Connect with us

    International news

    ನೀವು ಕೂಡ ಕ್ರಿಕೆಟ್ ಅಂಪೈರ್ ಆಗಬಹುದು; ಲಕ್ಷ ಲಕ್ಷ ಸಂಬಳ !

    Published

    on

    ಮಂಗಳೂರು : ಭಾರತದಲ್ಲಿ ಕ್ರಿಕೆಟ್ ಗೆ ಎಷ್ಟು ಕ್ರೇಜ್ ಇದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಬಾಲ್ಯದಲ್ಲಿ ಕ್ರಿಕೆಟ್ ಆಡುವ ಪ್ರತಿಯೊಬ್ಬರು ಕೂಡ ಭಾರತದ ಪರ ಆಡುವ ಕನಸನ್ನು ಕಾಣುತ್ತಾರೆ. ಆದರೆ ಎಲ್ಲರಿಗೂ ಇದು ಸಾಧ್ಯವಾಗುವುದಿಲ್ಲ. ಆದರೆ ನಿಮ್ಮ ಕನಸು ಈಡೇರದಿದ್ದರೂ ನೀವು ಅಂಪೈರ್ ಆಗುವ ಮೂಲಕ ನಿಮ್ಮ ಕನಸನ್ನು ಸಾಕಾರಗೊಳಿಸಬಹುದು.


    ಕೆಲವೇ ಕೆಲವು ಜನರಿಗೆ ಮಾತ್ರ ಅಂಪೈರ್ ಆಗುವುದು ಹೇಗೆಂದು ಗೊತ್ತಿದೆ. ಕ್ರಿಕೆಟ್ ಅಂಪೈರ್ ಆಗಲು ಕೆಲವೊಂದು ಪ್ರಕ್ರಿಯೆಗಳಿವೆ. ಕ್ರಿಕೆಟ್ ಕೌಶಲ್ಯವನ್ನು ಮಾತ್ರವಲ್ಲದೇ ದೈಹಿಕ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಕೂಡ ಮುಖ್ಯವಾಗಿರುತ್ತದೆ.

    ಅಂಪೈರ್ ಆಗಲು ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ?
    ಸ್ಥಳೀಯ ಮಟ್ಟದಲ್ಲಿ ನಡೆಯುವ ಪಂದ್ಯಗಳಲ್ಲಿ ಅಂಪೈರಿಂಗ್ ಮಾಡಬೇಕು. ಆ ಮೂಲಕ ಅಂಪೈರಿಂಗ್ ಮಾಡುವ ಅನುಭವವನ್ನು ಪಡೆದುಕೊಳ್ಳಬೇಕು. ಇಲ್ಲಿ ಸಿಗುವ ಅನುಭವ ಅಂಪೈರ್ ವಿಭಾಗದಲ್ಲಿ ನಿಮ್ಮನ್ನು ಎತ್ತರ ಮಟ್ಟಕ್ಕೆ ಕೊಂಡೊಯ್ಯಲು ಸಹಾಯ ಮಾಡುತ್ತದೆ. ನಂತರ ಕ್ರಿಕೆಟ್ ಅಂಪೈರ್ ಆಗಲು ಬಯಸಿದ ಅಭ್ಯರ್ಥಿಗಳು ತಮಗೆ ಸಂಬಂಧಿತ ‘ರಾಜ್ಯ ಕ್ರಿಕೆಟ್ ಸಂಸ್ಥೆ’ಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಇದಕ್ಕಾಗಿ ಸ್ಥಳೀಯ ಪಂದ್ಯಗಳಲ್ಲಿ ಅನುಭವ ಪಡೆಯುವುದು ಮುಖ್ಯವಾಗಿದೆ.

