Connect with us

bangalore

ಬೆಳ್ಳಿ ಕಾಲ್ಗೆಜ್ಜೆಯನ್ನು ಓಲ್ಡ್ ಸ್ಟೈಲ್ ಎಂದು ಹೀಯಾಳಿಸದಿರಿ…

Published

on

ದೇಹದ ಪ್ರತಿಯೊಂದು ಭಾಗದಲ್ಲೂ ಜನರು ಚಿನ್ನದಿಂದ ಮಾಡಿದ ಆಭರಣಗಳನ್ನು ಧರಿಸುತ್ತಾರೆ. ಆದರೆ ಕಾಲುಗಳಿಗೆ ಮಾತ್ರ ಬೆಳ್ಳಿ ಗೆಜ್ಜೆಗಳನ್ನು ಏಕೆ ಧರಿಸುತ್ತಾರೆ ಎಂದು ಎಂದಾದರೂ ಯೋಚಿಸಿದ್ದೀರಾ?

Lifestyle : ಹಿಂದೂ ಧರ್ಮದ ನಂಬಿಕೆಗಳನ್ನು ನಂಬಿದರೆ, ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಧರಿಸುವುದಕ್ಕೂ ತನ್ನದೇ ಆದ ಕ್ರಮವಿದೆ.

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಹೆಣ್ಣು ಮಕ್ಕಳು ಕಾಲ್ಗೆಜ್ಜೆ ಧರಿಸುವ ಅಭ್ಯಾಸವನ್ನೇ ರೂಢಿಸಿಕೊಂಡಿರುವುದಿಲ್ಲ.

ಆದರೆ, ಇನ್ನೂ ಕೆಲವು ಹೆಣ್ಣು ಮಕ್ಕಳಿಗೆ ಕಾಲುಗೆಜ್ಜೆ ಧರಿಸುವುದೆಂದರೆ ಒಂದು ರೀತಿಯ ಸಂಭ್ರಮ.

ಇದು ಪಾದಗಳಿಗೆ ಮೆರಗು ನೀಡುತ್ತದೆ, ಜೊತೆಗೆ ಹಬ್ಬ ಹರಿದಿನಗಳಲ್ಲಿ ಬೆಳ್ಳಿಯ ಕಾಲ್ಗೆಜ್ಜೆ ಧರಿಸಿಕೊಂಡು ಓಡಾಡುತ್ತಿದ್ದರೆ, ನಿಮಗೆ ಮಾತ್ರವಲ್ಲದೆ ಮನೆಯವರ ಸಂಭ್ರಮ ಕೂಡ ಹೆಚ್ಚುತ್ತದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬೆಳ್ಳಿಯು ಚಂದ್ರನ ಸಂಕೇತವಾಗಿರುತ್ತದೆ. ಅಷ್ಟೇ ಅಲ್ಲದೆ ಬೆಳ್ಳಿಯು ಈಶ್ವರನ ಕಣ್ಣುಗಳಿಂದ ಸೃಷ್ಟಿಯಾಗಿದೆ ಎಂದು ನಂಬಲಾಗುತ್ತದೆ.

ಈ ಎಲ್ಲ ಕಾರಣಗಳಿಂದ ಬೆಳ್ಳಿಯನ್ನು ಸಂವೃದ್ಧಿಯ ಸಂಕೇತ ಎಂದು ಹಿರಿಯರು ನಂಬುತ್ತಾರೆ. ಬೆಳ್ಳಿಯ ಧಾರಣೆಯಿಂದ ಈ ಎಲ್ಲ ಉಪಯೋಗಗಳಿವೆ.

ಬೆಳ್ಳಿಯ ಕಾಲ್ಗೆಜ್ಜೆ ಧರಿಸುವುದರಿಂದ ನಿಮ್ಮ ದೇಹದಿಂದ ಅನಾವಶ್ಯಕವಾಗಿ ಹೊರ ಹೋಗುವ ಶಕ್ತಿಯು ದೇಹದಲ್ಲಿಯೇ ಉಳಿದುಕೊಳ್ಳುತ್ತದೆ.

ನಮ್ಮ ದೇಹದಲ್ಲಿರುವ ಎನರ್ಜಿ ಹೆಚ್ಚಾಗಿ ಕೈ ಮತ್ತು ಕಾಲುಗಳಿಂದಲೇ ಹೊರ ಹೋಗಲ್ಪಡುತ್ತವೆ, ಇಂತಹ ಎನರ್ಜಿ ಕಾಪಾಡಿಕೊಳ್ಳಲು ಬೆಳ್ಳಿಯ ಕಾಲ್ಗೆಜ್ಜೆಗಳು ಸಹಕಾರಿ.

