Sunday, May 22, 2022

ತೆಂಕುತಿಟ್ಟಿನ ಹಿರಿಯ ಕಲಾವಿದ ಮುಳಿಯಾಲ ಭೀಮ ಭಟ್ ವಿಧಿವಶ

ಉಡುಪಿ: ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಸಿದ್ಧ, ಹಿರಿಯ ಕಲಾವಿದ ಮುಳಿಯಾಲ ಭೀಮ ಭಟ್ ಅವರು ಇಂದು ಮುಂಜಾನೆ ಕಾಂತಾವರದಲ್ಲಿ ನಿಧನ ಹೊಂದಿದ್ದಾರೆ.

85 ವರ್ಷ ಪ್ರಾಯದವರಾಗಿದ್ದ ಅವರು ವಯೋಸಜಹ ಆರೋಗ್ಯ ಸಮಸ್ಯೆಯಿಂದ ಕಳೆದ ಕೆಲ ದಿನಗಳಿಂದ ಬಳಲುತ್ತಿದ್ದರು. ಕಳೆದ ಇಪ್ಪತ್ತು ವರ್ಷಗಳಿಂದ ಕಾಂತಾವರ ದೇವಸ್ಥಾನದಲ್ಲಿ ಸೇವೆ ಮಾಡಿದ ಭೀಮ ಭಟ್ಟರ ಆರೋಗ್ಯ ಕಳೆದ ನಾಲ್ಕು ತಿಂಗಳಿಂದ ಹದಗೆಟ್ಟಿತ್ತು.

1951ರಲ್ಲಿ ಕುರಿಯ ಶಾಸ್ತ್ರಿಗಳ ಸಂಚಾಲಕತ್ವದ ಶ್ರಿ ಧರ್ಮಸ್ಥಳ ಮೇಳದಿಂದ ಕಲಾ ಜೇವನ ಆರಂಭಿಸಿದ್ದು, ಕೋಡಂಗಿ, ಬಾಲಗೋಪಾಲ, ಮುಖ್ಯಸ್ತ್ರೀವೇಷ, ಪೀಠಿಕೆ ವೇಷ. ಹೀಗೆ ಹಂತಹಂತವಾಗಿ ಮೇಲೇರಿದ ಅವರು ಪ್ರಸಿದ್ಧ ಕಲಾವಿದರಾಗಿದ್ದರು.

ಭೀಮ ಭಟ್ಟರ ತಂದೆ ಕೇಚಣ್ಣ (ಕೇಶವ) ಭಟ್ಟರೂ ಯಕ್ಷಗಾನ ವೇಷಧಾರಿಯಾಗಿದ್ದರು. ಕುರಿಯ ಶಾಸ್ತ್ರಿಗಳ ನೆಚ್ಚಿನ ಶಿಷ್ಯರಲ್ಲೊಬ್ಬರಾದ ಇವರು ಏಳು ವರುಷ ಧರ್ಮಸ್ಥಳ ಮೇಳದ ತಿರುಗಾಟ ಮಾಡಿ 1958ರಿಂದ ಕಟೀಲು ಮೇಳಕ್ಕೆ ಸೇರಿದರು.

ದೇವಿ ಮಹಾತ್ಮೆ ಪ್ರಸಂಗದ ದೇವಿಯ ಪಾತ್ರವನ್ನು ಒಲಿಸಿಕೊಂಡ ಮುಳಿಯಾಲದವರು ಕಲಾಭಿಮಾನಿಗಳಿಗೆ ದೇವಿ ಭಟ್ರು ಎಂದೇ ಪರಿಚಿತರಾಗಿದ್ದರು.

ದೇವಿ ಮಹಾತ್ಮೆ ಪ್ರಸಂಗದ ಶ್ರೀದೇವಿಯ ಪಾತ್ರವನ್ನು ಒಲಿಸಿಕೊಂಡ ಮುಳಿಯಾಲದವರು ಕಲಾಭಿಮಾನಿಗಳಿಗೆ ದೇವಿ ಭಟ್ರು ಎಂದೇ ಪರಿಚಿತರಾಗಿದ್ದರು.

