Thursday, October 29, 2020

ಮದ್ದಲೆಯ ಮಾಂತ್ರಿಕ ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ ಇನ್ನಿಲ್ಲ..!

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..!

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..! ಬಂಟ್ವಾಳ :ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ ಮುಂದುವೆರೆದಿದೆ. ಫೋಟೋ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು ಫೋಟೊ ಗ್ರಾಫರ್ ಮೇಲೆ ತಲವಾರು...

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..!

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..! ಮೈಸೂರು: ಕೊಲೆ ಪ್ರಕರಣದ ಆರೋಪದಲ್ಲಿ ಸೋಜಿಗದ ಸೋಜಿಮಲ್ಲಿಗೆ ಖ್ಯಾತಿಯ ಗಾಯಕಿ ಅನನ್ಯ ಭಟ್ ತಂದೆ ವಿಶ್ವನಾಥ್ ಭಟ್ ನನ್ನು...

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..!

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..! ಸ್ಪೇನ್ :   ಭಾರತದ ಹಲವೆಡೆ ಕೋವಿಡ್ 19 ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಆದರೆ ಯುರೋಪ್‌ ನ ಅನೇಕ...

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..!

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..! ಉಡುಪಿ :  ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಪುವಿನ ಅಮೃತೇಶ್ ಮಗಳಾದ ತೃಷಾ ಅವರನ್ನು ನಿನ್ನೆ ಕಾಪು ವೃತ್ತ ಕಛೇರಿಯಲ್ಲಿ ಸನ್ಮಾನಿಸಲಾಗಿದೆ. ತೃಷಾ ಉಡುಪಿಯ...

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ.. ಮಂಗಳೂರು : ಸರಣಿ ಅಪಘಾತ ಮತ್ತು ಜೀವಹಾನಿಗೆ ಕುಖ್ಯಾತಿ ಪಡೆದ ಮಂಗಳೂರು ಹೊರವಲಯದ...

ಮದ್ದಲೆಯ ಮಾಂತ್ರಿಕ ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ ಇನ್ನಿಲ್ಲ..!

ಉಡುಪಿ : ಯಕ್ಷಗಾನ ಕ್ಷೇತ್ರದ ಅನರ್ಘ್ಯ ರತ್ನಗಳಲ್ಲಿ ಒಬ್ಬರಾಗಿದ್ದ ‘ಮದ್ದಲೆ ಮಾಂತ್ರಿಕ’ ಖ್ಯಾತಿಯ ಶತಾಯುಷಿ ಹಿರಿಯಡ್ಕ ಗೋಪಾಲರಾಯರು ನಿನ್ನೆ ರಾತ್ರಿ ಉಡುಪಿ ಹಿರಿಯಡ್ಕದ ಸ್ವ ಗೃಹದಲ್ಲಿ ನಿಧನರಾಗಿದ್ದಾರೆ.

ಅವರಿಗೆ 101 ವರ್ಷ ವಯಸ್ಸಾಗಿತ್ತು. ಅವರು ಪುತ್ರ, ಅಪಾರ ಬಂಧುಮಿತ್ರರು ಹಾಗೂ ಅಭಿಮಾನಿ ವೃಂದವನ್ನು ಅಗಲಿದ್ದಾರೆ.

ಕರಾವಳಿಯ ಮೂರು ಜಿಲ್ಲೆಗಳ ಯಕ್ಷಗಾನ ಲೋಕದಲ್ಲಿ ‘ಮದ್ದಲೆ ಮಾಂತ್ರಿಕ’ ರೆಂದೇ ಹೆಸರಾದ ಹಿರಿಯಡ್ಕ ಗೋಪಾಲರಾಯರು ಕಳೆದ ವರ್ಷ ತಮ್ಮ ನೂರು ವರ್ಷ ಪ್ರಾಯದಲ್ಲೂ ನವತಾರುಣ್ಯದ ಎಲ್ಲಾ ಛಾಪನ್ನು ತೋರಿಸಿ ತಮ್ಮ ಕೈಬೆರಳುಗಳಲ್ಲಿದ್ದ ಮದ್ದಲೆಯ ಮಾಂತ್ರಿಕತೆಯನ್ನು ತೋರಿಸಿ ಕಲಾಪ್ರೇಮಿಗಳು ಮತ್ತು ತನ್ನ ಅಭಿಮಾನಿಗಳನ್ನು ಮಂತ್ರಮುಗ್ಧಗೊಳಿಸಿದ್ದರು.

1919ರ ಡಿ.15ರಂದು ಹಿರಿಯಡ್ಕದಲ್ಲಿ ಜನಿಸಿದ ಗೋಪಾಲರಾಯರು ಕಲಿತಿದ್ದು 6ನೇ ತರಗತಿಯವರೆಗೆ ಮಾತ್ರ. ಆದರೆ ಯಕ್ಷಗಾನ ಚೌಕಿ ಹಾಗೂ ರಂಗಸ್ಥಳದಲ್ಲಿ ಅವರು ಕಲಿತಿದ್ದು ಬದುಕಿನ ಕಲೆಯನ್ನು ಮಾತ್ರ.