    ಇದನ್ನೂ ಓದಿ: ತಂದೆ-ತಾಯಿಯನ್ನು ಕೂಡಿ ಹಾಕಿ ಮಗಳು ಪ್ರಿಯಕರನೊಂದಿಗೆ ಪರಾರಿ !!
    ನೀವು ರಾಜ್ಯ ಕ್ರಿಕೆಟ್ ಸಂಸ್ಥೆಯೊಂದಿಗೆ ನೀವು ಸಾಕಷ್ಟು ಅನುಭವ ಪಡೆದ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನಡೆಸುವ ಹಂತ-1 ಪರೀಕ್ಷೆಗೆ ಹೆಸರನ್ನು ಕಳುಹಿಸಲಾಗುತ್ತದೆ. ನಂತರ ಮೂರು ದಿನಗಳ ಕಾಲ ಬಿಸಿಸಿಐ ತರಬೇತಿ ನೀಡುತ್ತದೆ. ನಾಲ್ಕನೇ ದಿನ ಲಿಖಿತ ಪರೀಕ್ಷೆ ನಡೆಸುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಬಿಸಿಸಿಐ ಶಾರ್ಟ್ ಲಿಸ್ಟ್ ಮಾಡುತ್ತದೆ.
    ಬಿಸಿಸಿಐ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ವಿಶೇಷ ತರಬೇತಿಗೆ ಕರೆಯುತ್ತದೆ. ಅಲ್ಲಿ ಆಟದ ನಿಯಮಗಳು ಮತ್ತು ಇತರೆ ಪ್ರಮುಖ ವಿಷಯಗಳ ಬಗ್ಗೆ ತರಬೇತಿ ನೀಡುತ್ತದೆ. ನಂತರ ಅಭ್ಯರ್ಥಿಗಳು ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಈ ಎಲ್ಲಾ ಹಂತದ ಪರೀಕ್ಷೆಗಳಲ್ಲಿ ಯಶಸ್ವಿಯಾದರೆ ಮಾತ್ರ ಹಂತ-2 ಪರೀಕ್ಷೆಗೆ ಅರ್ಹರಾಗುತ್ತೀರಿ.

    ಎರಡನೇ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ವೈದ್ಯಕೀಯ ಪರೀಕ್ಷೆ ನಡೆಸುತ್ತದೆ. ಇದರಲ್ಲಿ ದೈಹಿಕ ಸಾಮರ್ಥ್ಯವನ್ನು ಪರಿಶೀಲಿಸಲಾಗುತ್ತದೆ. ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಮುಗಿಸಿದ ನಂತರ ಬಿಸಿಸಿಐ ನಿಮ್ಮನ್ನು ಅಂಪೈರ್ ಎಂದು ಪ್ರಕಟಿಸುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ಅನುಸರಿಸುವ ಮೂಲಕ ನೀವು ಅರ್ಹ ಕ್ರಿಕೆಟ್ ಅಂಪೈರ್ ಆಗಬಹುದು. ವಿವಿಧ ಹಂತಗಳಲ್ಲಿ ಪಂದ್ಯಗಳನ್ನು ನಿರ್ವಹಿಸಬಹುದು.

    ಅಂಪೈರ್ ಗೆ ಸಿಗುವ ಸಂಬಳ ಎಷ್ಟು :
    ಅಂಪೈರ್ ಗಳ ವೇತನವು ಅವರ ದರ್ಜೆ, ಅನುಭವ ಮತ್ತು ಹಿರಿತನದ ಮೇಲೆ ಅವಲಂಬಿತವಾಗಿರುತ್ತದೆ. ಬಿಸಿಸಿಐನ ವರದಿಗಳ ಪ್ರಕಾರ ಎ+ ಮತ್ತು ಎ ಗ್ರೇಡ್ ಅಂಪೈರ್ ಗಳು ದೇಶಿಯ ಪಂದ್ಯಗಳಿಗೆ ದಿನಕ್ಕೆ 40,000 ರೂಪಾಯಿ ಪಡೆಯುತ್ತಾರೆ. ಬಿ ಮತ್ತು ಸಿ ದರ್ಜೆಯ ಅಂಪೈರ್ ಗಳಿಗೆ ದಿನಕ್ಕೆ 30,000 ರೂಪಾಯಿ ನೀಡಲಾಗುತ್ತದೆ.
    ಅಂಪೈರ್ ನ ದಾಖಲೆ ಉತ್ತಮವಾಗಿದ್ದರೆ ಅವರನ್ನು ಐಸಿಸಿ ಪ್ಯಾನಲ್ ಗೆ ಸೇರಿಸಬಹುದು. ಐಸಿಸಿಯು ಪ್ರತಿ ಪಂದ್ಯಕ್ಕೆ 1.50 ರಿಂದ 2.20 ಲಕ್ಷ ರೂಪಾಯಿ ನೀಡುತ್ತದೆ. ವಾರ್ಷಿಕವಾಗಿ 75 ಲಕ್ಷಕ್ಕಿಂತ ಹೆಚ್ಚಾಗಿರುತ್ತದೆ.
    ನಿಮಗೆ ಕ್ರಿಕೆಟ್ ನಲ್ಲಿ ಆಸಕ್ತಿ ಇದ್ದು, ಟೀಂ ಇಂಡಿಯಾದಲ್ಲಿ ಆಡಲು ಅವಕಾಶ ವಂಚಿತರಾದರೆ, ನಿಮಗೆ ಅಂಪೈರ್ ವೃತ್ತಿಯನ್ನು ಆಯ್ದುಕೊಳ್ಳಬಹುದು.

