DAKSHINA KANNADA
ರಾಜ್ಯದಲ್ಲಿ ನೀತಿ ಸಂಹಿತೆ ಜಾರಿ – ನೀತಿ ಸಂಹಿತೆ ಅಂದ್ರೆ ಏನು..?
Published
2 years agoon
By
Adminಕರ್ನಾಟಕದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದೆ. ಮೇ 10ರ ಬುಧವಾರ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು : ಕರ್ನಾಟಕದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದೆ. ಮೇ 10ರ ಬುಧವಾರ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ನೀತಿ ಸಂಹಿತೆ ಅಂದ್ರೆ ಏನು?
ಈ ನೀತಿ ಸಂಹಿತೆ ಸರ್ಕಾರ, ಆಡಳಿತ ಸೇರಿದಂತೆ ಹಲವು ಕಡೆಗಳಿಗೆ ಅನ್ವಯ ಆಗಲಿದೆ.
ಮುಖ್ಯಮಂತ್ರಿ ಸೇರಿದಂತೆ ಸಚಿವರು ಸರ್ಕಾರಿ ಸೌಲಭ್ಯವನ್ನು ಬಳಸುವಂತಿಲ್ಲ, ಸರ್ಕಾರಿ ವಾಹನ ಸೇರಿದಂತೆ ಇತರೆ ಸವಲತ್ತುಗಳನ್ನು ಬಳಸುವಹಾಗಿಲ್ಲ.
ಸರ್ಕಾರ ಯಾವುದೇ ಯೋಜನೆಯನ್ನು ಘೋಷಣೆ ಮಾಡುವಂತಿಲ್ಲ,
ಯಾವುದೇ ಅಭಿವೃದ್ಧಿ ಕಾರ್ಯಗಳಲ್ಲಿ ಭಾಗಿಯಾಗುವಂತಿಲ್ಲ.
ಆದರೆ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರಿಗೆ ಎಂದಿನಂತೆ ಭದ್ರತೆ ಇರುತ್ತದೆ, ಎಸ್ಕಾರ್ಟ್ ಸೇರಿದಮತೆ ಎಲ್ಲಾ ರೀತಿಯ ಭದ್ರತೆ ಮುಂದುವರೆಯಲಿದೆ.
ಆಡಳಿತ, ವಿರೋಧ ಪಕ್ಷ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳೂ ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ ಬರುತ್ತವೆ.
ಸರ್ಕಾರದ ಎಲ್ಲಾ ಇಲಾಖೆಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ ಮಂಡಳಿಗಳು, ಸ್ಥಳೀಯ ಪೌರ ಸಂಸ್ಥೆಗಳು, ಸರ್ಕಾರದಿಂದ ಹಣಕಾಸಿನ ನೆರವನ್ನ ಪಡೆಯುವ ಸಂಸ್ಥೆಗಳು ಹಾಗೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ ಬರುತ್ತವೆ.
ಯಾವುದೇ ಹೊಸ ಕಾರ್ಯಕ್ರಮಗಳ ಅನುಷ್ಠಾನ ಮಾಡುವಂತಿಲ್ಲ.
ನೀತಿ ಸಂಹಿತೆ ಜಾರಿಯಾದ ನಂತ್ರ ಏನೆಲ್ಲಾ ಮಾಡಬಾರದು?
*ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಸರ್ಕಾರ ಹೊಸ ಯೋಜನೆ ಘೋಷಿಸುವಂತಿಲ್ಲ.*ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಡುವಂತಿಲ್ಲ.
*ಹೊಸ ಯೋಜನೆಗೆ ಹಣ ನೀಡುವಂತಿಲ್ಲ.
*ಹೊಸ ಟೆಂಡರ್ ಕರೆಯುವಂತಿಲ್ಲ. ಈಗಾಗಲೇ ಕರೆದಿದ್ದ ಟೆಂಡರ್ ಫೈನಲ್ ಕೂಡಾ ಮಾಡುವ ಹಾಗಿಲ್ಲ.
*ಎಲ್ಲಕ್ಕಿಂತಾ ಮುಖ್ಯವಾಗಿ ಸಚಿವರು, ಶಾಸಕರು ಸರ್ಕಾರಿ ವಾಹನ ಬಳಸುವಂತಿಲ್ಲ ಅಧಿಕಾರಿಗಳ ಜೊತೆ ಸಭೆ ನಡೆಸುವಂತಿಲ್ಲ. ಸರ್ಕಾರಿ ವಸತಿ ಗೃಹ ಬಳಸುವಂತಿಲ್ಲ.
*ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಮಾತ್ರ ಧ್ವನಿವರ್ಧಕ ಬಳಕೆ ಮಾಡಬೇಕು.
*ಮಂದಿರ, ಮಸೀದಿ, ಚರ್ಚ್ ಸೇರಿದಂತೆ ಯಾವುದೇ ಧಾರ್ಮಿಕ ಸ್ಥಳಗಳು ಚುನಾವಣಾ ಪ್ರಚಾರಕ್ಕೆ ಬಳಕೆ ಆಗಬಾರದು. ಧರ್ಮ – ಜಾತಿ ವಿಷಯಾಧಾರಿತವಾಗಿ ಮತ ಕೇಳುವಂತೆಯೇ ಇಲ್ಲ.
*ಒಂದ್ಸಲ ಚುನಾವಣ ನೀತಿ ಸಂಹಿತೆ ಜಾರಿಯಾದ ಬಳಿಕ ಸರ್ಕಾರದ ಬಳಿ ಇರೋ ಹಲವಾರು ಅಧಿಕಾರಗಳು ಕಡಿತಗೊಳ್ಳುತ್ತವೆ.
