ಬೆಂಗಳೂರು: ಚಂದನವನದಲ್ಲಿ ಫೇವರೆಟ್ ಕಪಲ್ ಯಾರು ಅಂತ ಕೇಳಿದ್ರೆ.. ಎಲ್ಲರ ಗಮನ ರಾಧಿಕಾ-ಯಶ್ ಕಡೆ ಹೋಗುತ್ತೆ. ಹೌದು.. ಯಶ್-ರಾಧಿಕಾ ಇಂಡಸ್ಟ್ರಿಯ ಫೇವರೆಟ್ ಕಪಲ್. ರಾಧಿಕಾ ಮತ್ತು ಯಶ್ ಇಬ್ಬರೂ ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದವರು. 2004ರಲ್ಲಿ ಬಂದ ನಂದಗೋಕುಲ ಎಂಬ ಸೀರಿಯಲ್ ನಲ್ಲಿ ಇಬ್ಬರೂ ಜೊತೆಗೆ ಬಣ್ಣ ಹಚ್ಚಿದ್ದರು. ಅಂದಿನಿಂದ ಇಬ್ಬರೂ ಸ್ನೇಹಿತರಾಗಿದ್ದು ಕ್ರಮೇಣ ಈ ಸ್ನೇಹ ಪ್ರೀತಿಗೆ ತಿರುಗಿದೆ. ಐದು ವರ್ಷಗಳ ಕಾಲ ಡೇಟಿಂಗ್‌ನಲ್ಲಿದ್ದ ಜೋಡಿ, 2016ರಲ್ಲಿ ಮದುವೆ ಮಾಡಿಕೊಂಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಕನ್ನಡ ಚಿತ್ರರಂಗದ ಕ್ಯೂಟ್ ಕಪಲ್. ಒಬ್ಬರಿಗೊಬ್ಬರು ನೆರಳಾಗಿ- ಹೆಗಲಾಗಿ.. ಗಂಡ-ಹೆಂಡತಿ ಅಂದರೆ ಹೀಗಿರಬೇಕು ಎಂಬಂತೆ ಬದುಕುತ್ತಿದ್ದಾರೆ ಈ ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ. ಇತ್ತೀಚೆಗೆ (ಮಾ.7) ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೀಗ ರಾಧಿಕಾ ಪಂಡಿತ್ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಡಲ ತೀರದಲ್ಲಿ ಕುಟುಂಬ, ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಬರ್ಡೆ ಗರ್ಲ್ ಸ್ಯಾಂಡಲ್‌ವುಡ್ ಸಿಂಡ್ರೆಲ್ಲಾ ರಾಧಿಕಾ ಗೋಲ್ಡನ್ ಗೌನ್‌ನಲ್ಲಿ ಮಿಂಚಿದ್ರು. ಪತಿ ಯಶ್ ಜೊತೆಗೂಡಿ ಸಾಂಗ್‌ಗೆ ಹೆಜ್ಜೆ ಹಾಕಿದ್ದು, ಯಶ್ ಜೊತೆ ಸೆಲೆಬ್ರೇಷನ್ ಮೂಡ್‌ನಲ್ಲಿದ್ದ ವೀಡಿಯೋವೊಂದನ್ನ ರಾಧಿಕಾ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ಜೊತೆ “ನನ್ನ ಜೀವನದಲ್ಲಿ ಇಂತಹ ವ್ಯಕ್ತಿಗಳನ್ನು ಪಡೆದಿರುವುದು ನನಗೆ ಆಶೀರ್ವಾದ” ಎಂದು ಬರೆದಿದ್ದಾರೆ.
ಮಂಗಳೂರು/ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು(ಜ.10) ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಜಾಮೀನು ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊ*ಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಪವಿತ್ರಾ ಗೌಡ, ಇತರೆ ಆರೋಪಿಗಳು ತಮ್ಮ ತಮ್ಮ ವಕೀಲರೊಡನೆ ಕೋರ್ಟ್‌ಗೆ ಹಾಜರಾಗಿದ್ದರು. ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದಿದ್ದು, ಅವರೊಂದಿಗೆ ವಕೀಲರು ಸಹ ಆಗಮಿಸಿದ್ದರು.
ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ಅವರು ಚೊಚ್ಚಲ ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮಗುವಿನೊಂದಿಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಹರ್ಷಿಕಾ ಮತ್ತು ಭುವನ್ ಜೋಡಿ ಭೇಟಿ ನೀಡಿದ್ದಾರೆ.