    Click to comment

    Leave a Reply

    Your email address will not be published. Required fields are marked *

    International news

    7 ರನ್ ಗೆ ಆಲೌಟ್: ವಿಶ್ವದಾಖಲೆ ಸೃಷ್ಟಿಸಿದ ನೈಜೀರಿಯಾ !

    Published

    on

    ಮಂಗಳೂರು/ಲಾಗೋಸ್ : ಕ್ರಿಕೆಟ್ ನಲ್ಲಿ ಈಗಾಗಲೇ ಹಲವಾರು ದಾಖಲೆಗಳು ಇದೆ. ಆದರೆ ಟಿ20 ವಿಶ್ವಕಪ್ ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ನೈಜೀರಿಯಾ ತಂಡವು ಐವರಿ ಕೋಸ್ಟ್ ತಂಡವನ್ನು ಕೇವಲ 7 ರನ್ ಗಳಿಗೆ ಆಲೌಟ್ ಮಾಡುವ ಮೂಲಕ ವಿಶ್ವ ದಾಖಲೆ ಬರೆದಿದೆ.


    ಈ ಪಂದ್ಯವು ಲಾಗೋಸ್ ನಲ್ಲಿ ನಡೆಯಿತು. ಟಾಸ್ ಗೆದ್ದ ನೈಜೀರಿಯಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 271 ರನ್ ಕಲೆಹಾಕಿತು. ಸಲೀಂ 53 ಎಸೆತಗಳಲ್ಲಿ 112 ರನ್, ಐಸಕ್ ಒಕ್ಪೆ 23 ಎಸೆತಗಳಲ್ಲಿ 65 ರನ್, ಸುಲೈಮಾನ್ 50 ರನ್ ಸಿಡಿಸಿದ್ದರು.

    ಇದನ್ನೂ ಓದಿ: ಉಡುಪಿ: ಕಾಲಿವುಡ್ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ
    ಈ ಬೃಹತ್ ಗುರಿ ಬೆನ್ನಟ್ಟಿದ ಐವರಿ ಕೋಸ್ಟ್ ತಂಡವು 7.3 ಓವರ್ ಗಳಲ್ಲಿ ಕೇವಲ 7 ರನ್ ಗಳಿಸಿ ಆಲೌಟ್ ಆಯಿತು. ಈ ಮೂಲಕ ನೈಜೀರಿಯಾ ತಂಡವು 264 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಅಮೋಘ ಗೆಲುವಿನೊಂದಿಗೆ ಟಿ20 ಕ್ರಿಕೆಟ್ ನ ಇತಿಹಾಸದಲ್ಲಿ ಬೃಹತ್ ರನ್ ಗಳ ಅಂತರದಿಂದ ಗೆದ್ದ ದಾಖಲೆ ಪಟ್ಟಿಯಲ್ಲಿ ನೈಜೀರಿಯಾ ಮೂರನೇ ಸ್ಥಾನಕ್ಕೇರಿದೆ.

    ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಸ್ಕೋರ್ ಗೆ ಆಲೌಟ್ ಆದ ದಾಖಲೆ ಐವರಿ ಕೋಸ್ಟ್ ತಂಡ ಪಡೆದುಕೊಂಡಿದೆ. ಇದಕ್ಕೂ ಮುನ್ನ ಅತ್ಯಂತ ಕಡಿಮೆ ರನ್ ಗಳಿಗೆ ಆಲೌಟ್ ಆದ ದಾಖಲೆ ಮಂಗೋಲಿಯಾ ಹೆಸರಿನಲ್ಲಿತ್ತು. ಅದು ಕೇವಲ 10 ರನ್ ಗಳಿಗೆ ಆಲೌಟ್ ಆಗಿತ್ತು. ಈದೀಗ 7 ರನ್ ಗಳಿಗೆ ಆಲೌಟ್ ಆಗುವ ಮೂಲಕ ಐವರಿ ಕೋಸ್ಟ್ ತಂಡ ಮೊದಲ ಸ್ಥಾನ ಪಡೆದಿದೆ.

    Continue Reading

    International news

    14 ಬಾರಿಯ ಒಲಿಂಪಿಕ್ ಪದಕ ವಿಜೇತೆ ವಿದಾಯ !

    Published

    on

    ಮಂಗಳೂರು/ಸಿಡ್ನಿ: ಆಸ್ಟ್ರೇಲಿಯಾದ ಸ್ಟಾರ್ ಒಲಿಂಪಿಯನ್ ‘ಎಮ್ಮಾ ಮೆಕ್ ಕೀನ್’ ಸೋಮವಾರ ಸ್ಪರ್ಧಾತ್ಮಕ ಈಜು ಸ್ಪರ್ಧೆಗೆ ವಿದಾಯ ಘೋಷಿಸಿದ್ದಾರೆ.

    ಮೆಕ್ ಕಿಯಾನ್ ಮೂರು ಬೇಸಿಗೆ ಒಲಿಂಪಿಕ್ಸ್ ಗಳಲ್ಲಿ 14 ಒಲಿಂಪಿಕ್ ಪದಕಗಳ ಗೆದ್ದ ದಾಖಲೆಯನ್ನು ಹೊಂದಿದ್ದಾರೆ.

    ಇದನ್ನೂ ಓದಿ:ಯಶ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ ಖ್ಯಾತ ಕ್ರಿಕೆಟಿಗನ ಪತ್ನಿ
    ಇವರ ಪದಕಗಳ ಪಟ್ಟಿಯಲ್ಲಿ ಆರು ಚಿನ್ನದ ಪದಕಗಳು, ಮೂರು ಬೇಸಿಗೆ ಒಲಿಂಪಿಕ್ ಗಳಲ್ಲಿ ಪದಕ ಬಂದಿದೆ. ಇನ್ನೂ ಟೋಕಿಯೊ ಒಲಿಂಪಿಕ್ 2020ರಲ್ಲಿ, ಎಮ್ಮಾ ಏಳು ಪದಕ ಗೆಲ್ಲುವುದರೊಂದಿಗೆ ಒಂದೇ ಕ್ರೀಡಾಕೂಟದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ.

    Continue Reading

    International news

    ನಿನ್ನೆಯ ಹರಾಜಿನಲ್ಲಿ ಆರ್ ಸಿಬಿ ಖರೀದಿಸಿದ ಆಟಗಾರರು ಇವರೇ !

    Published

    on

    ಮಂಗಳೂರು/ಸೌದಿ ಅರೇಬಿಯಾ: ಐಪಿಎಲ್ ಸೀಸನ್ 18ರ ಹರಾಜು ಪ್ರಕ್ರಿಯೆ ನಿನ್ನೆಯಿಂದಲೇ ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 72 ಆಟಗಾರರು ಹರಾಜಾಗಿದ್ದು, ಅದರಲ್ಲಿ ಆರ್ ಸಿಬಿಗೆ ಯಾರೆಲ್ಲಾ ಆಟಗಾರರು ಬಂದಿದ್ದಾರೆ ಇಲ್ಲಿದೆ ನೋಡಿ.