ಸಿಎಂಗೆ ಕೆಲವು ಅಧಿಕಾರಗಳು ಹಾಗೇ ಇರುತ್ತೆ
ಮುಖ್ಯಮಂತ್ರಿಗಳಿಗೆ ಕೆಲವು ಅಧಿಕಾರಗಳು ಮುಂದುವರಿಯಲಿವೆ. ಆದರೆ ಆದೇಶ ಮಾಡುವ, ಸಹಿ ಹಾಕುವ, ಸರ್ಕಾರಿ ಕಾರ್ಯಕ್ರಮ ಕರೆಯುವ, ಭಾಗವಹಿಸುವ ಅಧಿಕಾರ ಇರಲ್ಲ. ಸಿಎಂ ಸರ್ಕಾರಿ ಕಾರನ್ನು ತಮ್ಮ ಕಚೇರಿ, ವಿಧಾನಸೌಧಕ್ಕೆ ಬಳಸಬೇಕು. ಜಿಲ್ಲಾ ಪ್ರವಾಸ, ಪ್ರಚಾರ ಗಳಿಗೆ ಸರ್ಕಾರಿ ವಾಹನ ಬಳಕೆ ನಿರ್ಬಂಧ ಇರಲಿದೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
16 hours agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
bangalore
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
Published
17 hours agoon
21/11/2024By
NEWS DESK3ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
DAKSHINA KANNADA
ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
Published
19 hours agoon
21/11/2024By
NEWS DESK3ಮಂಗಳೂರು/ಮಧ್ಯಪ್ರದೇಶ: ಐಪಿಎಲ್ 2025ರ ಮೆಗಾ ಹರಾಜು ಪ್ರಕ್ರಿಯೆ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಜತ್ ಪಾಟಿದಾರ್ ಅವರಿಗೆ ನಾಯಕತ್ವ ಒದಗಿ ಬಂದಿದೆ.
ರಜತ್ ಪಟಿದಾರ್ ಆರ್ ಸಿಬಿ ತಂಡದಲ್ಲಿ ಪ್ರಮುಖ ಆಟಗಾರ ಹಾಗೂ ಈ ಬಾರಿ ತಂಡ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದೀಗ ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ರಜತ್ ಪಾಟಿದಾರ್ ಗೆ ರಾಜ್ಯ ತಂಡದ ನಾಯಕತ್ವ ನೀಡಲಾಗಿದೆ.
ನವೆಂಬರ್ 23 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ 15 ಸದಸ್ಯರ ಮಧ್ಯಪ್ರದೇಶ ತಂಡವನ್ನು ಘೋಷಿಸಲಾಗಿದೆ.
ಇದನ್ನು ಓದಿ: ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ವಿದ್ಯಾರ್ಥಿನಿಯ ದು*ರಂತ ಅಂ*ತ್ಯ
ಮಧ್ಯಪ್ರದೇಶ ತಂಡದ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಒಂದು ವೇಳೆ ಮುಂಬರುವ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯಪ್ರದೇಶ ತಂಡವು ಫೈನಲ್ ಗೆ ತಲುಪಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ರೇಸ್ ನಲ್ಲಿ ರಜತ್ ಪಾಟಿದಾರ್ ಕೂಡ ತೀವ್ರ ಪೈಪೋಟಿ ಕೊಡಲಿದ್ದಾರೆ.
ಆರ್ ಸಿಬಿ ಪರ 24 ಇನ್ನಿಂಗ್ಸ್ ಆಡಿರುವ ರಜತ್ ಪಾಟಿದಾರ್ 1 ಶತಕ 7 ಅರ್ಧಶತಕಗಳೊಂದಿಗೆ ಒಟ್ಟು 799 ರನ್ ಕಲೆಹಾಕಿದ್ದಾರೆ. ಈಗಗಾಲೇ ಆರ್ ಸಿ ಬಿ ತಂಡದಿಂದ ನಾಯಕ ಫಾಫ್ ಡುಪ್ಲೆಸಿಸ್ ತಂಡದಿಂದ ಹೊರಬಿದಿದ್ದಾರೆ. ಇದರಿಂದ ನಾಯಕತ್ವ ಯಾರ ಪಾಲಾಗಲಿದೆ ಎಂಬುವುದು ತ್ರೀವ್ರ ಕುತೂಹಲ ಮೂಡಿಸಿದೆ.
LATEST NEWS
‘ಓಲಾ ಎಲೆಕ್ಟ್ರಿಕ್ ಕಂಪನಿ’ಯಿಂದ 500 ಉದ್ಯೋಗಿಗಳು ವಜಾ
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
ನೀವು ಹೀಗೆ ಮಾಡಿದ್ರೆ ‘ಗೂಗಲ್ ಪೇ’ನಲ್ಲಿ ಸುಲಭವಾಗಿ 1,000 ರೂಪಾಯಿ ಪಡೆಯಬಹುದು
ತಾಯಂದಿರಿಂಲೇ ಮಕ್ಕಳ ಅ*ಪಹರಣ; ಉದ್ದೇಶ ಕೇಳಿದ್ರೆ ನೀವೆ ಶಾಕ್ ಆಗ್ತೀರ !!
ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ವಿದ್ಯಾರ್ಥಿನಿಯ ದು*ರಂತ ಅಂ*ತ್ಯ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