Connect with us

    bangalore

    ರಾಕಿಂಗ್ ಸ್ಟಾರ್ ಯಶ್ ಮಗನ ಗ್ರ್ಯಾಂಡ್ ಬರ್ತ್‌ಡೇ ಪಾರ್ಟಿ

    Published

    on

    ಬೆಂಗಳೂರು : ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ, ಪ್ಯಾನ್‌ ಇಂಡಿಯಾ ಮಟ್ಟದಲ್ಲೂ ಗುರುತಿಸಕೊಂಡ ನಟ ಯಶ್‌ ಮಗ ಯಥರ್ವ್‌ 4ನೇ ವರ್ಷದ ಬರ್ತ್‌ಡೇಯನ್ನು ಅದ್ದೂರಿಯಾಗಿಯೇ ಆಚರಿಸಿದ್ದಾರೆ . ಪುತ್ರಿ ಐರಾ ಮತ್ತು ಯಥರ್ವ್ ಹುಟ್ಟುಹಬ್ಬವನ್ನು ಪ್ರತಿ ವರ್ಷವೂ ಗ್ರ್ಯಾಂಡ್‌ ಸೆಲೆಬ್ರೇಟ್ ಮಾಡುತ್ತಾರೆ. ಎಂದಿನಂತೆ ಈ ವರ್ಷವೂ ಕೂಡ ಯಶ್ ಪುತ್ರನ ಬರ್ತ್‌ಡೇ ಅದ್ದೂರಿಯಾಗಿ ನಡೆದಿದೆ. ಮಗನ ಬರ್ತ್‌ಡೇಯಂದು ಮಕ್ಕಳ ಜೊತೆ ಯಶ್, ರಾಧಿಕಾ ಕೂಡ ಮಸ್ತ್ ಆಗಿ ಡ್ಯಾನ್ಸ್ ಸ್ಟೇಪ್ಸ್ ಹಾಕಿದ್ದಾರೆ.


    ಖಾಸಗಿ ಹೋಟೆಲ್‌ವೊಂದರಲ್ಲಿ ಅದ್ದೂರಿ ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ. ಬಾಲ ಹನುಮಾನ್ ಥೀಮ್‌ನಲ್ಲಿ ಸೆಲೆಬ್ರೇಶನ್ ನಡೆದಿದೆ. ಈ ಕಲರ್‌ಫುಲ್ ಸಮಾರಂಭದಲ್ಲಿ ಕುಟುಂಬಸ್ಥರು, ಆಪ್ತರಷ್ಟೇ ಭಾಗಿಯಾಗಿದ್ದರು.ಇನ್ನೂ ‘ಯಶ್ 19’ ಚಿತ್ರದ ಬಗ್ಗೆ ಇದುವರೆಗೂ ಯಾವುದೇ ಅಪ್‌ಡೇಟ್ ಸಿಕ್ಕಿಲ್ಲ. ಒಂದೂವರೆ ವರ್ಷ ಕಳೆದರೂ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಆದರೆ ಅದರ ತಯಾರಿಯಲ್ಲಿ ರಾಕಿ ಭಾಯ್ ಬ್ಯುಸಿಯಾಗಿದ್ದಾರೆ.ಖಾಸಗಿ ಹೋಟೆಲ್‌ವೊಂದರಲ್ಲಿ ಅದ್ದೂರಿ ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ. ಬಾಲ ಹನುಮಾನ್ ಥೀಮ್‌ನಲ್ಲಿ ಸೆಲೆಬ್ರೇಶನ್ ನಡೆದಿದೆ. ಈ ಕಲರ್‌ಫುಲ್ ಸಮಾರಂಭದಲ್ಲಿ ಕುಟುಂಬಸ್ಥರು, ಆಪ್ತರಷ್ಟೇ ಭಾಗಿಯಾಗಿದ್ದರು.

    bangalore

    ವರದಕ್ಷಿಣೆ ಕಿರುಕುಳ; ನೇ*ಣಿಗೆ ಶರಣಾದ ಟೆಕ್ಕಿ

    Published

    on

    ಮಂಗಳೂರು/ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ (22) ಜೀವಾಂತ್ಯಗೊಳಿಸಿದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

    ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಇದನ್ನೂ ಓದಿ : ಸೀಲ್ಡ್​ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
    ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    bangalore

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Published

    on

    ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್‌ಧಾಮ್‌ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್‌ಧಾಮ್‌ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
    ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

    ಚಾರ್‌ಧಾಮ್ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್‌ಲೋಡ್ ಮಾಡುವುದು.
    • 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್ ಮಾಡಬೇಕು.
    • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

    ಕಾಶಿ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
    • 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

     

    ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ

    Continue Reading

    bangalore

    ಗೋಬಿ ಮಂಚೂರಿ ಆಯ್ತು..! ಈಗ ಚಿಕನ್‌ ಕಬಾಬ್‌, ಫಿಶ್‌ ಫುಡ್‌ ಮೇಲೆ ಕಣ್ಣು…!

    Published

    on

    ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.


    ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.

    ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.

    Continue Reading

    LATEST NEWS

    Trending