    ಮೆಗಾ ಹರಾಜು ಪ್ರಕ್ರಿಯೆ ಇವತ್ತು ಕೂಡ ಮುಂದುವರಿಯಲ್ಲಿದ್ದು, ನಿನ್ನೆಯ ಹರಾಜಿನಲ್ಲಿ ರಿಷಭ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ದಾಖಲೆಯ ಮೊತ್ತಕ್ಕೆ ಮಾರಾಟವಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಆದರೆ ಆರ್ ಸಿಬಿಯ ಅಭಿಮಾನಿಗಳಿಗೆ ಶಾಕ್ ಎದುರಾಗಿತ್ತು. ಕನ್ನಡಿಗ ಕೆ. ಎಲ್ ರಾಹುಲ್ ಈ ಬಾರಿಯಾದರು ಆರ್ ಸಿಬಿಗೆ ಬರಬಹುದು ಎಂಬ ನಿರೀಕ್ಷೆ ಈಡೆರಲಿಲ್ಲ.
    ಅಲ್ಲದೆ, ಪ್ರಮುಖ ಆಟಗಾರರದ ರಿಷಭ್ ಪಂತ್, ಜೋಸ್ ಬಟ್ಲರ್, ಮಾಜಿ ಆಟಗಾರ ಯಜುವೇಂದ್ರ ಚಹಲ್ ರವರನ್ನು ಖರೀದಿಸಲು ವಿಫಲವಾಯಿತು. ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಅವರನ್ನು ಆರ್ ಟಿಎಂ ಬಳಸಿ ಉಳಿಸಿಕೊಳ್ಳದ ಆರ್ ಸಿಬಿ ಮ್ಯಾನೆಜ್ ಮೆಂಟ್ ನಿರ್ಧಾರಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದರು.

    ಇನ್ನೂ ಮೊದಲನೇ ದಿನದ ಹರಾಜು ಪ್ರಕ್ರಿಯೆಯಲ್ಲಿ ಆರ್ ಸಿಬಿ 6 ಆಟಗಾರರನ್ನು ಖರೀದಿಸಿತು. ಅದರಲ್ಲಿ ಮೂವರು ವಿದೇಶಿಯರು ಹಾಗೂ ಉಳಿದ ಮೂವರು ಭಾರತೀಯ ಆಟಗಾರರಾಗಿದ್ದಾರೆ.

    ಇದನ್ನೂ ಓದಿ: ಎಲನ್ ಮಸ್ಕ್ ಗೆ ಇಷ್ಟವಾದ ಭಾರತದ ಚುನಾವಣಾ ಪ್ರಕ್ರಿಯೆ!

    ಮೊದಲ ದಿನದ ಹರಾಜಿನಲ್ಲಿ ಆರ್ ಸಿಬಿ ಖರೀದಿಸಿದ ಆಟಗಾರರು ಇವರೇ :

    1.ಲಿಯಾಮ್ ಲಿವಿಂಗ್ ಸ್ಟೋನ್- ರೂ 8.75 ಕೋಟಿ
    2.ಫಿಲ್ ಸಾಲ್ಟ್- ರೂ. 11.5 ಕೋಟಿ
    3.ಜಿತೇಶ್ ಶರ್ಮಾ- ರೂ. 11 ಕೋಟಿ
    4.ಜೋಶ್ ಹ್ಯಾಜಲ್ ವುಡ್- ರೂ. 12.5 ಕೋಟಿ
    5.ಅನೂಜ್ ರಾವತ್- ರೂ. 30 ಲಕ್ಷ
    6.ರಾಸಿಖ್ ಸಲಾಮ್ ದಾರ್-ರೂ. 6ಕೋಟಿ
    7.ಸುಯಾಶ್ ಶರ್ಮಾ-ರೂ. 2.6ಕೋಟಿ

    Continue Reading

    LATEST NEWS

    Trending