Monday, July 4, 2022

ನನ್ನ ಮೇಲೆ ರೇಪ್‌ ಆಗಿದೆ ಎಂದು ನಿನ್ನೆ ದೂರು ಕೊಟ್ಟು ಇಂದು ಉಲ್ಟಾ ಹೊಡೆದ್ಳು..!

ಮೈಸೂರು: ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆಗಿದೆ ಎಂದವಳು ವಿಚಾರಣೆ ವೇಳೆ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಉಲ್ಟಾ ಹೊಡೆದ ಘಟನೆ ನಡೆದಿದೆ.


ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಮೈಸೂರು ವಿವಿಯ ಪ್ರಾಧ್ಯಾಪಕ ಪ್ರೊ. ರಾಮಚಂದ್ರ ಎಂಬುವವರ ಮೇಲೆ ನಿನ್ನೆ ದೂರಿನ ಪ್ರತಿಗೆ ಸಹಿ, ಹೆಬ್ಬೆಟ್ಟು ಹಾಕಿದ್ದ ಸದರಿ ವಿದ್ಯಾರ್ಥಿನಿ ಇಂದು ತನ್ನ ಮೇಲೆ ಅತ್ಯಾಚಾರ ಆಗಿಲ್ಲವೆಂದು ಹೇಳಿಕೆ ಕೊಟ್ಟಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಉಲ್ಟಾ ಹೊಡೆದ ವಿದ್ಯಾರ್ಥಿನಿಯು ಅಂತಹ ಯಾವ ಘಟನೆಯೂ ನಡೆದಿಲ್ಲವೆಂದು ಹೇಳಿದ್ದಾರೆ. ಪ್ರೊ. ರಾಮಚಂದ್ರ ನನ್ನ ಪಿಹೆಚ್‌. ಡಿ ಮಾರ್ಗದರ್ಶಕರು. ಸಂಶೋಧನೆಯ ಬಗ್ಗೆ ನಾವಿಬ್ಬರೂ ಮಾತನಾಡುತ್ತಿದ್ದೆವು. ಅವರ ಪತ್ನಿ ಲೋಲಾಕ್ಷಿ ನನ್ನನ್ನ ಹೆದರಿಸಿ ದೂರು ಬರೆಸಿದರು ಎಂದು ಇಂದು ಲೋಲಾಕ್ಷಿ ವಿರುದ್ಧವೇ ವಿದ್ಯಾರ್ಥಿನಿಯು ದೂರು ನೀಡಿದ್ದಾರೆ. ಜಯಲಕ್ಷ್ಮೀಪುರಂ ಪೊಲೀಸರು ಇದೀಗ ಎನ್​ಸಿಆರ್‌ ದಾಖಲಿಸಿಕೊಂಡಿದ್ದಾರೆ.

ಏನಿದು ಪ್ರಕರಣ
ಪ್ರಖ್ಯಾತ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ವಿರುದ್ಧ ಸಂಶೋಧನಾ ವಿದ್ಯಾರ್ಥಿನಿ‌ ಮೇಲೆ‌ ಅತ್ಯಾಚಾರಗೈದ ಆರೋಪ ಗುರುವಾರ ಕೇಳಿಬಂದಿತ್ತು. ಸಂತ್ರಸ್ತೆ ಸಂಶೋಧನಾ ವಿದ್ಯಾರ್ಥಿನಿ ಜಯಲಕ್ಷ್ಮಿ ಪುರಂ ಠಾಣೆಗೆ ದೂರು ಸಹ ಸಲ್ಲಿಸಿದ್ದರು. ಆ ಸಂಶೋಧನಾ ವಿದ್ಯಾರ್ಥಿನಿ‌ ಪ್ರಾಧ್ಯಾಪಕನ ಬಳಿ ಪಿಎಚ್ ಡಿ ಮಾರ್ಗದರ್ಶನ ಪಡೆಯುತ್ತಿದ್ದರು. ವಿದ್ಯಾರ್ಥಿನಿಯನ್ನು ಮನೆಗೆ ಆರೋಪಿ ಕರೆಸಿಕೊಂಡಿದ್ದರಂತೆ. ಆ ವೇಳೆ‌ ಸಂತ್ರಸ್ತೆ ಕೂಗಾಟ, ಚೀರಾಟ ನಡೆಸಿದ್ದಳು. ಇದೇ ಸಂದರ್ಭಕ್ಕೆ ಮನೆಗೆ ಪ್ರಾಧ್ಯಾಪಕನ ಪತ್ನಿ ಲೋಲಾಕ್ಷಿ ಆಗಮಿಸಿದ್ದರು. ಲೋಲಾಕ್ಷಿ ಅವರು ಸಹ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿದ್ದಾರೆ. ನಂತರ ಅವರು ಸಂತ್ರಸ್ತೆ ಯುವತಿಯನ್ನು ಹಾಗೂ ತನ್ನ ಪತಿಯನ್ನು ಠಾಣೆಗೆ ಕರೆದೊಯ್ದು ಪೊಲೀಸರಿಗೆ ಒಪ್ಪಿಸಿದ್ದರು, ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದರು.

LEAVE A REPLY

Please enter your comment!
Please enter your name here

Hot Topics

ಆಸ್ಟ್ರೇಲಿಯಾದಲ್ಲಿ ತುಳು ಕೂಟ ಸಿಡ್ನಿಯಿಂದ ಜು.17ರಂದು ‘ಆಟಿಡ್‌ ಒಂಜಿ ದಿನ’

ಸಿಡ್ನಿ: ತುಳುನಾಡಿನ ಸಾಂಪ್ರದಾಯಿಕ ತಿಂಡಿಗಳನ್ನು ಆಸ್ಟ್ರೇಲಿಯಾದಲ್ಲಿರುವ ಅನಿವಾಸಿ ತುಳುವರಿಗೆ ಉಣಬಡಿಸುವ ನಿಟ್ಟಿನಲ್ಲಿ 'ತುಳು ಕೂಟ ಸಿಡ್ನಿ'ಯು ಜು.17ರಂದು ಸಿಡ್ನಿಯಲ್ಲಿ 'ಆಟಿಡ್‌ ಒಂಜಿ ದಿನ' ಆಯೋಜಿಸಿದೆ.ಜು.17 ರಂದು ಮಧ್ಯಾಹ್ನ 12 ಗಂಟೆಗೆ ಈ ಕಾರ್ಯಕ್ರಮ...

ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಲ್ಲಿದ್ದ ಡೆಡ್‌ ಬಾಡಿ ಎರಡು ದಿನಗಳ ಬಳಿಕ ಪತ್ತೆ

ಉಡುಪಿ: ಎರಡು ದಿನಗಳ ಹಿಂದೆ ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಿಂದ ನಾಪತ್ತೆಯಾದ ಓರ್ವನ ಶವ ಇಂದು ಬೈಂದೂರಿನ ಕಂಚುಗೋಡು ಎಂಬಲ್ಲಿ ಪತ್ತೆಯಾಗಿದೆ.ಮೃತನನ್ನು ರೋಶನ್ ಆಚಾರ್ಯ ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ...

ಬೆಳ್ತಂಗಡಿ: ತೋಟಕ್ಕೆ ಹೋದವ ನದಿ ದಡದಲ್ಲಿ ಪತ್ತೆಯಾದ

ಬೆಳ್ತಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಪುದುವೆಟ್ಟು ಗ್ರಾಮದ ಅಡ್ಯ ಎಂಬಲ್ಲಿ ನಡೆದಿದೆ.ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ (65) ಎಂಬವರು ಮೃತಪಟ್ಟ...