Monday, January 24, 2022

ಹಿಂದೂ ಯುವ ಸೇನೆಯ ಸ್ಥಾಪಕ ಎಕ್ಕೂರು ಬಾಬಾ ನಿಧನ..!

ಹಿಂದೂ ಯುವ ಸೇನೆಯ ಸ್ಥಾಪಕ ಎಕ್ಕೂರು ಬಾಬಾ ನಿಧನ..!

ಮಂಗಳೂರು :ಹಿಂದೂ ಯುವ ಸೇನೆಯ ಸ್ಥಾಪಕರಾದ ಎಕ್ಕೂರು ಬಾಬಾ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.


ಒಂದು ವಾರದ ಹಿಂದೆ ಎಕ್ಕೂರು ಬಾಬಾ( ಶುಭಕರ ಶೆಟ್ಟಿ) ಅವರ ತಾಯಿ ಅನಾರೋಗ್ಯದಿಂದ ಸಾವನಪ್ಪಿದ್ದರು. ನಂತರ ಇವರಿಗೆ ಜ್ವರ ಬಂದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಅವರ ಗಂಟಲು ದ್ರವದ ಪರೀಕ್ಷೆ ನಡೆಸಿದಾಗ ಕೊರೊನಾ ಸೊಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನಪ್ಪಿದ್ದಾರೆ.

ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಹಲವು ಮಂದಿ ಸ್ನೇಹಿತರು, ಅಭಿಮಾನಿಗಳು ಖೇದ ವ್ಯಕ್ತಪಡಿಸಿದ್ದಾರೆ. ಹಿಂದು ಯುವ ಸೇನೆ, ಓಂ ಶಕ್ತಿ ಶಾಖೆ, ರಾಷ್ಟ್ರೀಯ ಸ್ವಯಂಸೇವಕ ಸಂಘ, ಅಯ್ಯಪ್ಪ ಭಜನಾ ಮಂದಿರದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು.

 

Hot Topics

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ಮಂಗಳೂರು: ಮಾಲೀಕನ ಎದುರೇ ಸ್ಕೂಟರ್‌ ಕದ್ದೊಯ್ದ ಕಳ್ಳ

ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್‌ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ.ರಿನ್ಸ್‌ ಮೋನ್‌ ಕ್ಸೇವಿಯರ್‌ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್‌ ಬಸ್‌ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್‌...

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್...