ಮಂಗಳೂರು: ಕಾಸರಗೋಡಿನ ಮಂಜೇಶ್ವರದಲ್ಲಿ ಎ.6ರಂದು ನಡೆದಿದ್ದ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ಮೃತ ಯುವಕನನ್ನು ಮಂಜನಾಡಿ ಸಮೀಪದ ಹಸನ್ ಅನ್ಸಾರ್ (22) ಎಂದು ಗುರುತಿಸಲಾಗಿದೆ.
ಎ.6ರಂದು ಮಂಜೇಶ್ವರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಹಸನ್ ಅನ್ಸಾರ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿ ಆಗದೆ ಸೋಮವಾರ ರಾತ್ರಿ ಹಸನ್ ಅನ್ಸಾರ್ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.