Tuesday, August 16, 2022

UP ಚುನಾವಣೆ: ಗೋರಖ್‌ಪುರ್‌ನಿಂದ ಯೋಗಿ ಸ್ಪರ್ಧೆ-ಅಯೋಧ್ಯೆಯಿಂದ ಯಾರು?

ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಆದಿತ್ಯನಾಥ್​ ಅಯೋಧ್ಯೆಯಿಂದ ಸ್ಪರ್ಧಿಸುತ್ತಿಲ್ಲ ಬದಲಾಗಿ ಗೋರಖ್​ಪುರ ನಗರ ವಿಧಾನಸಭೆ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂಬುವುದು ಫೈನ್‌ ಆಗಿದೆ.


ಇಂದು ಮಧ್ಯಾಹ್ನ ಮೊದಲ ಹಂತದ 57 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬಿಡುಗಡೆಗೊಳಿಸಿದೆ.

ಫೆಬ್ರವರಿ 10ರಿಂದ ಪ್ರಾರಂಭವಾಗಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ, ಉತ್ತರಪ್ರದೇಶದಲ್ಲಿ ಏಳು ಹಂತದಲ್ಲಿ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ 58 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಅದರಲ್ಲಿ 57 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಧರ್ಮೇಂದ್ರ ಪ್ರಧಾನ್​ ಬಿಡುಗಡೆ ಮಾಡಿದ್ದಾರೆ.


ಹಾಗೇ, ಎರಡನೇ ಹಂತದಲ್ಲಿ 55 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಅದರ 38 ಅಭ್ಯರ್ಥಿಗಳ ಹೆಸರನ್ನೂ ಇಂದು ಬಿಡುಗಡೆ ಮಾಡಲಾಗಿದೆ. ಆದರೆ ಅಯೋಧ್ಯೆಯಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬುದಿನ್ನೂ ಬಹಿರಂಗವಾಗಿಲ್ಲ.

LEAVE A REPLY

Please enter your comment!
Please enter your name here

Hot Topics

ಕಡಬ: ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕ ಕುಸಿದು ಬಿದ್ದು ಸಾವು

ಕಡಬ: ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.ಧ್ವಜಾರೋಹಣವನ್ನು...

ಹಲವಾರು ಕ್ಷೇತ್ರಗಳಲ್ಲಿ ಕರ್ನಾಟಕ ನಂಬರ್ 1: ಧ್ವಜಾರೋಹಣ ಭಾಷಣದಲ್ಲಿ ಸಿಎಂ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್ಯವನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಷಣ ಮಾಡಿದ್ದಾರೆ.‘ನಾಡಿನ ಸಮಸ್ತ ಜನತೆಗೆ 76ನೇ...

ಮಂಗಳೂರು: ಕಂದಾವರ ನೂರುಲ್ ಇಸ್ಲಾಂ ಮಸ್ಜಿದ್‌- ಮದರಸದಲ್ಲಿ 75ರ ಸ್ವಾತಂತ್ರ್ಯ ಸಂಭ್ರಮ

ಮಂಗಳೂರು: ನೂರುಲ್ ಇಸ್ಲಾಂ ಮಸ್ಜಿದ್ ಮತ್ತು ಮದರಸ ಮೂಡುಕರೆ ಕಂದಾವರ ಇಲ್ಲಿ 75ನೇ ಸ್ವಾತಂತ್ರ್ಯವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.ಗೌರವಧ್ಯಕ್ಷರಾದ ಎಂ ಎಸ್ ಅಲಿಯಬ್ಬ ಅವರು ಸಬೀಹ್ ಅಲಿ ಅವರಿಂದ ಗೌರವವಂದನೆಯನ್ನು ಸ್ವೀಕರಿಸಿ ಧ್ವಜಾರೋಹಣ...