ನ್ಯಾಷನಲ್ ಸ್ಟಾರ್ ಯಶ್‌ಗೆ ಇಂದು (ಜ.8) 39ನೇ ವರ್ಷದ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಪತ್ನಿ ರಾಧಿಕಾ ಹಾಗೂ ಆಪ್ತರೊಂದಿಗೆ ಗೋವಾದಲ್ಲಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ.
ಗೋವಾದಲ್ಲಿ ಮಧ್ಯರಾತ್ರಿ ಯಶ್ ಕೇಕ್ ಕತ್ತರಿಸಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಪತ್ನಿ ರಾಧಿಕಾ ಮತ್ತು ಮಕ್ಕಳೊಂದಿಗೆ ಬರ್ತ್‌ಡೇ ಆಚರಿಸಿ ಯಶ್ ಖುಷಿಪಟ್ಟಿದ್ದಾರೆ. ನಟನ ಆಪ್ತ ಪಾನಿ ಪುರಿ ಕಿಟ್ಟಿ, KVN ಸಂಸ್ಥೆಯ ರೂವಾರಿ ವೆಂಕಟ್ ಸೇರಿದಂತೆ ಅನೇಕರು ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಶುಭಕೋರಿದ್ದಾರೆ.
ಈ ಮೊದಲೇ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ. ಅಭಿಮಾನಿಗಳಿಗೆ ನೀವು ಇರುವ ಕಡೆಯಿಂದಲೇ ಹಾರೈಸಿ ಎಂದು ನಟ ತಿಳಿಸಿದ್ದರು. ಆದರೆ ಇದೀಗ ‘ಟಾಕ್ಸಿಕ್’ ಲುಕ್‌ನಿಂದ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಫ್ಯಾನ್ಸ್ ನಿರೀಕ್ಷೆಗೆ ಅವರು ನಿರಾಸೆ ಮಾಡಿಲ್ಲ. ರಾಕಿ ಭಾಯ್ ಬರ್ತ್‌ಡೇ ಪ್ರಯುಕ್ತ 59 ಸೆಕೆಂಡ್ ಗ್ಲಿಂಪ್ಸ್ ರಿವೀಲ್ ಆಗಿದ್ದು, ಡ್ರಗ್ಸ್ ಮಾಫಿಯಾ ಕುರಿತ ಚಿತ್ರವಾಗಿದೆ. ರಿಲೀಸ್ ಆದ ಗ್ಲಿಂಪ್ಸ್‌ನಲ್ಲಿ ಕಲರ್‌ಫುಲ್ ಸೆಟ್‌ನಲ್ಲಿ ನಟನ ಸ್ಟೈಲೀಶ್ ವಾಕ್, ಹಾಟ್ ಮ್ಯಾನರಿಸಮ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಮಂಗಳೂರು/ಮುಂಬೈ : ಇತ್ತೀಚೆಗೆ ಬಾಲಿವುಡ್ ನಟ ಶಾರುಖ್ ಖಾನ್, ಪತ್ನಿ ಗೌರಿ ಖಾನ್ ಮತ್ತು ಮಗ ಆರ್ಯನ್ ಖಾನ್ ಫೋಟೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಅದರಲ್ಲಿ ಜ. 1ರಂದು ಹೊಸ ವರ್ಷಕ್ಕೆ ಶಾರುಖ್, ಪತ್ನಿ ಗೌರಿ ಖಾನ್, ಮಗ ಆರ್ಯನ್ ಖಾನ್ ಇಸ್ಲಾಂನ ಪವಿತ್ರ ಧಾರ್ಮಿಕ ಸ್ಥಳ ಮೆಕ್ಕಾಗೆ ತೆರಳಿದ್ದಾರೆ. ಗೌರಿ ಅವರು ಇಸ್ಲಾಂಗೆ ಮತಾಂತರ ಆಗಿದ್ದಾರೆ ಎನ್ನುವಂತೆ ಫೋಟೋ ವೈರಲ್ ಆಗಿತ್ತು.
ಆದರೆ ಬಳಿಕ ಇದು ಫೇಕ್ ಎಂದು ತಿಳಿದು ಬಂದಿದೆ. ಈ ಫೋಟೋವನ್ನು ಡೀಪ್ ಫೇಕ್ ಬಳಸಿ ಎಡಿಟ್ ಮಾಡಲಾಗಿದೆ.
“ಡೀಪ್ ಫೇಕ್” ಜಾಲಕ್ಕೆ ಖ್ಯಾತ ಸಿನಿ ತಾರೆಯರೆ ಸಿಲುಕುತ್ತಿದ್ದಾರೆ. ರಶ್ಮಿಕಾ ಮಂದಣ್ಣ, ಕಾಜಾಲ್, ಕತ್ರಿನಾ ಕೈಫ್, ಆಲಿಯಾ ಭಟ್ ಈಗಾಗಲೇ ಇದರ ಜಾಲಕ್ಕೆ ಸಿಲುಕಿಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೇಂದ್ರ ಸರ್ಕಾರ ಡೀಪ್ ಫೇಕ್ ಗಳನ್ನು ಸೃಷ್ಟಿಸಿ ವೈರಲ್ ಮಾಡಿದರೆ 1 ಲಕ್ಷ ರೂ. ದಂಡ ಮತ್ತು 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.