ಕಾಲ್ಗೆಜ್ಜೆಯನ್ನು ಧರಿಸುವುದರಿಂದ ಇಂತಹ ಹಲವು ಸಮಸ್ಯೆಗಳಿಂದ ಸುಲಭವಾಗಿ ಪರಿಹಾರ ಪಡೆಯಬಹುದು.

ಬಿಡುವಿಲ್ಲದ ಜೀವನ ಶೈಲಿಯಿಂದಾಗಿ ಸಾಮಾನ್ಯವಾಗಿ ಮಹಿಳೆಯರು ಕಾಲು ನೋವಿನ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ.

ಆದರೆ, ಕಾಲ್ಗೆಜ್ಜೆಯನ್ನು ಧರಿಸುವುದರಿಂದ ಈ ಸಮಸ್ಯೆಗೆ ಪರಿಹಾರ ಪಡೆಯಬಹುದು.ವಾಸ್ತವವಾಗಿ, ಬೆಳ್ಳಿ ಕಾಲ್ಗೆಜ್ಜೆಯನ್ನು ಧರಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ.

ಕಾಲ್ಗೆಜ್ಜೆಗಳು ಪಾದದೊಂದಿಗೆ ಸಂಪರ್ಕಕ್ಕೆ ಬಂದಾಗ ಈ ಲೋಹದ ಅಂಶವೂ ಚರ್ಮಕ್ಕೆ ಉಜ್ಜಿಕೊಳ್ಳುತ್ತದೆ. ಮತ್ತೆ ಇದು ದೇಹವನ್ನು ಪ್ರವೇಶಿಸಿ ಮೂಳೆಗಳನ್ನು ಬಲಿಷ್ಠಗೊಳಿಸುತ್ತದೆ.

ಬೆಳ್ಳಿ ದೇಹವನ್ನು ತಂಪಾಗಿಸಲು ಸಹಾಯಕವಾಗಿದೆ. ಆರೋಗ್ಯ ತಜ್ಞರ ಪ್ರಕಾರ, ಬೆಳ್ಳಿ ಗೆಜ್ಜೆ ಧರಿಸುವುದರಿಂದ ದೇಹದ ಉಷ್ಣತೆಯನ್ನು ನಿಯಂತ್ರಣದಲ್ಲಿ ಇಡಬಹುದು ಎಂದು ಹೇಳಲಾಗುತ್ತದೆ.

ವಿಜ್ಞಾನಿಗಳ ಪ್ರಕಾರ, ಬೆಲ್ಲಿಯೂ ಪ್ರತಿಕ್ರಿಯಾತ್ಮಕ ಲೋಹವಾಗಿದೆ. ಕಾಲಿಗೆ ಬೆಳ್ಳಿ ಗೆಜ್ಜೆ ಧರಿಸುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ.

ಬೆಳ್ಳಿ ಕಾಲ್ಗೆಜ್ಜೆ ಧರಿಸುವುದರಿಂದ ಪಾದಗಳಿಂದ ಹೊರಹೊಮ್ಮುವ ಭೌತಿಕ ವಿದ್ಯುತ್ ಶಕ್ತಿಯನ್ನು ದೇಹದಲ್ಲಿ ಉಳಿಸಲು ಸಹಾಯಕ ಎನ್ನಲಾಗುವುದು.

ಬೆಳ್ಳಿ ಕಾಲ್ಗೆಜ್ಜೆ ಧರಿಸುವುದರಿಂದ ಮಹಿಳೆಯಲ್ಲಿ ಹಾರ್ಮೋನ್ ಮಟ್ಟ ಸಮತೋಲನಗೊಳ್ಳುತ್ತದೆ ಎಂದು ಹಲವು ಸಂಶೋಧನೆಗಳಿಂದ ತಿಳಿದುಬಂದಿದೆ.