ಮಗು ಜನಿಸಿದ ಬಳಿಕ ಕೊಲ್ಲೂರಿಗೆ ಭೇಟಿ ನೀಡುತ್ತೇನೆ ಎಂದು ಹರ್ಷಿಕಾ ದಂಪತಿ ಹರಿಸಿಕೊಂಡಿದ್ದರು. ಅದರಂತೆ ಮಗಳ ಜೊತೆ ಮೊದಲ ಬಾರಿಗೆ ಕೊಲ್ಲೂರು ದೇಗುಲಕ್ಕೆ ಭೇಟಿ ಮೂಕಾಂಬಿಕೆ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇನ್ನೂ 2023ರ ಆಗಸ್ಟ್ 24ರಂದು ಕೊಡಗಿನಲ್ಲಿ ಹರ್ಷಿಕಾ ಮತ್ತು ಭುವನ್ ಹೊಸ ಬಾಳಿಗೆ ಕಾಲಿಟ್ಟರು. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದರು. ಈ ಮದುವೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಪೂಜಾ ಗಾಂಧಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಕಳೆದ ವರ್ಷ ಅಕ್ಟೋಬರ್ 3ರಂದು ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದರು. ಮಗಳ ಪಾಲನೆಯಲ್ಲಿ ಬ್ಯುಸಿಯಿರುವ ಹರ್ಷಿಕಾ ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.
ಮಂಗಳೂರು/ಮುಂಬೈ : ಇತ್ತೀಚೆಗೆ ಬಾಲಿವುಡ್ ನಟ ಶಾರುಖ್ ಖಾನ್, ಪತ್ನಿ ಗೌರಿ ಖಾನ್ ಮತ್ತು ಮಗ ಆರ್ಯನ್ ಖಾನ್ ಫೋಟೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಅದರಲ್ಲಿ ಜ. 1ರಂದು ಹೊಸ ವರ್ಷಕ್ಕೆ ಶಾರುಖ್, ಪತ್ನಿ ಗೌರಿ ಖಾನ್, ಮಗ ಆರ್ಯನ್ ಖಾನ್ ಇಸ್ಲಾಂನ ಪವಿತ್ರ ಧಾರ್ಮಿಕ ಸ್ಥಳ ಮೆಕ್ಕಾಗೆ ತೆರಳಿದ್ದಾರೆ. ಗೌರಿ ಅವರು ಇಸ್ಲಾಂಗೆ ಮತಾಂತರ ಆಗಿದ್ದಾರೆ ಎನ್ನುವಂತೆ ಫೋಟೋ ವೈರಲ್ ಆಗಿತ್ತು.
ಆದರೆ ಬಳಿಕ ಇದು ಫೇಕ್ ಎಂದು ತಿಳಿದು ಬಂದಿದೆ. ಈ ಫೋಟೋವನ್ನು ಡೀಪ್ ಫೇಕ್ ಬಳಸಿ ಎಡಿಟ್ ಮಾಡಲಾಗಿದೆ.
“ಡೀಪ್ ಫೇಕ್” ಜಾಲಕ್ಕೆ ಖ್ಯಾತ ಸಿನಿ ತಾರೆಯರೆ ಸಿಲುಕುತ್ತಿದ್ದಾರೆ. ರಶ್ಮಿಕಾ ಮಂದಣ್ಣ, ಕಾಜಾಲ್, ಕತ್ರಿನಾ ಕೈಫ್, ಆಲಿಯಾ ಭಟ್ ಈಗಾಗಲೇ ಇದರ ಜಾಲಕ್ಕೆ ಸಿಲುಕಿಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೇಂದ್ರ ಸರ್ಕಾರ ಡೀಪ್ ಫೇಕ್ ಗಳನ್ನು ಸೃಷ್ಟಿಸಿ ವೈರಲ್ ಮಾಡಿದರೆ 1 ಲಕ್ಷ ರೂ. ದಂಡ ಮತ್ತು 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.
ಒಟ್ಟಾರೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲವೂ ವೈರಲ್ ಆಗುತ್ತವೆ. ರಾತ್ರಿ ಕಳೆದು ಬೆಳಕಾಗುವಷ್ಟರಲ್ಲಿ ಒಬ್ಬರ ಜೀವನವನ್ನೇ ಅಳಿಸುವಂತ ಶಕ್ತಿ ಈ ಇಂಟರ್ ನೆಟ್ ಗಿದೆ.