Connect with us

    LATEST NEWS

    ಯಶ್‍ಪಾಲ್ ಸುವರ್ಣ ಹೊಸ ಬಾಂಬ್ “ವೀಡಿಯೋ ಹಲವು ಬಾರಿ ಫಾರ್ವರ್ಡ್ ಆಗಿದೆ”..!

    Published

    on

    ನಗರದ ಖಾಸಗಿ ಕಾಲೇಜಿನ ಟಾಯ್ಲೆಟ್‍ನಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್‍ಪಾಲ್ ಸುವರ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

    ಉಡುಪಿ: ನಗರದ ಖಾಸಗಿ ಕಾಲೇಜಿನ ಟಾಯ್ಲೆಟ್‍ನಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್‍ಪಾಲ್ ಸುವರ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

    ಉಡುಪಿಯ ಬಿಜೆಪಿ ಕಚೇರಿಯಿಂದ ಎಸ್‍ಪಿ ಕಚೇರಿವರೆಗೂ ಬಿಜೆಪಿಯ ಶಾಸಕರು ಹಾಗೂ ಜಿಲ್ಲಾ ನಾಯಕರು ಮತ್ತು ಕಾರ್ಯಕರ್ತರು ಜಾಥಾ ನಡೆಸಿದ್ದಾರೆ.

    ಬಳಿಕ ಎಸ್‍ಪಿ ಕಚೇರಿಗೆ ತೆರಳಿ ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

    ಈ ಸಂದರ್ಭ ಮಾತನಾಡಿದ ಯಶ್‌ಪಾಲ್ ಕಾಪು ಮೂಲದ ಜಿಹಾದಿ ಮಹಿಳೆ ಸಂಘಟನೆ ಪ್ರಾರಂಭವಾಗಿದೆ.

    ಚಿತ್ರೀಕರಣಗೊಂಡ ವೀಡಿಯೋ ಹಲವು ಬಾರಿ ಫಾರ್ವರ್ಡ್ ಆಗಿದೆ. ಇದಕ್ಕೆ ನನ್ನ ಬಳಿ ಸಾಕ್ಷಿ ಇದೆ.

    ಈ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರ ಇದೆ. ವೀಡಿಯೋ ಮಾಡಿರುವ ವಿದ್ಯಾರ್ಥಿನಿ ಬಳಿ ಮೂರು ಮೊಬೈಲ್‍ಗಳಿವೆ ಎಂಬ ಮಾಹಿತಿ ಇದೆ.

    ಆ ವಿದ್ಯಾರ್ಥಿಗಳ ಹಿಂದೆ ಯಾರು ಇದ್ದಾರೆ ಎಂಬುದು ತನಿಖೆಯಾಗಬೇಕು ಎಂದು ಯಶ್‍ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

    ಒಂದು ವಿದ್ಯಾರ್ಥಿನಿ ಟಾಯ್ಲೆಟ್‍ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡುವುದು ಅಷ್ಟು ಸುಲಭದ ವಿಚಾರವಲ್ಲ.

    ನಾಳೆ ಆ ವಿದ್ಯಾರ್ಥಿನಿ ಯಾರೇ ಬಾಂಬ್ ಕೊಟ್ಟರೂ ಅದನ್ನು ಇಡಲು ಹಿಂಜರಿಯುವುದಿಲ್ಲ.

    ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವ ಜಿ. ಪರಮೇಶ್ವರ್ ಕಿವುಡ ಹಾಗೂ ಮೂಕರಾಗಿದ್ದಾರೆ.

    ಈ ಪ್ರಕರಣದ ತನಿಖೆಯನ್ನು ಕೇಂದ್ರಕ್ಕೆ ಒಪ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

    LATEST NEWS

    ಕಾಸರಗೋಡು: ಗ್ರೈಂಡರ್ ಗೆ ಶಾಲ್‌ ಸಿಲುಕಿ ಮಹಿಳೆ ಸಾ*ವು

    Published

    on

    ಕಾಸರಗೋಡು: ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃ*ತಪಟ್ಟ ದಾರುಣ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.

    ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( ೫೨) ಮೃ*ತಪಟ್ಟವರು. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    LATEST NEWS

    ಶಿರೂರು ಗುಡ್ಡ ಕುಸಿ*ತ ಪ್ರಕರಣ : ನೀರುಪಾಲಾಗಿದ್ದ ವೃದ್ಧೆಯ ಶ*ವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು!

    Published

    on

    ಅಂಕೋಲಾ : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃ*ತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು.
    ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾ*ನಿಗೊಳಗಾಗಿದೆ.

    ಬೇಸರದ ಸಂಗತಿ ಎಂದರೆ, ಮೃ*ತದೇಹವನ್ನು ಕುಟುಂಬಿಕರಿಗೆ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳೀಯ ಆಡಳಿತ, ಶಾಸಕರು ಹೀಗೆ ಯಾರೆಂದರೆ ಯಾರೂ ಇರಲಿಲ್ಲ. ಗ್ರಾಮದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮಹಿಳೆಯರು ಕಾಳಜಿ ಕೇಂದ್ರದಲ್ಲಿದ್ದಾರೆ.

    ಹೆಗಲಾದ ಪತ್ರಕರ್ತರು :
    ಹೊರುವವರಿಲ್ಲದೆ ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶ*ವ ಆಂಬುಲೆನ್ಸ್ ನಲ್ಲಿ ಉಳಿದಿದ್ದು, ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃ*ತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂ*ಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

    ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯು.ಆರ್.ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶ*ವಸಂಸ್ಕಾರದಲ್ಲಿ ಸಹಕರಿಸಿದರು.

    ಇದನ್ನೂ ಓದಿ : 4 ವರ್ಷದ ಬಾಲಕಿ ಕಿಡ್ನಾ*ಪ್, ಅತ್ಯಾ*ಚಾರ ಮಾಡಿ ಕೊ*ಲೆ.. ಮೃ*ತದೇಹ ಏನು ಮಾಡಿದ್ದ ಗೊತ್ತಾ?
    ಟ್ಯಾಂಕರ್ ಸ್ಫೋಟವೇ ಘಟನೆಗೆ ಕಾರಣ!
    ಶಿರೂರು ಗುಡ್ಡ ಕು*ಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರಿ ಸದ್ದಿನೊಂದಿಗೆ ಸ್ಫೋ*ಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾ*ಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ.

    ನೀರು‌ ಚಿಮ್ಮುತ್ತಿದ್ದಂತೆ ಬಾಂ*ಬ್‌ನಂತೆ ಸ್ಫೋ*ಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನಗಾಗಿ ಶೋಧ ಮುಂದುವರಿದಿದೆ.

    Continue Reading

    DAKSHINA KANNADA

    ಸರ್ಕಾರಿ ಬಸ್ ಮತ್ತು ಟ್ಯಾಂಕರ್ ಮಧ್ಯೆ ಅಪ*ಘಾತ; ಹಲವರಿಗೆ ಗಾ*ಯ

    Published

    on

    ಚಿಕ್ಕಮಗಳೂರು: KSRTC ಹಾಗೂ ಟ್ಯಾಂಕರ್ ಮಧ್ಯೆ ಭಯಾನಕ ಡಿ*ಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾ*ಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಮೂಡಿಗೆರೆ ತಾಲೂಕಿನ ಕಡೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರವಳಲು ಬಳಿ ಈ ಅಪ*ಘಾತ ಸಂಭವಿಸಿದೆ. ಅಪ*ಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾ*ಯಗಳಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾ*ನಿ ಸಂಭವಿಸಿಲ್ಲ.

    KSRTC, ಟ್ಯಾಂಕರ್ ಅಪ*ಘಾತದಿಂದ ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    Continue Reading

    LATEST NEWS

    Trending