16ನೇ ವಯಸ್ಸಿನಲ್ಲಿ ತಂದೆ ಶೇಷಗಿರಿ ರಾವ್ ರಿಂದ ಮದ್ದಲೆಯನ್ನು ಅಭ್ಯಾಸ ಮಾಡಿದ ಗೋಪಾಲರಾಯರು ಬಳಿಕ ನೃತ್ಯವನ್ನು ಗುರು ನಾಗಪ್ಪ ಕಾಮತರಿಂದ ಕಲಿತರು.

1934ರಲ್ಲಿ ಹಿರಿಯಡ್ಕ ಮೇಳದಲ್ಲಿ ಪಾತ್ರಧಾರಿಯಾಗಿ ಪ್ರವೇಶ ಪಡೆದ ಅವರು 1936ರಲ್ಲಿ ಸಹ ಮದ್ದಲೆ ಕಲಾವಿದರಾದರು.

ಮುಂದಿನ ವರ್ಷವೇ ಪೆರ್ಡೂರು ಮೇಳದಲ್ಲಿ ಪ್ರಧಾನ ಮದ್ದಲೆಕಾರರಾಗಿ ಸೇರಿದ ಗೋಪಾಲರಾಯರು ನಂತರ ಹಿಂದಿರುಗಿ ತಿರುಗಿ ನೋಡದೆ ಯಶಸ್ಸಿನ ಮೆಟ್ಟಲುಗಳನ್ನು ಏರುತ್ತಲೇ ಹೋದರು.

1939ರಿಂದ 67ರವರೆಗೆ ಅವರು ಅಂದು ಬಡಗುತಿಟ್ಟಿನ ಪ್ರಧಾನ ಮೇಳ ವಾದ ಮಂದಾರ್ತಿ ಮೇಳದ ಪ್ರಧಾನ ಮದ್ದಲೆಕಾರರಾಗಿ ದುಡಿದರು.

ಈ ನಡುವೆ 1961ರಲ್ಲಿ ಕೋಟ ಶಿವರಾಮ ಕಾರಂತರ ಸಂಪರ್ಕಕ್ಕೆ ಬಂದ ಗೋಪಾಲ ರಾಯರು, ಅವರ ಯಕ್ಷಗಾನ ನೃತ್ಯಗಳಿಗೆ ಹಾಗೂ ಯಕ್ಷಗಾನ ಗೋಷ್ಠಿಗಳಲ್ಲಿ ಮದ್ದಲೆಕಾರರಾಗಿ ಕಾರ್ಯನಿರ್ವಹಿಸಿದರು.

ಕಾರಂತರ ಒಡನಾಟ ಸಿಕ್ಕ ಬಳಿಕ ಗೋಪಾಲರಾಯರ ಯಕ್ಷಗಾನ ಬದುಕಿಗೆ ಹೊಸ ದಾರಿ ದೊರೆತಂತಾಯಿತು. ಮುಂದೆ 1968ರಲ್ಲಿ ಕಾರಂತರು ಬ್ರಹ್ಮಾವರದಲ್ಲಿ ಪ್ರಾರಂಭಿಸಿದ ಯಕ್ಷಗಾನ ಕೇಂದ್ರಕ್ಕೆ ಅಧ್ಯಾಪಕರಾಗಿ ಸೇರಿದರು.

ಮರುವರ್ಷ ಪೀಟರ್ ಕ್ಲಾಸ್‌ರ ಜೊತೆ ಕ್ಯಾಲಿಫೋರ್ನಿಯ ವಿವಿಯಲ್ಲಿ ಕೆಲಸ ಮಾಡಿದರು. 1970ರಲ್ಲಿ ಕಾರಂತರ ಸಲಹೆಯಂತೆ ಉಡುಪಿಗೆ ಮರಳಿದ ಗೋಪಾಲರಾಯರು, ಇಲ್ಲಿ ಯಕ್ಷಗಾನದಲ್ಲಿ ಡಾಕ್ಟರೇಟ್ ಮಾಡಲು ಬಂದ ಮಾರ್ತಾ ಆಸ್ಟನ್‌ಗೆ ಯಕ್ಷಗಾನ ನೃತ್ಯ ಕಲಿಸಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದರು. ಯಕ್ಷಗಾನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ ಪ್ರಥಮ ವಿದೇಶಿ ಮಹಿಳೆ ಮಾರ್ತಾ ಆಸ್ಟಿನ್  ಆಗಿದ್ದಾರೆ.

ಹಲವು ಬಾರಿ ಯಕ್ಷಗಾನ ತಂಡಗಳೊಂದಿಗೆ ವಿದೇಶಿಗಳಿಗೆ ಪ್ರಯಾಣ ಬೆಳೆಸಿದ  ಗೋಪಾಲರಾಯರಿಗೆ 1972ರಲ್ಲಿ ರಾಜ್ಯ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 1997ರಲ್ಲಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, 1998ರಲ್ಲಿ ಜಾನಪದಶ್ರೀ ಪ್ರಶಸ್ತಿ, 2012ರಲ್ಲಿ ಜಾನಪದ ಸಿರಿ ಪ್ರಶಸ್ತಿಗಳನ್ನು ಪಡೆದಿದ್ದರು. 2018ರಲ್ಲಿ ಅವರಿಗೆ ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಸ್ವತಹ ಸಚಿವೆ ಜಯಮಾಲ ಅವರೇ ಹಿರಿಯಡ್ಕದ ಅವರಿಗೆ ಮನೆಗೆ ಬಂದು ಪ್ರಶಸ್ತಿ ಪ್ರದಾನ ಮಾಡಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.