Connect with us

    DAKSHINA KANNADA

    ಕಾರ್ಕಳದಲ್ಲಿ ಯೋಗಿ ಬೃಹತ್‌ ರೋಡ್‌ ಶೋ :ಕಾಂಗ್ರೆಸ್, ಜೆಡಿಎಸ್‌ ಪಕ್ಷಗಳ ಅಧರ್ಮಕ್ಕೆ ಪೂರ್ಣವಿರಾಮ ಹಾಕಲು ಕರೆ..!

    Published

    on

    ಪ್ರಭು ಶ್ರೀರಾಮನ ಭಕ್ತನಾಗಿರುವ ನಾನು ಭಜರಂಗಿಯ ಜನ್ಮಸ್ಥಳಕ್ಕೆ ಬಂದಿದ್ದೇನೆ. ಹನುಮಂತನು ಶ್ರೀಲಂಕಾಕ್ಕೆ ಹೋಗಿ ಅಧರ್ಮದ ಕಾರ್ಯವನ್ನು ಸಮಾಪ್ತಿಗೊಳಿದಂತೆ ನೀವು ಕರ್ನಾಟಕದ ಕಾಂಗ್ರೆಸ್, ಜೆಡಿಎಸ್‌ ಪಕ್ಷಗಳ ಅಧರ್ಮಕ್ಕೆ ಪೂರ್ಣವಿರಾಮ ಹಾಕಬೇಕಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕಾರ್ಕಳದ ಮಹಾಜನತೆಗೆ ಕರೆ ನೀಡಿದರು.

    ಕಾರ್ಕಳ: ಪ್ರಭು ಶ್ರೀರಾಮನ ಭಕ್ತನಾಗಿರುವ ನಾನು ಭಜರಂಗಿಯ ಜನ್ಮಸ್ಥಳಕ್ಕೆ ಬಂದಿದ್ದೇನೆ. ಹನುಮಂತನು ಶ್ರೀಲಂಕಾಕ್ಕೆ ಹೋಗಿ ಅಧರ್ಮದ ಕಾರ್ಯವನ್ನು ಸಮಾಪ್ತಿಗೊಳಿದಂತೆ ನೀವು ಕರ್ನಾಟಕದ ಕಾಂಗ್ರೆಸ್, ಜೆಡಿಎಸ್‌ ಪಕ್ಷಗಳ ಅಧರ್ಮಕ್ಕೆ ಪೂರ್ಣವಿರಾಮ ಹಾಕಬೇಕಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕಾರ್ಕಳದ ಮಹಾಜನತೆಗೆ ಕರೆ ನೀಡಿದರು.

    ಅವರು ಮೇ 6ರಂದು ಕಾರ್ಕಳ ಅನಂತಶಯನದಿಂದ ಶ್ರೀವೆಂಕಟರಮಣ ದೇವಸ್ಥಾನದವರೆಗೆ ನಡೆದ ಮೆಗಾ ರೋಡ್‌ ಶೋದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

    ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರಕಾರ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಭಾರತವು ಎಲ್ಲ ಕ್ಷೇತ್ರದಲ್ಲೂ ಅಭಿವೃದ್ದಿ ಹೊಂದುತ್ತಿದೆ.

    ಐಟಿ ಹಬ್ ಮೂಲಕ ಕರ್ನಾಟಕವೂ ಭಾರತದ ಅಭಿವೃದ್ಧಿಯಲ್ಲಿ ಮಹತ್ತರ ಕೊಡುಗೆ ನೀಡಿದೆ. ಕಾರ್ಕಳದ ಜನತೆ ಯಾವಾಗಲೂ ರಾಷ್ಟ್ರೀಯವಾದಕ್ಕೆ ಬೆಂಬಲ ನೀಡಿದ್ದೀರಿ.

    ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಸುನಿಲ್‌ ಕುಮಾರ್‌ ಅವರಿಗೆ ಬೆಂಬಲ ನೀಡಿ ಗೆಲ್ಲಿಸಬೇಕೆಂದು ಯೋಗಿ ಮನವಿ ಮಾಡಿಕೊಂಡರು.
    2024ರಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲಿದೆ.

