್ಷದ ಅಶೋಕ್ ಶೇಟ್ ಹೃ*ದಯಾಘಾತದಿಂದ ಮೃತಪಟ್ಟಿದ್ದಾರೆ.

     

    ಇದನ್ನೂ ಓದಿ : ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಬಿಗ್ ಬಾಸ್ ಸ್ಪರ್ಧಿ ಕೀರ್ತಿ ಮತ್ತು ಜೈತ್ರಾ ಕುಂದಾಪುರ: ಆಶೀಶ್‌ ಮೈಕಾಲ

     

    ಪ್ರಸ್ತುತ ಮಂಗಳೂರು ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹಾಲಿ ಅಧ್ಯಕ್ಷರಾಗಿದ್ದ ಅಶೋಕ್ ಶೇಟ್ ಈ ಹಿಂದೆ ಅನೇಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಮಂಗಳೂರು ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಯ ಮುಖ್ಯ ಪ್ರವರ್ತಕರಾಗಿದ್ದ ಅವರು ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿ ಸಮಾಜಕ್ಕಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ.

    ಮೃ*ತರು ಪತ್ನಿ ಸಂಧ್ಯಾ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ

    Continue Reading

    DAKSHINA KANNADA

    ತಪ್ಪಿಸಿಕೊಳ್ಳಲು ಯತ್ನಿಸಿದ ಬ್ಯಾಂಕ್ ದರೋಡೆ ಆರೋಪಿ ಕಾಲಿಗೆ ಗುಂಡು..!

    Published

    on

    ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಓರ್ವನಿಗೆ ಪೊಲೀಸರು ಹಾರಿಸಿದ ಗುಂಡು ಕಾಲಿಗೆ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜ.17ರಂದು ನಡೆದ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

         ಆರೋಪಿ ರಾಜೇಂದ್ರನ್

    ತಮಿಳುನಾಡು ಸಮೀಪದ ಪದ್ಮನೇರಿ ಗ್ರಾಮದಲ್ಲಿ ಬಂಧಿಸಿ ಕರೆತರಲಾಗಿದ್ದು ಇಂದು ಸ್ಥಳ ಮಹಜರು ನಡೆಸಲಾಗಿದೆ. ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಣಿವಣ್ಣನ್‌ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸಿಸಿಬಿ ಇನ್‌ಸ್ಪೆಕ್ಟರ್‌ ರಫೀಕ್‌ ಅವರು ಆತನ ಕಾಲಿಗೆ ಗುಂಡು ಹಾರಿಸಿ ಮತ್ತೆ ವಶಕ್ಕೆ ಪಡೆದುಕೊಂಡರು ಎಂದು ತಿಳಿದು ಬಂದಿದೆ.

    ಪ್ರಮುಖ ಆರೋಪಿ ಮುರಗಂಡಿ ತೇವರ್

    ಗುಂಡೇಟಿನಿಂದ ಗಾಯಗೊಂಡಿದ್ದ ಆರೋಪಿಯನ್ನು ಪೊಲೀಸರು ನಗರದ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    Continue Reading

    DAKSHINA KANNADA

    ಗೋವುಗಳ ಮೇಲಿನ ಪೈಶಾಚಿಕ ಕೃ*ತ್ಯ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

    Published

    on

    ಮಂಗಳೂರು : ಬೆಂಗಳೂರಿನ ಚಾಮರಾಜನಗರದಲ್ಲಿ ಹಿಂದುಗಳು ಆರಾಧಿಸುವ ಗೋಮಾತೆಯ ಕೆಚ್ಚಲನ್ನು ಕತ್ತರಿಸಿ ವಿ*ಕೃತಿ ಮೆರೆದಿರುವುದು ಹಾಗೂ ನಂಜನಗೂಡಿನಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ದಾನವಾಗಿ ನೀಡಿದ್ದ ಹಸುವಿನ ಮೇಲೆ ದುಷ್ಟರು ಮಾ*ರಕಾಸ್ತ್ರದಿಂದ ದಾ*ಳಿ ಮಾಡಿ ಹಸುವಿನ ಬಾಲವನ್ನು ಕತ್ತರಿಸಿ ಪೈಶಾಚಿಕ ಕೃ*ತ್ಯ ನಡೆಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿಯಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

    ಪ್ರತಿಭಟನೆಗೆ ವಿಶ್ವ ಹಿಂದು ಪರಿಷತ್‌ ಸೇರಿದಂತೆ ಹಲವು ಹಿಂದು ಪರ ಸಂಘಟನೆಗಳು ಸಾಥ್‌ ನೀಡಿದ್ದವು. ಮೊದಲಿಗೆ ಗೋವಿಗೆ ವಿಶೇಷ ಪೂಜೆ ಮಾಡುವ ಮೂಲಕ ಗೋವನ್ನು ಪೂಜಿಸಲಾಯಿತು.

    ಬಳಿಕ ನಡೆದ ಸಭೆಯಲ್ಲಿ ಸಂಸದ ಬ್ರಿಜೇಶ್ ಚೌಟ  ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದುಗಳು ಪವಿತ್ರ ಎಂದು ಪೂಜಿಸುವ ಗೋವಿನ ಮೇಲೆ ನಿರಂತರವಾಗಿ ದೌರ್ಜ*ನ್ಯ ದಬ್ಬಾಳಿಕೆ ನಡೆಯುತ್ತಿದೆ. ಯಾವುದೇ ಜನಪ್ರತಿನಿಧಿಗಳು ಕೂಡ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಇಲ್ಲಿ ದೇವಸ್ಥಾನಕ್ಕೆ ಹೋಗಿ ಗಂಧಪ್ರಸಾದ ಸ್ವೀಕರಿಸುತ್ತಾರೆ. ಆದರೆ ಗೋವಿನ ಮೇಲೆ ದೌರ್ಜ*ನ್ಯ ನಡೆದಾಗ ತಮ್ಮ ಬಾಯಿ ಬಿಚ್ಚುತ್ತಿಲ್ಲ ಎಂದು ಟೀಕಿಸಿದರು.

    ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಶರಣ್ ಪಂಪ್‌ವೆಲ್, ಶಿವಾನಂದ ಮೆಂಡನ್‌, ಗೋಪಾಲ್ ಕುತ್ತಾರ್ ಮೊದಲಾದವರು ಭಾಗಿಯಾಗಿದ್ದರು.

    Continue Reading

    LATEST NEWS

    Trending