ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾಟಿಪಳ್ಳ ಕೃಷ್ಣಾಪುರ ಇದರ ವತಿಯಿಂದ ಭಾನುವಾರ ಯುವಕ ಮಂಡಲ ಕೃಷ್ಣಾಪುರ ಕೇಂದ್ರ ಮೈದಾನದಲ್ಲಿ ನಡೆದ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಯಕ್ಷಗಾನ ಸ್ಪರ್ಧೆಯ ಸಮಾಪನ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಮಂಗಳೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾಟಿಪಳ್ಳ ಕೃಷ್ಣಾಪುರ ಇದರ ವತಿಯಿಂದ ಭಾನುವಾರ ಯುವಕ ಮಂಡಲ ಕೃಷ್ಣಾಪುರ ಕೇಂದ್ರ ಮೈದಾನದಲ್ಲಿ ನಡೆದ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಯಕ್ಷಗಾನ ಸ್ಪರ್ಧೆಯ ಸಮಾಪನ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಮಾಜಿ ಮಂತ್ರಿ ಪ್ರಮೋದ್ ಮಧ್ವರಾಜ್ ಮಾತನಾಡಿ, ಯಕ್ಷಗಾನದಷ್ಟು ಸಮೃದ್ಧವಾದ ಕಲೆ ಇನ್ನೊಂದಿಲ್ಲ. ಯಕ್ಷಗಾನದಲ್ಲಿ ಇರುವಷ್ಟು ಸಮೃದ್ಧವಾದ ವಿಚಾರ ಇನ್ಯಾವುದರಲ್ಲೂ ಇಲ್ಲ ಎಂದರು.
ಶಾಸಕ ಭರತ್ ಶೆಟ್ಟಿ ಮಾತನಾಡಿ, ಯಕ್ಷಗಾನವನ್ನು ನೋಡಿಕೊಂಡೇ ನಾವು ಪುರಾಣದ ವಿಚಾರಗಳನ್ನು ಅರಿತುಕೊಂಡಿದ್ದೇವೆ. ಈ ಕಲೆ, ಸಾಹಿತ್ಯ ಎಲ್ಲವೂ ನಮ್ಮ ಜೀವನದ ಒಂದು ಅಂಶವಾಗಿದೆ ಎಂದರು.
ಶಾಸಕ ಯಶ್ಪಾಲ್ ಸುವರ್ಣ ಮತ್ತು ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಮಾತನಾಡಿದರು.
ಯುವಕ ಮಂಡಲದ ಮಾಜಿ ಅಧ್ಯಕ್ಷ ವೆಂಕಟರಮಣ ಐತಾಳ ಮತ್ತು ಮಾಧವ ಬಂಗೇರ ಕೊಳತ್ತಮಜಲ್ ಇವರಿಗೆ ಸನ್ಮಾನ ನೆರವೇರಿಸಲಾಯಿತು.
ಯಕ್ಷಗಾನ ಸ್ಪರ್ಧೆಯಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜು ಪ್ರಥಮ ಬಹುಮಾನ, ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಬಹುಮಾನ, ಮಧ್ವ ವಾದಿರಾಜ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಂಟಕಲ್ ಮೂರನೇ ಬಹುಮಾನ ಪಡೆದುಕೊಂಡಿದೆ.
ಮಂಗಳೂರಿನ ಎಸ್ ಎಲ್ ಶೇಟ್ ಡೈಮಂಡ್ ಹೌಸ್‌ನ ಮುಖ್ಯಸ್ಥ ಎಂ ರವೀಂದ್ರ ಶೇಟ್ ಅಧ್ಯಕ್ಷತೆಯಲ್ಲಿ ಅತಿಥಿಗಳು ಬಹುಮಾನ ವಿತರಿಸಿದರು.
ಕಟೀಲ್ ದೇವಿಪ್ರಸಾದ್ ಆಸ್ರಣ್ಣ, ಉಡುಪಿ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕೊರಗಜ್ಜ ಕ್ಷೇತ್ರ ರಾಜೀವ ನಗರದ ಅಧ್ಯಕ್ಷ ಡಾ ವಾಮನ ಸಾಲ್ಯಾನ್, ವಿಶ್ವೇಶ್ವರ ಬದವಿದೆ, ಮಹಾನಗರ ಪಾಲಿಕೆ ಸದಸ್ಯ ಲಕ್ಷ್ಮೀ ಶೇಖರ್, ದಾನಿಗಳಾದ ಸುಶೀಲ ಕೆ. ಶೆಟ್ಟಿ, ಬಂದರ್ ಪೋರ್ಟ್ ಟ್ರಸ್ಟ್ ನಿವೃತ್ತ ಟ್ರಸ್ಟಿ ಸುಧಾಕರ ಕಾಮತ್, ಪ್ರಶಾಂತ್ ಮೂಡಯಿಕೋಡಿ, ಕುಲಶೇಖರ ವೀರನಾರಾಯಣ ದೇವಸ್ಥಾನದ ಅಧ್ಯಕ್ಷ ಪುರುಷೋತ್ತಮ ಕುಲಾಲ್ ಕಲ್ಬಾವಿ, ಉದ್ಯಮಿ ಗಿರೀಶ್ ಎಂ. ಶೆಟ್ಟಿ, ಕಾಟಿಪಳ್ಳ ವಿಶ್ವಕರ್ಮ ಸಮಿತಿ ಅಧ್ಯಕ್ಷ ವಿವೇಕ ಆಚಾರ್ ಮುಖ್ಯ ಅತಿಥಿಗಳಾಗಿದ್ದರು.
ವಕೀಲ ಸದಾಶಿವ ಐತಾಳ್ ಸ್ವಾಗತಿಸಿದರು.
ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ದುರ್ಗಾಪ್ರಸಾದ್ ಹೊಳ್ಳ, ಪ್ರಧಾನ ಕಾರ್ಯದರ್ಶಿ ಉಪೇಂದ್ರ ಆಚಾರ್ಯ ಹೀಗೆ ವಿವಿಧ ಇಲಾಖಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.
ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಮಂಗಳೂರು/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಅಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?
ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ. ಸೆ ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ. ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ. ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.