    ಅದರ ಲೋಕಾರ್ಪಣಾ ಕಾರ್ಯಕ್ರಮಕ್ಕೆ ತಮ್ಮೆಲ್ಲರನ್ನೂ ಆಮಂತ್ರಿಸುತ್ತಿದ್ದೇನೆ. ಈಗಾಗಲೇ ಕರ್ನಾಟಕ ರಾಜ್ಯದ ಭಕ್ತರಿಗೆ ಗೆಸ್ಟ್ ಹೌಸ್ ಸ್ಥಾಪಿಸಲು ಬಿ.ಎಸ್. ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಯೋಧ್ಯೆ ಬಳಿ ಜಾಗ ಕಾಯ್ದಿರಿಸುವ ಕಾರ್ಯವನ್ನು ಮಾಡಿದ್ದಾರೆ.

    ಅದರ ನಿರ್ಮಾಣ ಕಾರ್ಯವೂ ಆರಂಭವಾಗಿದೆ ಎಂದರು.

    ಬಿಜೆಪಿ ರಾಜ್ಯಾ‍ಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಚಿವ ವಿ. ಸುನಿಲ್‌ ಕುಮಾರ್‌, ಬಿಜೆಪಿ ಮುಖಂಡರಾದ ಬೋಳ ಪ್ರಭಾಕರ್‌ ಕಾಮತ್‌, ಎಂ.ಕೆ. ವಿಜಯ ಕುಮಾರ್‌, ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪ್ರಚಾರ ಸಮಿತಿ ಅಧ್ಯಕ್ಷ ಮಹೇಶ್‌ ಶೆಟ್ಟಿ ಕುಡುಪುಲಾಜೆ ಅವರು ಉಪಸ್ಥಿತರಿದ್ದರು.

    ಯೋಗಿ ಆದಿತ್ಯನಾಥ್ ಅವರು ಕಾರ್ಕಳಕ್ಕೆ ಇದೇ ಮೊದಲ ಬಾರಿಗೆ ಕಾರ್ಕಳ ಆಗಮಿಸಿದ್ದರು. ಅನಂತಶಯನ ದೇವಾಲಯದಿಂದ ವೆಂಕಟರಮಣ ದೇವಸ್ಥಾನದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಸಹಸ್ರ ಸಂಖ್ಯೆಯಲ್ಲಿ ಜನ ಘೋಷಣೆ ಕೂಗುತ್ತ ಬಿಜೆಪಿ ಬಾವುಟವನ್ನು ಹಾರಿಸುತ್ತ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.

    1 Comment

    1 Comment

    1. mshashidhar

      08/05/2023 at 1:28 PM

      ದಲಿತ ಯುವತಿ ಮನೀಷಾ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಸಾಯಿಸಿ ರಾತೋರಾತ್ರಿ ಸುಟ್ಟು ಹಾಕಿದರು ಯಾರ ರಾಜ್ಯದಲ್ಲಿ,,ಆ ಪಾಪ ಅಧರ್ಮದ ಕೊನೆಯೂ ಬರುವುದು,, ಶ್ರೀರಾಮ ಆಂಜನೇಯ ದೇವರುಗಳು ಎಲ್ಲವನ್ನೂ ನೋಡುತ್ತಿದ್ದಾರೆ,,, ಅದರಲ್ಲೂ ಅವರನ್ನು ರಾಜಕೀಯ ಲಾಭಕ್ಕಾಗಿ ದುರುಪಯೋಗ ಪಡಿಸಿಕೊಳ್ಳುವ ನಕಲಿ ಭಕ್ತರು ಮತ್ತವರ ಪಟಾಲಂ ಇಬ್ಬರೂ ದೇವರುಗಳ ಶಾಪ ತಟ್ಟುವುದು

    Leave a Reply

    Your email address will not be published. Required fields are marked *

    DAKSHINA KANNADA

    ಅತ್ಯಂತ ಉದ್ದದ ಮಾನವ ಸರಪಳಿ: ದ.ಕ.ಜಿಲ್ಲೆಗೆ ದ್ವಿತೀಯ ಸ್ಥಾನ

    Published

    on

    ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಬೀದರ್‌ನಿಂದ ಚಾಮರಾಜ ನಗರದವರೆಗೆ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಜಿಲ್ಲೆಗಳಿಗೆ ಒಟ್ಟು ಐದು ವಿಭಾಗಗಳಲ್ಲಿ ತಲಾ 3 ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿತ್ತು. ಈ ವಿಭಾಗಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯಂತ ಉದ್ದದ ಮಾನವ ಸರಪಳಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

    ನ.26ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಂದ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

    Continue Reading

    BIG BOSS

    ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

    Published

    on

    ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.

    ‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ‌. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು

    Continue Reading

    DAKSHINA KANNADA

    ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !

    Published

    on

    ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.

    ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
    ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
    ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.

     

    Continue Reading

    LATEST NEWS

    Trending