Wednesday, December 1, 2021

ಅಲೋಪತಿ ಔಷಧ ಕುರಿತ ಹೇಳಿಕೆ; ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಕಠಿಣ ಕ್ರಮಕ್ಕೆ ಭಾರತೀಯ ವೈದ್ಯಕೀಯ ಸಂಘ ಆಗ್ರಹ..!

ನವದೆಹಲಿ: ಅಲೋಪತಿ ಔಷಧ ಕುರಿತು ಯೋಗ ಗುರು ಬಾಬಾ ರಾಮ್‍ದೇವ್ ನೀಡಿದ ಹೇಳಿಕೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಉತ್ತರಾಖಂಡ್ ವಿಭಾಗ ಬರೋಬ್ಬರಿ 1 ಸಾವಿರ ಕೋಟಿ ರೂ. ಮಾನನಷ್ಟ ನೋಟಿಸ್ ನೀಡಿದೆ.ಬಾಬಾ ರಾಮ್‍ದೇವ್ ಅವರು ತಮ್ಮ ಹೇಳಿಕೆ ಕುರಿತು ವಿಡಿಯೋ ಪೋಸ್ಟ್ ಮಾಡಬೇಕು ಹಾಗೂ 15 ದಿನಗಳೊಳಗೆ ಲಿಖಿತ ರೂಪದಲ್ಲಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ 1000 ಕೋಟಿ ರೂ.ಗಳ ಬೇಡಿಕೆ ಇಡುತ್ತೇವೆ ಎಂದು ಐ.ಎಂ.ಎ ನೋಟಿಸ್‍ನಲ್ಲಿ ತಿಳಿಸಿದೆ.

ಅಲ್ಲದೆ ಐ.ಎಂ.ಎ ಪರವಾಗಿ ರಾಮ್‍ದೇವ್ ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸಲಾಗಿದೆ ಎಂದು ಉತ್ತರಾಖಂಡ್ ವಿಭಾಗದ ಅಧ್ಯಕ್ಷ ಡಾ.ಅಜಯ್ ಖನ್ನಾ ಹೇಳಿದ್ದಾರೆ.ಸೋಮವಾರ ಐಎಂಎನ ಉತ್ತರಾಖಂಡ್ ವಿಭಾಗ ಬಾಬಾ ರಾಮ್‍ದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉತ್ತರಾಖಂಡ್ ಮುಖ್ಯಮಂತ್ರಿ ತೀರ ಥ್ ​​ಸಿಂಗ್ ರಾವತ್ ಹಾಗೂ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿತ್ತು.

ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರ ಪತ್ರದ ಬಳಿಕ ಬಾಬಾ ರಾಮ್‍ದೇವ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಸೋಮವಾರ ಐಎಂಎಗೆ 25 ಪ್ರಶ್ನೆಗಳನ್ನು ಕೇಳಿದ್ದ ಅವರು,

ಅಧಿಕ ರಕ್ತದೊತ್ತಡ ಹಾಗೂ ಟೈಪ್-1, ಟೈಪ್-2 ಮಧುಮೇಹ ಮೊದಲಾದ  ಕಾಯಿಲೆಗಳಿಗೆ ಅಲೋಪತಿ ಶಾಶ್ವತ ಪರಿಹಾರ ನೀಡುತ್ತದೆಯೇ ಎಂದು ಅವರು ಪ್ರಶ್ನಿಸಿದ್ದರು.

ಅಲ್ಲದೆ ಥೈರಾಯ್ಡ್, ಸಂಧಿವಾತ, ಕೊಲೈಟಿಸ್ ಹಾಗೂ ಅಸ್ತಮಾಗೆ ಫಾರ್ಮಾ ಉದ್ಯಮದಲ್ಲಿ ಶಾಶ್ವತ ಚಿಕಿತ್ಸೆ ಇದೆಯೇ ಎಂದಿದ್ದರು. ಟಿಬಿ ಹಾಗೂ ದಡಾರಗೆ ನೀವು ಪರಿಹಾರ ಕಂಡುಕೊಂಡಂತೆ, ಲಿವರ್‌ಗೆ ಸಂಬಂಧಿಸಿದ ಕಾಯಿಲೆಗಳತ್ತ ಸಹ ಗಮನ ಹರಿಸಿ ಎಂದಿದ್ದರು.

ಇದೆಲ್ಲದರ ಬಳಿಕ ಅಲೋಪತಿಗೆ ಈಗ 200 ವರ್ಷಗಳು. ಅಲ್ಲದೆ ಅಲೋಪತಿ ಸರ್ವಶಕ್ತ ಮತ್ತು ‘ಸರ್ವಗುಣ ಸಂಪನ್ನ’ ಎನ್ನುವುದಾದರೆ ವೈದ್ಯರು ಅನಾರೋಗ್ಯಕ್ಕೆ ಒಳಗಾಗಬಾರದು ಎಂದು ಯೋಗ ಗುರು ಹೇಳಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...