Home ಕರ್ನಾಟಕ ವಾರ್ತೆ ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು ಸ್ವಯಂಪ್ರೇರಿತ ದೂರು ದಾಖಲಿಸಿ, ನಿನ್ನೆ ತಡರಾತ್ರಿಯೇ ನ್ಯಾಯಾದೀಶರ ಮುಂದೆ ಹಾಜರು ಪಡಿಸಿದ್ದಾರೆ.

ಇನ್ನು ಇಂದು ಅಮೂಲ್ಯಳನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ಬೆಂಗಳೂರಿನ 5ನೇ ಎಸಿಎಂಎ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅಮೂಲ್ಯ ತಂದೆ ಓಜ್‌ವರ್ಲ್ಡ್, ಅವರು ಮಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗಳು ಪ್ರತಿಭಟನೆಯಲ್ಲಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದು ತಪ್ಪು. ಅದಕ್ಕೆ ನಾನು ಕ್ಷಮೆಯಾಚಿಸುತ್ತೇನೆ. ನನ್ನ ಮಗಳಿಗೆ ತಕ್ಕ ಶಿಕ್ಷೆಯಾಗಬೇಕು. ನಾನು ಅವಳಿಗೆ ಬೇಲ್​ ಕೊಡುವುದಿಲ್ಲ. ಆಕೆ ಹೇಳಿದ್ದು ಅಕ್ಷಮ್ಯ ಅಪರಾಧ. ಅಮೂಲ್ಯಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದಿದ್ದಾರೆ.

ಇನ್ನು ಅಮೂಲ್ಯಳ ಹೇಳಿಕೆಯಿಂದ ಸಿಎಎ ವಿರುದ್ಧ ಹೋರಾಟ ಮಾಡುತ್ತಿರುವ ಕಾಂಗ್ರೆಸ್‌ ಸೇರಿದಂತೆ ಅನೇಕ ರಾಜಕೀಯ ಪಕ್ಷಗಳು, ಸಂಘಟನೆಗಳಿಗೆ ಇರಿಸು ಮುರುಸಾಗಿದ್ದು, ಅವಳ ವಿಚಾರವಾಗಿ ಕಾಯ್ದುಕೊಂಡಿದ್ದಾರೆ. ಅಲ್ಲದೆ ಅಮೂಲ್ಯ ಪರವಾಗಿ ಅಥವಾ ನಿನ್ನೆ ನಡೆದ ಘಟನೆಯನ್ನು ಸಮರ್ಥಿಸಿಕೊಂಡು ಯಾವುದೇ ಹೇಳಿಕೆ ನೀಡದಂತೆ ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...