ಒಟ್ಟಾರೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲವೂ ವೈರಲ್ ಆಗುತ್ತವೆ. ರಾತ್ರಿ ಕಳೆದು ಬೆಳಕಾಗುವಷ್ಟರಲ್ಲಿ ಒಬ್ಬರ ಜೀವನವನ್ನೇ ಅಳಿಸುವಂತ ಶಕ್ತಿ ಈ ಇಂಟರ್ ನೆಟ್ ಗಿದೆ.
ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆಯೇ ಚರ್ಚೆಗಳು ನಡೆಯುತ್ತಿವೆ. ಹಾಗಾದರೆ, ಏಕಾಏಕಿ ಸುದೀಪ್ ಮಗಳ ಮೇಲೆ ನೆಟ್ಟಿಗರು ಕೋಪಗೊಂಡಿದ್ದು ಏಕೆ? ಅವರು ಮಾಡಿದ ತಪ್ಪೇನು? ಆ ಎಲ್ಲಾ ಪ್ರಶ್ನೆಗಳಿಗೆ ಈ ಸ್ಟೋರಿಯಲ್ಲಿ ಉತ್ತರ ಸಿಗಲಿದೆ. ಸುದೀಪ್ ಅವರು ಈ ವಿಚಾರವಾಗಿ ಏನಾದರೂ ಸ್ಪಷ್ಟನೆ ನೀಡುತ್ತಾರಾ ಎನ್ನುವ ಕುತೂಹಲವೂ ಇದೆ.
ಘಟನೆ ಏನು?
ಇತ್ತೀಚೆಗೆ ಜೀ ಕನ್ನಡದ ‘ಸರಿಗಮಪ’ ವೇದಿಕೆ ಮೇಲೆ ಕಿಚ್ಚ ಸುದೀಪ್, ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಆಗಮಿಸಿದ್ದರು. ಈ ವೇಳೆ ಸಾನ್ವಿ ಅವರು ತಂದೆಗಾಗಿ, ‘ಜಸ್ಟ್ ಮಾತ್ ಮಾತಲ್ಲಿ..’ ಹಾಡನ್ನು ಸುಮಧುರವಾಗಿ ಹಾಡಿದರು. ಈ ಹಾಡಿನ ಬಳಿಕ ಅವರು ಸಂಪೂರ್ಣವಾಗಿ ಮಾತನಾಡಿದ್ದು ಇಂಗ್ಲಿಷ್ನಲ್ಲಿ. ‘ಪ್ರತಿವರ್ಷ’ ಎಂಬ ಶಬ್ದ ಬಿಟ್ಟು ಅವರು ಮತ್ತೆಲ್ಲಿಯೂ ಕನ್ನಡ ಶಬ್ದ ಮಾತನಾಡಿಲ್ಲ. ಇದು ಟ್ರೋಲ್ಗೆ ಕಾರಣವಾದ ವಿಚಾರ.
ಸುದೀಪ್ ಕನ್ನಡ ಪ್ರೀತಿ
ಕಿಚ್ಚ ಸುದೀಪ್ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಬಿಗ್ ಬಾಸ್ನಲ್ಲಿ ಕನ್ನಡಕ್ಕೆ ಗೌರವ ನೀಡದ ಸಂದರ್ಭದಲ್ಲಿ ಅವರು ಇದನ್ನು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ. ಸ್ಪರ್ಧಿಗಳು ಇಂಗ್ಲಿಷ್ ಮಾತನಾಡಿದಾಗ ಅದನ್ನು ಪ್ರಶ್ನೆ ಮಾಡಬೇಕು ಮತ್ತು ಕನ್ನಡ ಬಳಕೆ ಹೆಚ್ಚುವಂತೆ ಆಗಬೇಕು ಎಂದು ಸುದೀಪ್ ಅವರು ಬಿಗ್ ಬಾಸ್ ಆಯೋಜಕರ ಬಳಿ ಒತ್ತಾಯಿಸಿದ್ದರು ಎನ್ನಲಾಗಿದೆ. ಪರಭಾಷಾ ಸಂದರ್ಶನಗಳಲ್ಲಿ ಯಾರಾದರೂ ‘ಕನ್ನಡ್’ ಎಂದರೆ ‘ಅದು ಕನ್ನಡ್ ಅಲ್ಲ ಕನ್ನಡ’ ಎಂದು ತಿದ್ದುವ ಕೆಲಸ ಮಾಡಿದ್ದಾರೆ. ಆದರೆ, ಕನ್ನಡ ರಿಯಾಲಿಟಿ ಶೋನಲ್ಲಿ ಮಗಳಿಗೇಕೆ ಅವರು ಕನ್ನಡ ಮಾತನಾಡುವಂತೆ ಒತ್ತಾಯಿಸಿಲ್ಲ ಎಂದು ಅನೇಕರು ಪ್ರಶ್ನೆ ಮಾಡುತ್ತಾ ಇದ್ದಾರೆ.