ಇದು ಮುಟ್ಟಿಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ನಿವಾರಿಸುವುದರ ಜೊತೆಗೆ ಗರ್ಭಾಶಯವನ್ನು ಆರೋಗ್ಯವಾಗಿರಿಸುವಲ್ಲಿಯೂ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ ಎಂದು ಹೇಳಲಾಗುತ್ತದೆ.

bangalore

ಕ್ಷೀಣಿಸುತ್ತಿದೆ ಹಿರಿಯ ನಟಿ ಲೀಲಾವತಿ ಆರೋಗ್ಯ-ಡಿಕೆಶಿ, ನಟ ಶಿವಣ್ಣ ಆರೋಗ್ಯ ವಿಚಾರಣೆ

Published

on

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ ಭೆಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ಮನೆಗೆ ಆಗಮಿಸಿದ ಶಿವಣ್ಣ ಅವರನ್ನು ವಿನೋದ್‌ ರಾಜ್‌ಕುಮಾರ್‌ ಹೆಚ್ಚು ಆತ್ಮೀಯವಾಗಿ ಬರಮಾಡಿಕೊಂಡು ತಾಯಿಯ ಆರೋಗ್ಯದ ಕುರಿತು ವಿವರಣೆ ನೀಡಿದ್ದಾರೆ..


ಇನ್ನು ಮೊನ್ನೆಯಷ್ಟೇ ನಟ ಅರ್ಜುನ್‌ ಸರ್ಜಾ ಲೀಲಾವತಿ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಸಿದ್ದರು.. ಅಲ್ಲದೇ ದರ್ಶನ್‌ ಸಹ ಅವರ ಮನೆಗೆ ಭೇಟಿ ನೀಡಿದ್ದರು.. ಡಿಕೆಶಿ ಕೂಡ ಆರೋಗ್ಯ  ವಿಚಾರಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಯಲ್ಲಿನ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ..

Continue Reading

bangalore

ನ. 29ಕ್ಕೆ ಮಳೆ ಹುಡುಗಿ ಪೂಜಾ ಗಾಂಧಿ ಮದುವೆ…

Published

on

ಬೆಂಗಳೂರು : ಮಳೆ ಹುಡುಗಿ ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ, ಮಕ್ಕಳು, ಸಂಸಾರ ಅನ್ನುವ ವಿಚಾರದ ಬಗ್ಗೆ ಪೂಜಾ ಯೋಚನೆ ಮಾಡಿದ್ದರು. ಆದರೆ ಅದು ಈಗಲೇ ಅಲ್ಲ ಅನ್ನುವ ಮಾತನ್ನು ಹೇಳಿಕೊಳ್ಳುತ್ತಿದ್ದರು. ಅದರ ಮಧ್ಯೆ ಆನಂದ್ ಗೌಡ ಜೊತೆಗೆ ನಿಶ್ಚಿತಾರ್ಥವೂ ಆಗಿತ್ತು. ಅದು ಅಷ್ಟೇ ಬೇಗ ಮುರಿದು ಬಿತ್ತು. ಆದರೆ ಇದೀಗ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಡಲು ಡಿಸೈಡ್ ಮಾಡಿದ್ದಾರೆ.


ಇದೇ ನವೆಂಬರ್ 29ರಂದು ಬೆಂಗಳೂರಿನ ಯಲಂಹಕದ ಸಮೀಪ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ವಿಶೇಷ ಅಂದರೆ, ಮಂತ್ರ ಮಾಂಗಲ್ಯ ಪದ್ಧತಿಯ ಪ್ರಕಾರ ಈ ಮದುವೆ ನಡೆಯಲಿದೆ ಎಂದು ವರದಿಯಾಗಿದೆ.ಪೂಜಾಗಾಂಧಿ ಮೂಲತ: ಉತ್ತರ ಪ್ರದೇಶದ ಮೀರತ್‌ನವರು. ಪಂಜಾಬಿ ಕುಟುಂಬದಲ್ಲಿ ಜನಿಸಿದ್ದ ಪೂಜಾ ಗಾಂಧಿ ದೆಹಲಿಯಲ್ಲಿ ನೆಲೆಸಿದ್ದರು. ಜಾಹೀತಾರು ಹಾಗೂ ಮಾಡಲಿಂಗ್ ಮೂಲಕ ಜನಪ್ರಿಯರಾಗಿದ್ದ ನಟಿ ‘ಮುಂಗಾರು ಮಳೆ’ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದರು. ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಂತೆ ಒಂದರ ಹಿಂದೊಂದರಂತೆ ಯಶಸ್ಸು ಇವರನ್ನು ಹಿಂಬಾಲಿಸಿಕೊಂಡು ಬಂದಿತ್ತು.


