Sunday, November 27, 2022

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ ಪೌರಾಣಿಕ ಜ್ಞಾನ ನೀಡುವುದಿಲ್ಲ ಎಂದು ಅಭಿಪ್ರಾಯಪಟ್ಟರು.

100 ವರ್ಷಗಳ ಕಾಲ ಈ ಸಂಘ ಕಲಾ ಸೇವೆಯನ್ನು ನೀಡುತ್ತಾ ಬಂದಿರುವುದು ಬಹಳ ಆಶ್ಚರ್ಯ. ಶತಮಾನೋತ್ಸವದ ಸಂಧರ್ಭ ಕಲಾವಿದರ ಸಂಮಾನ, ಹಿರಿಯರ ಸಂಸ್ಮರಣೆ ಅರ್ಥಪೂರ್ಣ ಎಂದರು.


ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ ನಡೆಯುತ್ತಿರುವ ಶತಮಾನೋತ್ಸವ ಸರಣಿ ಕಾರ್ಯಕ್ರಮದಲ್ಲಿ ವೇಷಧಾರಿ, ಹಿಮ್ಮೇಳ ವಾದಕ ನಾಗೇಶ ಕುಲಶೇಖರ ಇವರನ್ನು ಸಂಮಾನಿಸಲಾಯಿತು.

ತಲಕಳ, ಬಪ್ಪನಾಡು, ಪ್ರಸಕ್ತ ಹಲವು ವರ್ಷಗಳಿಂದ ಸಸಿಹಿತ್ಲು ಮೇಳದಲ್ಲಿ ಕಲಾ ಸೇವೆಯನ್ನು ಮಾಡುತ್ತಿರುವ ನಾಗೇಶ ಕುಲಶೇಖರ ಇವರ ಅಭಿನಂದನೆಯನ್ನು ಸಂಘದ ಪ್ರಧಾನ ಕಾರ್ಯದರ್ಶಿ ಸಂಜಯ ಕುಮಾರ್ ರಾವ್ ಗೈದರು.

ಸಂಘವನ್ನು ಪ್ರಾರಂಭದ ದಿನಗಳಲ್ಲಿ ಮುನ್ನಡೆಸಿದ ಕೀರ್ತಿಶೇಷ ದೇವಪ್ಪರನ್ನು ಸಂಸ್ಮರಿಸಲಾಯಿತು.
ಸಂಮಾನ ಪತ್ರವನ್ನು ಬಿ. ಟಿ. ಕುಲಾಲ್ ಪ್ರಸ್ತುತ ಪಡಿಸಿದರು.

ಅತಿಥಿಯಾಗಿ ಆಗಮಿಸಿದ್ದ ರಮೇಶ್ ಕುಲಶೇಖರ ಹಿಂದಿನ ಹಿರಿಯರು ಕಲೆಯ ದೀಪವನ್ನು ಇಲ್ಲಿ ಹಚ್ಚಿದ್ದಾರೆ.ಆ ದೀಪ ಆರದಂತೆ ಕಾಪಾಡುವ ಕೆಲಸವನ್ನು ನಾವು ಮಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು ಎಂದರು.

ಕೋಶಾಧಿಕಾರಿ ಶಿವಪ್ರಸಾದ್ ಪ್ರಭು, ಉಪಾಧ್ಯಕ್ಷೆ ಶೋಭಾ ಐತಾಳ್, ನಾಗೇಶರ ಧರ್ಮಪತ್ನಿ ಸುಮಿತ್ರಾ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಕುಂಭಕರ್ಣ ಕಾಳಗ ತಾಳಮದ್ದಳೆ ಸಂಘದ ಕಲಾವಿದರು ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ಜರಗಿತು.

 

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...