ಪ್ರಮೀಳೆ, ಶಶಿಪ್ರಭೆ, ಮೀನಾಕ್ಷಿಯಂತಹ ಗಂಡುಗತ್ತಿನ ಪಾತ್ರಗಳ ಮೂಲಕ ಜನರ ಮೆಚ್ಚುಗೆಗೆ ಭಾಜನರಾಗಿದ್ದರು.

ಸ್ತ್ರೀ ಪಾತ್ರವಲ್ಲದೆ ಪುರುಷ ಪಾತ್ರಗಳಾದ ಅತಿಕಾಯ, ತಾಮ್ರಧ್ವಜ, ಕರ್ಣ, ದ್ರುಪದ, ಕೃಷ್ಣ, ಹನುಮಂತ ಹೀಗೆ ರಂಗದ ಬಹುತೇಕ ಪಾತ್ರಗಳಿಗೆ ಸೈ ಎನಿಸಿಕೊಂಡಿದ್ದರು.

ಸೀತೆ, ದಮಯಂತಿ, ಚಂದ್ರಮತಿ, ದ್ರೌಪದಿ..ಯಂತಹ ಗರತಿ ಪಾತ್ರಗಳಲ್ಲಿಯೂ ಜೀವ ತುಂಬಿ ಪ್ರಾವೀಣ್ಯತೆ ಮೆರೆದಿದ್ದರು.

ಇದೀಗ ಕಾಂತಾವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿರುವ ಹಿನ್ನಲೆಯಲ್ಲಿ ಅವರ ಅಂತ್ಯಕ್ರಿಯೆ ಕ್ಷೇತ್ರದ ಧರ್ಮದರ್ಶಿ ಡಾ. ಜೀವಂಧರ ಬಲ್ಳಾಳರ ಉಪಸ್ಥಿತಿಯಲ್ಲಿ ಬೆಳುವಾಯಿಯ ಸ್ಮಶಾನದಲ್ಲಿ ನಡೆಸಲಾಗುತ್ತಿದೆ.

ಭಟ್ ಅವರ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಶ್ವದ 11 ರಾಷ್ಟ್ರಗಳಿಗೆ ಹರಡಿದ ‘ಮಂಕಿಪಾಕ್ಸ್‌’: ಭಾರತದಲ್ಲಿ ಹೈ ಅಲರ್ಟ್‌

ನವದೆಹಲಿ: ಮಂಕಿ ಪಾಕ್ಸ್ ಕಾಯಿಲೆ ಹಲವು ದೇಶಗಳಲ್ಲಿ ತನ್ನ ಪಾದ ಚಾಚುತ್ತಿದೆ. ಭಾರತದಲ್ಲಿ ಇದುವರೆಗೆ ಈ ಕಾಯಿಲೆಯ ಯಾವುದೇ ಪ್ರಕರಣ ಕಂಡುಬಂದಿಲ್ಲವಾದರೂ ಕೇಂದ್ರ ಸರ್ಕಾರ ಸಂಪೂರ್ಣ ಕಟ್ಟೆಚ್ಚರ ವಹಿಸಿದೆ.ವಿಶ್ವದ ಸುಮಾರು 11 ದೇಶಗಳಲ್ಲಿ...

‘ಶಿವಲಿಂಗ’ ಪತ್ತೆ ಕುರಿತಂತೆ ಆಕ್ಷೇಪಾರ್ಹ ಪೋಸ್ಟ್: ದೆಹಲಿ ವಿವಿ ಪ್ರಾಧ್ಯಾಪಕನ ಬಂಧನ

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ 'ಶಿವಲಿಂಗ' ಪತ್ತೆ ಕುರಿತಂತೆ ಹೇಳಿಕೆಗಳನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ನಿನ್ನೆ ರಾತ್ರಿ ದೆಹಲಿಯ ಉತ್ತರ...

ವಿಟ್ಲ: ಮನೆಯ ಹೆಂಚು ತೆಗೆದು ಒಳನುಗ್ಗಿ ಲಕ್ಷಾಂತರ ಸೊತ್ತು ಕಳವು

ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೆಂಚು ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕಟ್ಟೆ ಮನೆಯ...