2012ರಲ್ಲಿ ಪೂಜಾ ಗಾಂಧಿ ಅವರಿಗೆ ಉದ್ಯಮಿ ಆನಂದ್ ಗೌಡ ಜತೆ ನಿಶ್ಚಿತಾರ್ಥವಾಗಿ, ನಂತರ ಮುರಿದು ಬಿದ್ದಿತ್ತು. ಆದರೆ, ಈಗ ಹರಿದಾಡುತ್ತಿರುವ ಮದುವೆ ವಿಷಯದ ಬಗ್ಗೆ ನಟಿ ಎಲ್ಲಿಯೂ ಮಾಹಿತಿ ಹಂಚಿಕೊಂಡಿಲ್ಲ.ಕನ್ನಡವನ್ನು ಕಲಿತು ಕನ್ನಡಿಗರಿಂದ ಬೇಷ್ ಎನಿಸಿಕೊಂಡಿರೋ ಮುಂಗಾರು ಮಳೆ ಬೆಡಗಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು, ಇದೀಗ ಮದುವೆಗೆ ರೆಡಿ ಆಗಿದ್ದಾರೆ. ಕನ್ನಡ ಕಲಿತು ಕನ್ನಡಿಗನನ್ನು ಮದುವೆಯಾಗುವ ಮೂಲಕ ಕರ್ನಾಟಕದ ಸೊಸೆ ಆಗಲು ಪೂಜಾ ಸಿದ್ಧವಾಗುತ್ತಿದ್ದಾರೆ ಎನ್ನಲಾಗಿದೆ

Continue Reading

bangalore

‘ಕಾಂತಾರ-1’ ಫಸ್ಟ್ ಲುಕ್ ಟೀಸರ್ 7 ಭಾಷೆಗಳಲ್ಲಿ ಬಿಡುಗಡೆ..!

Published

on

ಕುಂದಾಪುರ: ತುಳುನಾಡ ಮಣ್ಣಿನ ಶಕ್ತಿ ದೈವಾರಾಧನೆ ಮಹತ್ವವನ್ನು ಇಡೀ ಜಗತ್ತಿಗೆ ತೋರಿಸಿದ ಚಿತ್ರ ಕಾಂತಾರ ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಈ ಸೂಪರ್ ಹಿಟ್ ಸಿನಿಮಾದ ಪ್ರೀಕ್ವೆಲ್‌ ಅಂದರೆ ಎರಡನೇ ಭಾಗದ ಫಸ್ಟ್‌ ಲುಕ್‌ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಗಿದೆ.

ಇಂದು ಬೆಳಿಗ್ಗೆ ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ಸಿನಿಮಾದ ಮೂಹೂರ್ತ ಕಾರ್ಯಕ್ರಮ ನೆರವೇರಿದೆ. ಮುಹೂರ್ತದ ಜೊತೆಗೆ ಫಸ್ಟ್‌ ಲುಕ್‌ ಹಾಗೂ ಟೀಸರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಟೀಸರ್ ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಟೀಸರ್ ನ್ನು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್‌ನಲ್ಲಿ ಟೀಸರ್ ಬಿಡುಗಡೆಯಾಗಿದ್ದು, ಕಾಂತಾರ ಪ್ರೀಕ್ವೆಲ್‌ ಕತೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂಬುದು ಬಹಿರಂಗವಾಗಿದೆ.

ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್‌ ಅನ್ನು ಹೊಂಬಾಳೆ ಬಣ್ಣಿಸಿದೆ. ಟೀಸರ್ ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ಇಂದು ಬಿಡುಗಡೆಯಾಗಿದ್ದು, ಫಸ್ಟ್ ಲುಕ್ ನಲ್ಲಿ ರಿಷಬ್ ಶೆಟ್ಟಿಯವರು ರೌದ್ರಾವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಅವತಾರ ಅಭಿಮಾನಿಗಳಲ್ಲಿ ಕುತೂಹಲವನ್ನು ಹೆಚ್ಚುವಂತೆ ಮಾಡಿದೆ. ಚಿತ್ರದಲ್ಲಿ ರಿಷಬ್‌ ಶೆಟ್ಟಿ ಅವರು ರೌದ್ರವತಾರದಲ್ಲಿ ಅಚ್ಚರಿ ಮೂಡುವಂತೆ ಕಂಡು ಬಂದಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವುದು ಕಂಡು ಬಂದಿದ್ದು, ಈ ಪೋಸ್ಟರ್ ಹಲವು ಕುತೂಹಲವನ್ನು ಸೃಷ್ಟಿಸಿದೆ. ಕಾಂತಾರ’ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದರು. ಸಣ್ಣ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ, ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈಗ ‘ಕಾಂತಾರ 2’ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲು ತಂಡ ನಿರ್ಧರಿಸಿದೆ. ರಿಷಬ್ ಶೆಟ್ಟಿ ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

 

Continue Reading

LATEST NEWS

Trending