ಸಮರ್ಥನೆ
ಇನ್ನೂ ಕೆಲವು ಸಾನ್ವಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಸುದೀಪ್ ಮಗಳು ಸಾನ್ವಿ ಇಂಗ್ಲಿಷ್ನಲ್ಲೇ ಮಾತನಾಡಿರಬಹುದು, ಆದರೆ, ಅವರು ಹಾಡಿದ್ದು ಕನ್ನಡದ ಹಾಡನ್ನೇ. ಈ ಕಾರಣಕ್ಕೆ ಸಂತೋಷ ವ್ಯಕ್ತಪಡಿಸಬೇಕು ಎಂದು ಕೆಲವರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಜೋರಾಗಿದೆ.
ನ್ಯಾಷನಲ್ ಸ್ಟಾರ್ ಯಶ್ ಅವರು ಇದೇ ಜ.8ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ. ಈ ದಿನ ‘ಟಾಕ್ಸಿಕ್’ ಚಿತ್ರದ ಬಗ್ಗೆ ಏನಾದರೂ ಅಪ್‌ಡೇಟ್ ಸಿಗಬಹುದು ಎಂದು ನಿರೀಕ್ಷಿಸಿದವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸದ್ಯ ಚಿತ್ರತಂಡದ ಕಡೆಯಿಂದ ಬಿಗ್ ನ್ಯೂಸ್‌ವೊಂದು ಸಿಕ್ಕಿದೆ. ಸಿನಿಮಾ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಯಶ್ ಬರ್ತ್‌ಡೇಯಂದು (ಜ.8) ಬೆಳಗ್ಗೆ 10:25ಕ್ಕೆ ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ (Toxic) ಬಗ್ಗೆ ಅಪ್‌ಡೇಟ್ ಸಿಗಲಿದೆ ಎಂದು ಕೆವಿಎನ್ ನಿರ್ಮಾಣ ಸಂಸ್ಥೆ ತಿಳಿಸಿದೆ. ಯಶ್ ಕೂಡ ಇದೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸದ್ಯ ರಿಲೀಸ್ ಆಗಿರೋ ಪೋಸ್ಟರ್‌ನಲ್ಲಿ ಯಶ್ ಅವರು ಹಳೆಯ ಕಾಲದ ಕಾರಿನ ಮೇಲೆ ನಿಂತಿದ್ದಾರೆ. ಅವರ ಬಾಯಲ್ಲಿ ಸಿಗರೇಟ್ ಇದೆ. ತಲೆಗೆ ಹ್ಯಾಟ್ ಧರಿಸಿದ್ದಾರೆ. ಇದು ಅವರ ಗೆಟಪ್ ಎಂದು ಹೇಳಲಾಗುತ್ತಿದೆ. ಈ ಮೊದಲು ಟೈಟಲ್ ಟೀಸರ್ ಅನೌನ್ಸ್ ಮಾಡುವಾಗಲೂ ಯಶ್ ಅವರು ತಲೆಗೆ ಹ್ಯಾಟ್ ಧರಿಸಿಯೇ ಕಾಣಿಸಿಕೊಂಡಿದ್ದರು. ಇದೇ ಲುಕ್ ಸಿನಿಮಾದಲ್ಲೂ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಫ್ಯಾನ್ಸ್ ಜ.8ರಂದು ಯಶ್ ಲುಕ್ ನೋಡಲು ಕಾಯುತ್ತಿದ್ದಾರೆ.
ಇನ್ನೂ ಜ.8ರಂದು ಬೆಂಗಳೂರಿನಲ್ಲಿ ಇರುವುದಿಲ್ಲ ಬರ್ತ್‌ಡೇ ಆಚರಣೆ ಮಾಡಲ್ಲ ಎಂದು ಫ್ಯಾನ್ಸ್ ಯಶ್ ಈಗಾಗಲೇ ಮಾಹಿತಿ ನೀಡಿದ್ದಾರೆ. ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ, ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ. ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ ಎಂದು ಯಶ್ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು.
ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು (ಜ.8) ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಪ್ಲೆಕ್ಸ್, ಬ್ಯಾನರ್‌ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ, ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ ಎಂದಿದ್ದಾರೆ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ. ನಿಮ್ಮ ಪ್ರೀತಿಯ ಯಶ್ ಎಂದು ಬರೆದಿದ್ದರು.